ಯಾವ ಟ್ಯಾಕ್ಸ್ಯೂ ಇಲ್ಲ; ಪಿತ್ರೋಡಾ ಹೇಳಿಕೆಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ: ಡಿ ಕೆ ಶಿವಕುಮಾರ್

Date:

Advertisements

“ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ವೈಯಕ್ತಿಕ. ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇದು ಭಾರತ. ಈ ಬಗ್ಗೆ ಜೈರಾಮ್ ರಮೇಶ್ ಅವರು ನಮ್ಮ ಪಕ್ಷದ ಪರವಾಗಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಡೆತ್ ಟ್ಯಾಕ್ಸ್, ಬರ್ತ್ ಟ್ಯಾಕ್ಸ್ ಇಲ್ಲ. ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು.

“ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿಲ್ಲ. ಅದು ಸುಳ್ಳು, ಅದಕ್ಕೆ ನಾವು ಅವಕಾಶ ನೀಡುವುದಿಲ್ಲ. ನಮ್ಮ ದೇಶದಲ್ಲಿ ರಾಜಕಾರಣದಲ್ಲಿ ತಂದೆ ಹಾಗು ಪೂರ್ವಜರ ಹೆಸರಿನಲ್ಲಿ ಚುನಾವಣೆ ಮಾಡುತ್ತಿರುವಾಗ ಅವರ ಆಸ್ತಿ ವರ್ಗಾವಣೆಗೆ ಅವಕಾಶ ನೀಡುತ್ತಾರಾ? ದೇಶದ ಸಂಪತ್ತನ್ನು ನಗದೀಕರಣ ಮಾಡಲು ಬಿಜೆಪಿ ಮುಂದಾಗಿದೆ ಎಂಬ ಮಾಧ್ಯಮ ವರದಿ ಓದಿದ್ದ ನೆನಪು ನನಗೆ. ನಮ್ಮ ಪ್ರಣಾಳಿಕೆಯಲ್ಲಿರುವ ಅಂಶಗಳು ಮಾತ್ರ ಪಕ್ಷದ ನಿಲುವು. ಅದರಿಂದಾಚೆಗಿನ ಅಂಶಗಳಿಗೆ ಪಕ್ಷಕ್ಕೆ ಸಂಬಂಧವಿಲ್ಲ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

Advertisements

“ಪಿತ್ರೋಡಾ ಅವರದು ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯ ಅಲ್ಲ. ಇಂತಹ ಚರ್ಚೆ ಪಕ್ಷದಲ್ಲಿ ಆಗಿಲ್ಲ. ಇಂತಹ ಹೇಳಿಕೆಗಳನ್ನು ನಾವು ಒಪ್ಪುವುದಿಲ್ಲ” ಎಂದು ತಿಳಿಸಿದರು.

“ಪ್ರಧಾನಮಂತ್ರಿಗಳು ದೇಶದೆಲ್ಲೆಡೆ ಪ್ರಚಾರ ಮಾಡುವ ವೇಳೆ ಹತಾಶೆಯ ಹೇಳಿಕೆ ನೀಡುತ್ತಿದ್ದಾರೆ. ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಅವರ ಪಕ್ಷಕ್ಕೆ ನೆಲೆ ಇಲ್ಲ. ಹೀಗಾಗಿ ಆಂಧ್ರದಲ್ಲಿ ಟಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ಅವರ ಸರ್ಕಾರ ಇಲ್ಲ. ಕರ್ನಾಟಕದಲ್ಲೂ ಅವರು ಎರಡಂಕಿ ಸ್ಥಾನ ಪಡೆಯಲ್ಲ. ಹೀಗಾಗಿ ಹತಾಶೆಯಿಂದ ಮಂಗಳಸೂತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಮೋದಿ ಅವರು ಪ್ರಧಾನಿ ಆದಾಗ 2,800 ರೂಪಾಯಿ ಇದ್ದ ಒಂದು ಗ್ರಾಂ ಚಿನ್ನ ಈಗ 7,500 ಆಗಿದೆ. ನಮ್ಮ ಮಹಿಳೆಯರು ಮಂಗಳಸೂತ್ರ ಹಾಕಲಾಗದಂತೆ ಬಿಜೆಪಿಯವರು ಬೆಲೆ ಏರಿಕೆ ಮಾಡಿದ್ದಾರೆ” ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

