ಜಾತಿ ಜನಗಣತಿಗೆ ಪ್ರಧಾನಿ ಮೋದಿ ಶ್ಲಾಘನೆ; ಸಮೀಕ್ಷೆ ಬೇಡಿಕೆ ಟೀಕಿಸಿದ್ದ ಹಳೆ ವಿಡಿಯೋ ಪೋಸ್ಟ್ ಮಾಡಿದ ಕಾಂಗ್ರೆಸ್

Date:

Advertisements

ದಿನಕ್ಕೊಂದು ವಿಭಿನ್ನ ಅಭಿಪ್ರಾಯವನ್ನು ತಳೆಯುವ ಮೂಲಕವೇ ಪ್ರಧಾನಿ ನರೇಂದ್ರ ಮೋದಿ ಟ್ರೋಲ್‌ಗೆ ಒಳಗಾಗುತ್ತಾರೆ. ಇದೀಗ ಜಾತಿ ಜನಗಣತಿ ಬಗ್ಗೆ ತಾನೇ ನೀಡಿದ ಎರಡು ವಿಭಿನ್ನ ಹೇಳಿಕೆ ವಿಚಾರದಲ್ಲಿ ಪೇಚಿಗೆ ಸಿಲುಕಿದ್ದಾರೆ. ಈ ಹಿಂದೆ ಜಾತಿ ಜನಗಣತಿಯನ್ನು ಟೀಕಿಸಿದ್ದ ಪ್ರಧಾನಿ ಮೋದಿ ಈಗ ಜಾತಿ ಜನಗಣತಿಯನ್ನು ಶ್ಲಾಘಿಸಿದ್ದಾರೆ.

ಜಾತಿ ಜನಗಣತಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ ಒಂದು ದಿನದ ನಂತರ ಕಾಂಗ್ರೆಸ್ ಸೋಮವಾರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ಪ್ರಧಾನಿ ಜಾತಿ ಜನಗಣತಿಯನ್ನು ತೆಗಳಿದ್ದ, ಹೊಗಳಿದ್ದ ಎರಡೂ ವಿಡಿಯೋಗಳನ್ನು ಪೋಸ್ಟ್ ಮಾಡಿದೆ.

ಇದನ್ನು ಓದಿದ್ದೀರಾ? ಜಾತಿ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಪ್ರಿಯಾಂಕಾ ಗಾಂಧಿ

Advertisements

ಜಾತಿ ಜನಗಣತಿಯು ಹಿಂದುಳಿದವರನ್ನು ಅಭಿವೃದ್ಧಿಯ ಮುಖ್ಯವಾಹಿನಿಗೆ ತರುವತ್ತ ಒಂದು ಹೆಜ್ಜೆಯಾಗಿದೆ. ನಮ್ಮ ಸರ್ಕಾರ ಜಾತಿ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ. ಬದಲಿಗೆ ಹಿಂದುಳಿದವರ ಸಬಲೀಕರಣದಲ್ಲಿ ನಾವು ನಂಬಿಕೆ ಇಡುತ್ತೇವೆ ಎಂದು ಪ್ರಧಾನಿ ಮೋದಿ ಭಾನುವಾರ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪ್ರಧಾನಿ ಮೋದಿ ಅವರ ಎರಡು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. “2025ರ ಏಪ್ರಿಲ್ 30ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ್ ಆರಂಭದ ನಡುವಿನ ಅವಧಿಯಲ್ಲಿ ಮೋದಿ ಸರ್ಕಾರ ಅನಿರೀಕ್ಷಿತವಾಗಿ ಮತ್ತು ಇದ್ದಕ್ಕಿದ್ದಂತೆ ಜಾತಿ ಜನಗಣತಿಯನ್ನು ಘೋಷಿಸಿದೆ. ಇದರ ಪೂರ್ಣ ಕೀರ್ತಿಯನ್ನು ತಾವೇ ಹೊತ್ತಿಕೊಳ್ಳುವ ಯತ್ನವನ್ನು ಮೋದಿ ಮಾಡಿದ್ದಾರೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ಮೊದಲ ಕ್ಲಿಪ್‌ನಲ್ಲಿ 2023ರ ಅಕ್ಟೋಬರ್‌ನಲ್ಲಿ ಪ್ರಧಾನಿ ಮೋದಿ ಅವರು ಬಿಹಾರದಲ್ಲಿ ಜಾತಿ ಜನಗಣತಿ ನಡೆದ ಸಂದರ್ಭದಲ್ಲಿ ಆಡಿರುವ ಮಾತುಗಳು. ಎರಡನೇ ಕ್ಲಿಪ್‌ನಲ್ಲಿ 2024ರ ಏಪ್ರಿಲ್ 28ರಂದು ಜಾತಿ ಜನಗಣತಿಗಾಗಿ ಕಾಂಗ್ರೆಸ್ ಬೇಡಿಕೆ ಇಟ್ಟಾಗ ಮೋದಿ ಏನು ಹೇಳಿದ್ದಾರೆ ನೋಡಿ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ನೈಜ ಸಮಸ್ಯೆ ಮರೆಮಾಚಲು, ಜನರ ಗಮನ ಬೇರೆಡೆ ಸೆಳೆಯಲು ಮೋದಿ ಬಳಸುತ್ತಿರುವ ಐದು ಆಸನಗಳು

