ಸಂಸದ ರಾಘವೇಂದ್ರ ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ: ಡಿಸಿಎಂ ಡಿ ಕೆ ಶಿವಕುಮಾರ್

Date:

“ಸಂಸದ ರಾಘವೇಂದ್ರ ಅವರು ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲಹೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

- Advertisement -

ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಕಿರುಕುಳ ಹೆಚ್ಚಾಗಿದೆ ಎಂದು ಈ ಹಿಂದೆ ಸಂಸದ ಬಿ ವೈ ರಾಘವೇಂದ್ರ ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, “ರಾಘವೇಂದ್ರರ ಬಳಿ ದಾಖಲೆಗಳಿದ್ದರೆ ಅದನ್ನು ಬಿಡುಗಡೆ ಮಾಡಿ ಆರೋಪ ಮಾಡಲಿ” ಎಂದು ಸವಾಲೆಸೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? 100 ಕೋಟಿ ಆಫರ್ ಆರೋಪ: ‘ವಕೀಲ ದೇವರಾಜೇಗೌಡ ಮೆಂಟಲ್ ಕೇಸ್’ ಎಂದ ಡಿಸಿಎಂ ಡಿ ಕೆ ಶಿವಕುಮಾರ್‌

ಹಾಗೆಯೇ “ಹಿಟ್ ಅಂಡ್ ರನ್ ಮಾಡುವ ಒಂದಷ್ಟು ನಾಯಕರಿದ್ದಾರಲ್ಲಾ ಅವರಂತೆ ರಾಘವೇಂದ್ರ ಅವರು ಆಗುವುದು ಬೇಡ. ರಾಘವೇಂದ್ರ ಅವರ ಹೆಸರು ಸುಳ್ಳಿಗೆ ಮತ್ತೊಂದು‌ ಉದಾಹರಣೆಯಂತಾಗುವುದು ಬೇಡ” ಎಂದು ತಿರುಗೇಟು ನೀಡಿದರು.

ಜಾಗರೂಕತೆಯಿಂದ ಪಟಾಕಿ ಸಿಡಿಸಿ:

“ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ಆದಷ್ಟು ಜಾಗರೂಕತೆಯಿಂದ ಪಟಾಕಿ ಸಿಡಿಸಬೇಕು. ಹಸಿರು ಪಟಾಕಿಯನ್ನು ಮಾತ್ರ ಬಳಸಬೇಕು. ಈಗಾಗಲೇ ಸಣ್ಣಪುಟ್ಟ ಅವಘಡಗಳ ಸುದ್ದಿ ಕೇಳಿಬರುತ್ತಿದೆ. ಯಾವುದೇ‌ ಸಿಡಿಮದ್ದುಗಳನ್ನು ಸಿಡಿಸುವ ಸಂದರ್ಭದಲ್ಲಿಯೂ ಎಚ್ಚರವಿರಲಿ. ಈ ವರ್ಷ ರಾಜ್ಯದಲ್ಲಿ ಉತ್ತಮವಾಗಿ ಮಳೆ ಬಂದಿದೆ. ಸಮೃದ್ಧಿಯಾಗಿ ಬೆಳೆ ಬಂದಿದೆ. ಪ್ರತಿವರ್ಷವೂ ಸಮೃದ್ಧಿಯಾಗಿರಲಿ” ಎಂದು ಪ್ರಾರ್ಥಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...