ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸುವುದು ಮೊದಲೇ ಗೊತ್ತಿದ್ದಿದ್ದರೆ ಸುಲಭವಾಗುತ್ತಿತ್ತು: ಡಿ ಕೆ ಶಿವಕುಮಾರ್

Date:

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿಗೆ ದೊಡ್ಡ ಸವಾಲು ಎದುರಾಗಿದೆ.

ಈ ವಿಚಾರದ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್, “ದಿಂಗಾಲೇಶ್ವರ ಸ್ವಾಮೀಜಿ ಈಗ ಚುನಾವಣೆ ಸ್ಪರ್ಧಿಸುವ ತೀರ್ಮಾನ ಮಾಡಿದ್ದು, ಈ ಬಗ್ಗೆ ಅನೇಕರು ನನಗೆ ಸಲಹೆ ನೀಡಿದ್ದಾರೆ. ಕೇಂದ್ರ ಚುನಾವಣಾ ಸಮಿತಿ ನಿರ್ಧಾರದಂತೆ ನಾವು ಈಗಾಗಲೇ ಆನಂದ್ ಅಸೂಟಿ ಅವರಿಗೆ ಬಿ ಫಾರಂ ನೀಡಿದ್ದೇವೆ. ನಮ್ಮ ಅಭ್ಯರ್ಥಿ ಯುವಕರಾಗಿದ್ದಾರೆ. ಈ ಕುರಿತ ಪ್ರಸ್ತಾವನೆ ಇದೆ. ಈ ಬಗ್ಗೆ ಸಧ್ಯದಲ್ಲೇ ಸ್ಥಳೀಯ ನಾಯಕರ ಜತೆ ಚರ್ಚೆ ಮಾಡುತ್ತಿದ್ದೇನೆ” ಎಂದು ತಿಳಿಸಿದರು.

“ನಾನು ಏಕಾಂಗಿಯಾಗಿ ಈ ಬಗ್ಗೆ ತೀರ್ಮಾನ ಮಾಡಲು ಆಗುವುದಿಲ್ಲ. ನಮ್ಮ ಎಐಸಿಸಿ ಅಧ್ಯಕ್ಷರು, ಚುನಾವಣಾ ಸಮಿತಿ, ಮುಖ್ಯಮಂತ್ರಿಗಳು, ರಾಜ್ಯ ಉಸ್ತುವಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರನ್ನು ವಿಶ್ವಾಸಕ್ಕೆ ಪಡೆಯಬೇಕು. ಸ್ವಾಮೀಜಿಗಳು ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದವರು. ಮೊದಲೇ ಈ ವಿಚಾರ ನಮಗೆ ಗೊತ್ತಿದ್ದಿದ್ದರೆ ಸುಲಭವಾಗುತ್ತಿತ್ತು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗ್ಯಾರಂಟಿ ನೋಡಿ ಮತ ಹಾಕಿದರೆ ಕುಕ್ಕರ್ ಬ್ಲಾಸ್ಟ್ ಸಂಭವಿಸಲಿದೆ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಟಾಂಗ್ ನೀಡಿದ ಡಿ ಕೆ ಶಿವಕುಮಾರ್, “ಗ್ಯಾರಂಟಿ ಬಗ್ಗೆ ಮಾತನಾಡಿ ಅವರೂ ಬ್ಲಾಸ್ಟ್ ಆಗಿದ್ದಾರೆ. ಅವರು ಶೋಭಕ್ಕಂಗೆ ಗೋಬ್ಯಾಕ್ ಎಂದು ನಮ್ಮ ಸದಾನಂದ ಗೌಡರನ್ನು ಬ್ಲಾಸ್ಟ್ ಮಾಡಿದ್ದಾರೆ. ಸಿ.ಟಿ ರವಿಯನ್ನು ನಮ್ಮ ತಮ್ಮಣ್ಣ ಬ್ಲಾಸ್ಟ್ ಮಾಡಿದರು” ಎಂದು ಲೇವಡಿ ಮಾಡಿದರು.

