ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಉಪ್ಪಿಟ್ಟು ಕೇಸರಿಬಾತ್ ಸವಿದ ಡಿಸಿಎಂ ಡಿ ಕೆ ಶಿವಕುಮಾರ್‌

Date:

ಬೆಂಗಳೂರಿನ ತುಮಕೂರು ರಸ್ತೆಯಲ್ಲಿರುವ ದಾಸರಹಳ್ಳಿ ಇಂದಿರಾ ಕ್ಯಾಂಟೀನ್​ಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭಾನುವಾರ ಬೆಳಗ್ಗೆ ಭೇಟಿ ನೀಡಿ ಉಪಹಾರ ಸವಿದರು.

- Advertisement -

ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಭಾನುವಾರ ಬೆಳಗ್ಗೆ ದಿಢೀರ್ ಬೆಂಗಳೂರು ಪ್ರದಕ್ಷಣೆ ಹಮ್ಮಿಕೊಂಡು ಪಾಲಿಕೆಯ ಯಾವುದೇ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮುನ್ಸೂಚನೆ ನೀಡದೆ ಮೊದಲಿಗೆ ದಾಸರಹಳ್ಳಿ ವಲಯದ ವಾರ್ಡ್ ಸಂಖ್ಯೆ 39 ಚೊಕ್ಕಸಂದ್ರದ ಇಂದಿರಾ ಗಾಂಧಿ ಕ್ಯಾಂಟೀನ್ ಪರಿಸ್ಥಿತಿ ಪರಿಶೀಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ತಿಂಡಿ‌ ಕೇಳಿದರು. ಅದಾಗಲೇ ತಿಂಡಿ ಖಾಲಿ ಆಗಿತ್ತು. ಈ ವೇಳೆ ಎಷ್ಟು ಪ್ಲೇಟ್ ಬರುತ್ತದೆ ಎಂದು ಕ್ಯಾಂಟೀನ್ ಮ್ಯಾನೇಜರ್ ಗೆ ಕೇಳಿದಾಗ 208 ಪ್ಲೇಟ್ ಬಂದು ಖಾಲಿ ಆಗಿದೆ ಎಂದಾದ ತಿಂಡಿ ಪೂರೈಕೆಯನ್ನು ಖಾತರಿಪಡಿಸಿಕೊಳ್ಳಲು ಸೂಚನೆ ನೀಡಿದರು.

ನಂತರ ದಾಸರಹಳ್ಳಿಯ 15ನೇ ವಾರ್ಡ್ ಕ್ಯಾಂಟೀನ್ ಗೆ ಭೇಟಿ ನೀಡಿ ಉಪ್ಪಿಟ್ಟು, ಕೇಸರಿಬಾತ್ ಸವಿದರು. ಈ ಸಂದರ್ಭದಲ್ಲಿ ಪಕ್ಕದಲ್ಲಿ ತಿಂಡಿ ತಿನ್ನುತ್ತಿದ್ದವರನ್ನು ಮಾತನಾಡಿಸಿ ಮಾಹಿತಿ ಪಡೆದರು. ಬಳಿಕ ಪ್ರತಿ ವಾರ, ತಿಂಗಳಿಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸುವಂತೆ ಪಾಲಿಕೆ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಾಂಗ್ರೆಸ್ ಕೊಡುಗೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ

ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿರುವ ಕುರಿತು ಟ್ವೀಟ್‌ ಮಾಡಿರುವ ಡಿ ಕೆ ಶಿವಕುಮಾರ್‌, “ಇಂದು ನಗರ‌ ಪ್ರದಕ್ಷಿಣೆ ನಿಮಿತ್ತ ಮಾಗಡಿ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುತ್ತಿದ್ದು, ಇದಕ್ಕೂ ಮುನ್ನ ಚೊಕ್ಕಸಂದ್ರದ ಇಂದಿರಾ ಕ್ಯಾಂಟೀನ್ ನಲ್ಲಿ ಉಪಾಹಾರ ಸೇವಿಸಿದೆ. ಲಕ್ಷಾಂತರ ಬಡವರ ಹಸಿವು ನೀಗಿಸುತ್ತಿರುವ ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಪಕ್ಷದ ಮಹತ್ತರ ಕೊಡುಗೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ” ಎಂದಿದ್ದಾರೆ.

ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ. ಅನುದಾನ

ನಗರ ಪ್ರದೇಶದ ಬಡವರು ಮತ್ತು ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ, ಉಪಾಹಾರ ಒದಗಿಸುವ ಉದ್ದೇಶದಿಂದ ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಆರಂಭವಾಗಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ 100 ಕೋಟಿ ರೂ. ಮೀಸಲಿಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬಜೆಟ್‌ 23-24 | ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ ಪುನಾರಂಭಕ್ಕೆ 100 ಕೋಟಿ ರೂ. ಅನುದಾನ

ಘನತ್ಯಾಜ್ಯ ಸಂಸ್ಕರಣಾ ಘಟಕಗಳ ಪರಿಶೀಲನೆ

ಸೀಗೇಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 120 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಮಾರ್ಥ್ಯವಿದ್ದು, ಸದ್ಯ ಸಂಸ್ಕರಣಾ ಘಕಟವು ಚಾಲ್ತಿಯಲ್ಲಿ‌ ಇರುವುದಿಲ್ಲ. ಅದನ್ನು ಕೂಡಲೆ ಪ್ರಾರಂಭಿಸಲು ಸೂಚನೆ ನೀಡಿದರು.

ಕನ್ನಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 350 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಂಸ್ಕರಿಸುವ ಸಾಮರ್ಥ್ಯವಿದ್ದು, ಪ್ರತಿನಿತ್ಯ 350 ಮೆಟ್ರಿಕ್ ಟನ್ ಸಂಸ್ಕರಣೆ ಮಾಡಲಾಗುತ್ತಿದೆ. ಪ್ರತಿನಿತ್ಯ ನಿತ್ಯ ಎಷ್ಟು ಕಾಂಪ್ಯಾಕ್ಟರ್ ಬರುತ್ತದೆ, ಅದಕ್ಕೆ ಅಳವಡಿಸಿರುವ ಜಿ.ಪಿ.ಎಸ್ ಅನ್ನು ಪರಿಶೀಲಿಸಿದರು.

ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 150 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಂಸ್ಕರಿಸುವ ಸಾಮರ್ಥ್ಯವಿದ್ದು, ಪ್ರತಿನಿತ್ಯ 110 ಮೆಟ್ರಿಕ್ ಟನ್ ಸಂಸ್ಕರಣೆ ಮಾಡಲಾಗುತ್ತಿದ್ದು, ಅದನ್ನು‌ ಪರಿಶೀಲನೆ ನಡೆಸಿದರು.

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಘನತ್ಯಾಜ್ಯ ಸಂಗ್ರಹ ಹೆಚ್ಚಳವಾಗುತ್ತಿದ್ದು, ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಕುರಿತು ಗಂಭೀರ ಚಿಂತನೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಡಾ. ಹರಿಶ್ ಕುಮಾರ್, ವಲಯ ಜಂಟಿ ಆಯುಕ್ತ ಜಗದೀಶ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...