ಬೆಂಗಳೂರು ಪ್ರೆಸ್‌ ಕ್ಲಬ್ ‘ವರ್ಷದ ವ್ಯಕ್ತಿ’ ಪ್ರಶಸ್ತಿ ಸ್ವೀಕರಿಸಿದ ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಬೆಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಯನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರು ಕಬ್ಬನ್ ಪಾರ್ಕ್ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ಪ್ರದಾನ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡ ಮಾಡುವ “ವರ್ಷದ ವ್ಯಕ್ತಿ-ವಿಶೇಷ ವ್ಯಕ್ತಿ” ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ” ಎಂದು ಅಭಿಪ್ರಾಯ ಪಟ್ಟರು.

Advertisements

“ಸುದೀರ್ಘ ಮತ್ತು ಅರ್ಥಪೂರ್ಣ ಚರ್ಚೆಯ ಬಳಿಕ ನಮ್ಮ ಈ ಸಂವಿಧಾನ ಜಾರಿಯಾಗಿದೆ. ಆದ್ದರಿಂದ ಈ ಸಂವಿಧಾನವನ್ನು ಗೌರವಿಸುವುದು, ಪಾಲಿಸುವುದು ಎಲ್ಲಾ ರಾಜಕೀಯ ಪಕ್ಷಗಳ, ವ್ಯಕ್ತಿಗಳ ಕರ್ತವ್ಯ. ಅವಕಾಶ ವಂಚಿತರ ಪರವಾಗಿ, ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತಿ ಬೆಂಬಲಿಸುವುದು, ವಸ್ತುನಿಷ್ಠವಾಗಿ ಸುದ್ದಿಗಳನ್ನು ವರದಿ ಮಾಡುವುದು ಪತ್ರಿಕಾ ವೃತ್ತಿಯ ಮೂಲಭೂತ ಮೌಲ್ಯ. ಈ ಮೌಲ್ಯಗಳನ್ನು ಪಾಲಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಇದನ್ನು ಬಿಟ್ಟು ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನು ದೊಡ್ಡ ಚರ್ಚೆ ಮಾಡಿ ಮೌಡ್ಯ ಬೆಳೆಸಿದಂತಹ ರೀತಿಯಲ್ಲಿ ಕೆಲಸ ಮಾಡಬೇಡಿ” ಎಂದು ಕಿವಿಮಾತು ಹೇಳಿದರು.

“ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು. ಸ್ವಾತಂತ್ರ್ಯಾ ಪೂರ್ವದಲ್ಲಿ ದೇಶದ ಅಭಿವೃದ್ಧಿಯ ಚರ್ಚೆ ಮತ್ತು ಕನಸು ಇತ್ತು. ಈಗ ಮಾಧ್ಯಮ ಉದ್ಯಮಿಗಳ ಕೈಗೆ ಸಿಕ್ಕಿಕೊಂಡಿದೆ. ಉದ್ಯಮಿಗಳಿಗೆ ಸಮಾಜಮುಖಿಯಾದ ಯಾವ ಕಾಳಜಿಗಳೂ ಇರುವುದಿಲ್ಲ. ಈ ಬಗ್ಗೆ ಪತ್ರಕರ್ತ ಸಮೂಹ ಎಚ್ಚರ ವಹಿಸಬೇಕು” ಎಂದರು.

“ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕೃತರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚತುರ ಸಂಘಟಕರು ಮತ್ತು ಕ್ರಿಯಾಶೀಲ ವ್ಯಕ್ತಿ” ಎಂದು ಇದೇ ಸಂದರ್ಭದಲ್ಲಿ ಮೆಚ್ಚುಗೆ ಸೂಚಿಸಿದರು. ಇದೇ ವೇಳೆ, ರಾಜ್ಯದ ಪತ್ರಕರ್ತ ಸಮೂಹ ಮತ್ತು ಕುಟುಂಬಕ್ಕೆ ಹೊಸ ವರ್ಷದ ಶುಭ ಕೋರಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್, “ಇವತ್ತು ನನ್ನ ಕೊರಳಿಗೆ ನೀವು ಹಾಕಿದಂತಹ ಹಾರ ಬಹಳ ಭಾರವಾಗಿದೆ. ಯಾಕೆಂದರೆ ನನ್ನ ಮೇಲೆ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ. ಕಾಂಗ್ರೆಸ್ ಅಧ್ಯಕ್ಷನಾದ ಬಳಿಕ ಪಕ್ಷದ ನಾಯಕಿ ಸೋನಿಯಾ ಗಾಂಧಿ ನೀಡಿದ ಮಾರ್ಗದರ್ಶನದಂತೆ ಸಿದ್ದರಾಮಯ್ಯನವರ ಜೊತೆಗೆ ಪಕ್ಷ ಸಂಘಟಿಸಿದ್ದೇನೆ. ನಮಗೆ ನಮ್ಮ ಆತ್ಮವಿಶ್ವಾಸವೇ ದೊಡ್ಡದು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರ ಅಧಿಕಾರ ನೀಡುವ ಮೂಲಕ ರಾಜ್ಯದ ಜನರು ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ನಮ್ಮ ಸರ್ಕಾರ ತಪ್ಪು ಮಾಡಿದಾಗ ಮಾಧ್ಯಮಗಳು ಎಚ್ಚರಿಸಿ” ಎಂದು ತಿಳಿಸಿದರು.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ ವಿಶೇಷ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಉಪ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾದ ತ್ಯಾಗರಾಜ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X