ಮೊದಲ ವಿಡಿಯೋದಲ್ಲಿ ಪ್ರಧಾನಿ ಮೋದಿ ಅವರು, “ಅವರು(ವಿಪಕ್ಷ) ಜಾತಿ ಆಧಾರದಲ್ಲಿ ಸಮಾಜವನ್ನು ಒಡೆಯುವ ಯತ್ನ ಮಾಡುತ್ತಿದ್ದರು. ಆ ಪಾಪವನ್ನು ಇಂದಿಗೂ ಮುಂದುವರೆಸಿದ್ದಾರೆ” ಎಂದು ಹೇಳಿದ್ದಾರೆ. ಇನ್ನೊಂದು ವಿಡಿಯೋದಲ್ಲಿ, ಜಾತಿ ಜನಗಣತಿ ನಡೆಸಲು ಕಾಂಗ್ರೆಸ್‌ನ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ, “ಇದು ನಗರ ನಕ್ಸಲಿಗರ ಮನಸ್ಥಿತಿ” ಎಂದಿದ್ದರು. ಆದರೆ ಇದೀಗ ಅದೇ ಜಾತಿ ಜನಗಣತಿಯನ್ನು ಹೊಗಳುತ್ತಾ, ಅದರ ಶ್ರೇಯಸ್ಸನ್ನು ತನ್ನ ಸರ್ಕಾರಕ್ಕೆ ಗಿಟ್ಟಿಸಿಕೊಳ್ಳುವ ಯತ್ನವನ್ನು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಬಿಜೆಪಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಆದರೆ ಮೋದಿಯ ಈ ಹೇಳಿಕೆಯಿಂದಾಗಿ ಬಿಜೆಪಿ ನಾಯಕರು ಮಾತ್ರ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಇನ್ನು ಭಾನುವಾರ ನಡೆದ ಸಭೆಯ ನಂತರ ಜಾತಿ ಜನಗಣತಿ ಮಿತ್ರ ಪಕ್ಷದ ಕಲ್ಪನೆಯ ಭಾಗವಾಗಿದೆ ಎಂದು ಹೇಳಿಕೊಂಡಿದ್ದಾರೆ. ಹಾಗೆಯೇ ಜೆಡಿ(ಯು) ನಾಯಕ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಮೊದಲ ಬಾರಿಗೆ ಜಾತಿ ಜನಗಣತಿ ಮಾಡಿರುವುದು ಎಂದಿದ್ದಾರೆ.

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ದೇಶದಾದ್ಯಂತ ಜಾತಿ ಗಣತಿಯನ್ನು ನಡೆಸುವಂತೆ ಒತ್ತಾಯಿಸುತ್ತಿದ್ದವು. ಚುನಾವಣೆಯಲ್ಲಿ ಪ್ರಮುಖ ವಿಚಾರ ಇದಾಗಿತ್ತು. ಇನ್ನು ಈಗಾಗಲೇ ಬಿಹಾರ, ತೆಲಂಗಾಣ ಮತ್ತು ಕರ್ನಾಟಕದಂತಹ ಕೆಲವು ರಾಜ್ಯಗಳು ಜಾತಿ ಜನಗಣತಿ ಸಮೀಕ್ಷೆಗಳನ್ನು ನಡೆಸಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X