ನಿವೃತ್ತ ಐಎಎಸ್‌ ಅಧಿಕಾರಿ ಕೆ.ಶಿವರಾಮ್‌ ಪತ್ನಿ ಕಾಂಗ್ರೆಸ್‌ ಸೇರ್ಪಡೆ

ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ನಿವೃತ್ತ ಐಎಎಸ್‌ ಅಧಿಕಾರಿ ಕೆ.ಶಿವರಾಮ್‌ ಪತ್ನಿ ವಾಣಿ ಶಿವರಾಮ್‌ ಕಾಂಗ್ರೆಸ್‌ ಸೇರಿದರು. ಪಕ್ಷದ ಶಾಲು ಹೊದಿಸಿ, ಧ್ವಜ ನೀಡಿ ಪಕ್ಷಕ್ಕೆ ಡಿ.ಕೆ.ಶಿವಕುಮಾರ್‌ ಬರಮಾಡಿಕೊಂಡರು. ರೂಪಾ ಲಿಂಗೇಶ್, ಗೋಪಿಕೃಷ್ಣ, ಛಲವಾದಿ ಮಹಾಸಭಾದ ಪದಾಧಿಕಾರಿಗಳು ಕೂಡ ಕಾಂಗ್ರೆಸ್ ಸೇರಿದರು.

ಇದನ್ನು ಓದಿದ್ದೀರಾ? ಧಾರವಾಡ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಸ್ವತಂತ್ರ ಸ್ಪರ್ಧೆ ಘೋಷಿಸಿದ ದಿಂಗಾಲೇಶ್ವರ ಸ್ವಾಮೀಜಿ

ಕಾಂಗ್ರೆಸ್ ವಕ್ತಾರರಾಗಿ ತೇಜಸ್ವಿನಿ ಗೌಡ

ವಿಧಾನ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ ಅವರು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರು ಕಾಂಗ್ರೆಸ್ ಮೂಲದವರು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಈ ದೇಶಕ್ಕೆ ಒಳ್ಳೆಯದಾಗಲಿದೆ ಎಂದು ಪಕ್ಷಕ್ಕೆ ಬಂದಿದ್ದಾರೆ. ತೇಜಸ್ವಿನಿ ಗೌಡ ಅವರು ನಮ್ಮ ಸಂಸದರಾಗಿದ್ದರು. ಪಕ್ಷದ ಅಧ್ಯಕ್ಷನಾಗಿ ನಾನು ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ. ಇಂದಿನಿಂದ ತೇಜಸ್ವಿನಿ ಗೌಡ ಅವರನ್ನು ಪಕ್ಷದ ಅಧಿಕೃತ ವಕ್ತಾರರಾಗಿದ್ದಾರೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮಳೆಗಾಲದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಮರ ಕಟಾವು ತಂಡಗಳು

ಬೆಂಗಳೂರಿನಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಾಗುವ ವೇಳೆ ಮರಗಳು, ಮರದ ರೆಂಬೆ/ಕೊಂಬೆಗಳು ಧರೆಗುರುಳಲಿವೆ....

ಬಹಿರಂಗ ಚರ್ಚೆಗೆ ಸಿದ್ಧ ಎಂದ ರಾಹುಲ್ ಗಾಂಧಿ; ಬರುವರೇ ಮೋದಿ?

ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಆರೋಪ-ಪ್ರತ್ಯಾರೋಪಗಳನ್ನು ಗಮನಿಸಿರುವ ಮಾಜಿ ನ್ಯಾಯಾಧೀಶರು ಮತ್ತು...

ಪಂಜಾಬ್ | ಚುನಾವಣಾ ಸ್ಪರ್ಧೆಯಲ್ಲಿ ಪಕ್ಷಾಂತರಿಗಳ ದರ್ಬಾರ್

ಪಂಜಾಬ್‌ನಲ್ಲಿ ನಾಲ್ಕು ಪ್ರಮುಖ ರಾಜಕೀಯ ಪಕ್ಷಗಳು - ಎಎಪಿ, ಬಿಜೆಪಿ, ಕಾಂಗ್ರೆಸ್...

75ಕ್ಕೆ ನಿವೃತ್ತಿ: ಅಮಿತ್ ಶಾ ಹಳೆಯ ಹೇಳಿಕೆ ಕೆದಕಿದ ಆಮ್ ಆದ್ಮಿ ಪಾರ್ಟಿ

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿ, ಸದ್ಯ ಜಾಮೀನಿನಲ್ಲಿ ಬಿಡುಗಡೆಗೊಂಡಿರುವ...