ದಾವೋಸ್ | ಎನ್.ಟಿ.ಟಿ. ಡೇಟಾದಿಂದ 2 ಬಿಲಿಯನ್ ಡಾಲರ್, ಆ್ಯಬ್ ಸಮೂಹದಿಂದ 400 ಕೋಟಿ ರೂ. ಹೂಡಿಕೆಗೆ ಅಸ್ತು: ಸಚಿವ ಎಂ ಬಿ ಪಾಟೀಲ್

Date:

ಸ್ವಿಟ್ಜರ್ಲೆಂಡಿನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದ ಮೂರನೆಯ ದಿನವಾದ ಬುಧವಾರ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ನೇತೃತ್ವದ ನಿಯೋಗವು ಎಚ್.ಪಿ., ಆ್ಯಬ್ ಇನ್ಬೇವ್ ಬ್ರೂವರೀಸ್, ಎಚ್.ಸಿ.ಎಲ್, ಗೆನಾತ್ರಿ (ಪೆಟ್ರೋನಾಸ್), ಎನ್.ಟಿ.ಟಿ. ಡೇಟಾ, ಸಿಸ್ಕೋ, ಸ್ವಿಗ್ಗಿ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳೊಂದಿಗೆ ಮಾತುಕತೆ ನಡೆಸಿ, ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸಿದೆ.

- Advertisement -

ಈ ಬಗ್ಗೆ ಅಲ್ಲಿಂದ ಮಾಹಿತಿ ನೀಡಿರುವ ಸಚಿವ ಪಾಟೀಲ್ ಅವರು, “ಪಾನೀಯಗಳ ತಯಾರಿಕೆಗೆ ಹೆಸರಾಗಿರುವ ಆ್ಯಬ್ ಇನ್ಬೇವ್ ಇಂಡಿಯಾ ಕಂಪನಿಯು ರಾಜ್ಯದಲ್ಲಿ ತನ್ನ ಉತ್ಪಾದನೆ ಹೆಚ್ಚಿಸಲು 400 ಕೋಟಿ ರೂ. ಹೂಡಲು ಒಪ್ಪಿಕೊಂಡಿದೆ. ಜೊತೆಗೆ, ಈಗಾಗಲೇ ರಾಜ್ಯದಲ್ಲಿ 900 ಮಿಲಿಯನ್ ಡಾಲರ್ ಹೂಡಿಕೆ ಮಾಡಿರುವ ಎನ್.ಟಿ.ಟಿ. ಡೇಟಾ ಕಂಪನಿಯು ಮುಂಬರುವ ವರ್ಷಗಳಲ್ಲಿ ನಮ್ಮಲ್ಲಿ ಇನ್ನೂ 2 ಬಿಲಿಯನ್ ಡಾಲರ್ ಬಂಡವಾಳ ತೊಡಗಿಸಲು ತೀರ್ಮಾನಿಸಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಎಚ್.ಪಿ. (ಹ್ಯೂಲೆಟ್ ಪೆಕಾರ್ಡ್) ಕಂಪನಿಯು ಇನ್ನೂ 4,000 ಉದ್ಯೋಗಗಳನ್ನು ಸೃಷ್ಟಿಸಲು ನಿರ್ಧರಿಸಿದ್ದು, ಬೆಂಗಳೂರಿನ ಮಹದೇವಪುರದಲ್ಲಿ ಹೊಸದಾಗಿ ಎರಡು ಸುಸಜ್ಜಿತ ಕಚೇರಿಗಳನ್ನು ಆರಂಭಿಸಲಿದೆ. ಜೊತೆಗೆ ಮೈಸೂರಿನಲ್ಲಿ ಸರ್ವರ್ ತಯಾರಿಕಾ ಘಟಕ ಆರಂಭಿಸಲು ಅದು ಮಾತುಕತೆ ನಡೆಸುತ್ತಿದೆ. ಇದು ಸಾಧ್ಯವಾದರೆ 1 ಬಿಲಿಯನ್ ಡಾಲರ್ ವಾರ್ಷಿಕ ವಹಿವಾಟು ಸಾಧ್ಯವಾಗಲಿದೆ. ಅಲ್ಲದೆ, ಎಚ್.ಪಿ ಕಂಪನಿಯು ರಾಜ್ಯದಲ್ಲಿ ತನ್ನ ‘ಗ್ಲೋಬಲ್ ಲೀಡರ್ ಶಿಪ್’ ಕಚೇರಿ ಹೊಂದಲು ಮನಸ್ಸು ಮಾಡಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