“ಪ್ರಿಯಾಂಕಾ ಗಾಂಧಿಯವರು ಬೆಂಗಳೂರಿನಲ್ಲಿ ನನ್ನ ತಾಯಿ ದೇಶಕ್ಕಾಗಿ ತನ್ನ ಮಾಂಗಲ್ಯ ಸೂತ್ರ ತ್ಯಾಗ ಮಾಡಿದ್ದಾರೆ ಎಂದು ನೋವಿನಿಂದ ಹೇಳಿದ್ದಾರೆ. ಇದನ್ನು ಮೋದಿ ಅವರು ಅರಿತುಕೊಳ್ಳಬೇಕು. ಅವರ ಸ್ಥಾನದ ಬಗ್ಗೆ ನಮಗೆ ಗೌರವವಿದೆ. ಜನ ಅವರಿಗೆ ಹತ್ತು ವರ್ಷಗಳ ಕಾಲ ಅವಕಾಶ ಮಾಡಿಕೊಟ್ಟಿದ್ದಾರೆ. ಜನ ಕೊಟ್ಟಿರುವ ಗೌರವವನ್ನು ಕಾಪಾಡಿಕೊಳ್ಳಬೇಕು. ಈ ರೀತಿ ದೇಶಕ್ಕೆ ಅಪಮಾನ ಮಾಡಬಾರದು” ಎಂದು ಡಿ ಕೆ ಶಿವಕುಮಾರ್ ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ದ.ಕನ್ನಡ | ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ ಸಹಿಸಲು ಸಾಧ್ಯವೇ? ಬಿಜೆಪಿಗೆ ಮತ ಹಾಕಲು ‘ಬಂಟ ಬ್ರಿಗೇಡ್’ ಹೆಸರಲ್ಲಿ ಕರಪತ್ರ!

“ಐಟಿ ಅಧಿಕಾರಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು, ನಮ್ಮ ನಾಯಕರನ್ನು ಹೆದರಿಸುತ್ತಿದ್ದಾರೆ. ಅವರ ಬಳಿ ಸಿಕ್ಕ ಹಣ ಕಾಂಗ್ರೆಸ್ ಪಕ್ಷ ಹಾಗೂ ಡಿ.ಕೆ. ಶಿವಕುಮಾರ್ ಅವರ ಹಣ ಎಂದು ಹೇಳಲು ಒತ್ತಾಯ ಮಾಡುತ್ತಿದ್ದಾರೆ. ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚಿನ ದಾಳಿ ಮಾಡಲಾಗುತ್ತಿದೆ” ಎಂದು ಡಿ ಕೆ ಶಿವಕುಮಾರ್ ಆರೋಪಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಲು ಮನವಿ

ನಾಳೆ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಮುಂದೆಯೂ ಪ್ರತಿಯೊಬ್ಬರ ಬದುಕು ಬದಲಾವಣೆ ತರಲು ಕೆಲಸ ಮಾಡಲಿದೆ. ನಮ್ಮ ಕಾಂಗ್ರೆಸ್ ಪಕ್ಷ ಮಹಾಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ವಾರ್ಷಿಕ 1 ಲಕ್ಷ, 25 ಲಕ್ಷ ವರೆಗೂ ಆರೋಗ್ಯ ವಿಮೆ, ನಿರುದ್ಯೋಗಿಗಳಿಗೆ ವಾರ್ಷಿಕ 1 ಲಕ್ಷ ಶಿಷ್ಯ ವೇತನ, ನಗರದಲ್ಲಿ ಉದ್ಯೋಗ ಖಾತ್ರಿ ಯೋಜನೆ ಜಾರಿ ಮಾಡುತ್ತೇವೆ. ಮತದಾರರು ಈ ಭರವಸೆಗಳ ಬಗ್ಗೆ ಆಲೋಚಿಸಿ ಬೆಂಬಲ ನೀಡಬೇಕು. ಬಿಜೆಪಿ ಸರ್ಕಾರ ನುಡಿದಂತೆ ನಡೆದಿಲ್ಲ. ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ. ಜನರೂ ಇದನ್ನು ಅರ್ಥ ಮಾಡಿಕೊಂಡಿದ್ದಾರೆ. ಹಾಗಾಗಿ, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು” ಎಂದು ಡಿ ಕೆ ಶಿವಕುಮಾರ್ ಮನವಿ ಮಾಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X