“ಪೆಟ್ರೋನಾಸ್ (ಗೆನಾತ್ರಿ) ಕಂಪನಿಯು ಶುದ್ಧ ಇಂಧನ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದು, ರಾಜ್ಯದಲ್ಲಿ ಈ ವರ್ಷದ ಕೊನೆಯ ಹೊತ್ತಿಗೆ 30 ಗಿಗಾವ್ಯಾಟ್ ಮರುಬಳಕೆ ಮಾಡಬಹುದಾದ ಇಂಧನ ತಯಾರಿಸುವ ಗುರಿ ಹೊಂದಿದೆ. ಅಲ್ಲದೆ, ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ತ್ಯಾಜ್ಯ ನಿರ್ವಹಣೆಯನ್ನು ಅದು ವೈಜ್ಞಾನಿಕವಾಗಿ ಮಾಡಲು ಆಸಕ್ತಿ ಹೊಂದಿದೆ. ಈ ನಿಟ್ಟಿನಲ್ಲಿ ಅದು ರಾಜ್ಯ ಸರಕಾರದೊಂದಿಗೆ ಸಹಭಾಗಿತ್ವ ಹೊಂದಲು ಬಯಸಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಂಧಿ ಪ್ರಣೀತ ರಾಮನೇ ಬೇರೆ; ಮೋದಿ ರಾಮನೇ ಬೇರೆ

“ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಸಿಸ್ಕೋ, ನಗರ ಸಂಚಾರ ವ್ಯವಸ್ಥೆಯೊಂದಿಗೆ ಸ್ವಿಗ್ಗಿ ವಿದ್ಯುತ್ ಚಾಲಿತ ವಾಹನ ಕ್ಷೇತ್ರದಲ್ಲಿ ವೋಲ್ವೋ ಕಂಪನಿಗಳು ಹೆಚ್ಚಿನ ಬಂಡವಾಳ ಹೂಡಲು ಮುಂದೆ ಬಂದಿವೆ. ಇವುಗಳ ಹೂಡಿಕೆ ಪ್ರಸ್ತಾವನೆಗೆ ರಾಜ್ಯ ಸರಕಾರವು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲ ಬಗೆಯ ಸಹಕಾರ ಕೊಡುವ ಭರವಸೆ ನೀಡಲಾಗಿದೆ” ಎಂದು ಪಾಟೀಲ ವಿವರಿಸಿದ್ದಾರೆ.

“ಈ ಹೂಡಿಕೆಗಳ ಸಂಬಂಧವಾಗಿ ಎಚ್.ಸಿಎಲ್ ಕಂಪನಿಯ ಮುಖ್ಯಸ್ಥ ಬಾಲಸುಬ್ರಮಣಿಯನ್, ಪೆಟ್ರೋನಾಸ್ ಕಂಪನಿಯ ಸಿಇಒ ಸುಶೀಲ್ ಪುರೋಹಿತ್, ಸಿಸ್ಕೋದ ಪ್ರಧಾನ ವ್ಯವಸ್ಥಾಕಪ ಜೀತು ಪಟೇಲ್ ಮುಂತಾದವರೊಂದಿಗೆ ವಿಸ್ತೃತ ಮಾತುಕತೆ ನಡೆಸಲಾಗಿದೆ” ಎಂದು ಸಚಿವರು ಹೇಳಿದ್ದಾರೆ.

ದಾವೋಸ್ ಶೃಂಗಸಭೆಗೆ ರಾಜ್ಯದಿಂದ ತೆರಳಿರುವ ನಿಯೋಗದಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಮಹೇಶ್ ಇದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...