ಗುತ್ತಿಗೆದಾರರ ಬ್ಲ್ಯಾಕ್‌ಮೇಲ್‌ಗೆ ಹೆದರಲ್ಲ, ಏನು ಬೇಕಾದರೂ ಮಾಡಿಕೊಳ್ಳಲಿ: ಡಿ ಕೆ ಶಿವಕುಮಾರ್

Date:

Advertisements
  • ‘ಕೆಲಸ ಆಗಿದ್ದರೆ ಬಿಲ್ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದೇವೆ’
  • ‘ಯಾವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಿದೆ’

ಗುತ್ತಿಗೆದಾರರು ಏನು ಬೇಕಾದರೂ ಮಾಡಿಕೊಳ್ಳಲಿ. ನಾವು ಕಾನೂನು ಪ್ರಕಾರ ಕೆಲಸ ಮಾಡುತ್ತಿದ್ದೇವೆ. ಈ ರೀತಿಯ ಬೆದರಿಕೆ, ಬ್ಲ್ಯಾಕ್‌ಮೇಲ್‌ಗೆ ಜಗ್ಗುವುದಿಲ್ಲ. ರಾಜ್ಯಪಾಲರಿಗೆ ಪತ್ರ ಕೊಡುವುದು, ರಾಷ್ಟ್ರಪತಿಗೆ ಪತ್ರ ಕೊಡುವುದು, ಪ್ರಧಾನಿಯವರನ್ನು ಭೇಟಿ ಆಗುವುದು ಏನು ಬೇಕಾದರೂ ಮಾಡಿಕೊಳ್ಳಲಿ’ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾಗರರು ‘ಬಿಲ್ ಹಣ ಬಿಡುಗಡೆಗೆ ಡಿ.ಕೆ. ಶಿವಕುಮಾರ್ ದುಡ್ಡು ಕೇಳಿದ್ದಾರೆ, ಈ ಬಗ್ಗೆ ಅವರು ನಂಬಿರುವ ಅಜ್ಜನ ಮೇಲೆ ಪ್ರಮಾಣ ಮಾಡಲಿ’ ಎಂದು ಗುತ್ತಿಗೆದಾರರು ಹೇಳಿದ್ದಾರಲ್ಲ ಎಂದು ಗಮನ ಸೆಳೆದಾಗ ಅವರು ಪ್ರತಿಕ್ರಿಯಿಸಿದರು.

“ಯಾವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಎಂದೂ ನನಗೆ ಗೊತ್ತಿದೆ. ಯಾರು ಸರಿಯಾಗಿ ಕೆಲಸ ಮಾಡುತ್ತಾರೋ ಅವರ ಬಿಲ್‌ ಪಾವತಿ ಆಗಲಿದೆ. ನಾನು ಕಾನೂನು ಪ್ರಕಾರ ಕೆಲಸ ಮಾಡುತ್ತಿದ್ದೇನೆ. ಬ್ಲ್ಯಾಕ್ ಮೇಲ್‌ಗಳಿಗೆಲ್ಲ ಈ ಡಿ ಕೆ ಶಿವಕುಮಾರ್‌ ಹೆದರಲ್ಲ” ಎಂದರು.

Advertisements

“ಆರೋಪ ಮಾಡುವ ಗುತ್ತಿಗೆದಾರರಿಗೆ ಉತ್ತರ ಕೊಡಲು ಹೋಗುವುದಿಲ್ಲ. ಅಂತಹವರ ಜೊತೆ ಮಾತನಾಡುವ ಅವಶ್ಯಕತೆ ನನಗಿಲ್ಲ. ನನಗೂ ಪ್ರಜ್ಞೆ ಇದೆ, ರಾಜಕೀಯ ಗೊತ್ತಿದೆ. ಗುತ್ತಿಗೆದಾರರೂ ಗೊತ್ತಿದ್ದಾರೆ. ಅವರ ಹಿಂದೆ ಯಾರಿದ್ದಾರೆ, ಯಾರು ಇದನ್ನು ಹೇಳಿಸುತ್ತಿದ್ದಾರೆ ಎಲ್ಲ ಮಾಹಿತಿ ಇದೆ” ಎಂದು ಸಿಟ್ಟಿನಿಂದಲೇ ನುಡಿದರು.

ಗುತ್ತಿಗೆದಾರರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, “ಮಾಡಲಿ ಬಿಡಿ, ನಾವು ವಿರೋಧ ಪಕ್ಷದಲ್ಲಿ ಇದ್ದಿದ್ದರೆ, ನಮ್ಮನ್ನು ಕೂಡ ಭೇಟಿ ಮಾಡುತ್ತಿರಲಿಲ್ಲವೇ? ಇದನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ. ಇದು ಅತ್ಯಂತ ಸಾಮಾನ್ಯ ಸಂಗತಿ. ರಾಜಕಾರಣಿಗಳು, ವಿರೋಧ ಪಕ್ಷಗಳು ಇರುವುದೇ ಇಂತಹ ಕೆಲಸ ಮಾಡಲು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಮತ್ತು ನೆರೆ- ಕೃಷಿಕನಿಗಷ್ಟೇ ಅಲ್ಲ, ಉಣ್ಣುವವರ ಮೇಲೂ ಪರಿಣಾಮ ಬೀರಲಿದೆ

“ಗುತ್ತಿಗೆದಾರರು ಯಾರನ್ನಾದರೂ ಎತ್ತಿಕಟ್ಟಲಿ, ಏನು ಬೇಕಾದರೂ ಮಾಡಲಿ, ನಾನು ಯಾರಿಗೂ ಪ್ರಮಾಣ ಮಾಡಬೇಕಾಗಿಲ್ಲ. ಕಾನೂನು ಏನು ಹೇಳಿದೆಯೋ ಅದೇ ಉತ್ತರ. ಕೆಲಸ ಮಾಡಿದ್ದರೆ ಬಿಲ್ ಕೊಡುತ್ತೇವೆ, ಕೆಲಸ ಮಾಡಲಿಲ್ಲವೆಂದರೆ ಬಿಲ್ ಕೊಡುವುದಿಲ್ಲ. ಇವತ್ತು ಅರ್ಜಿ ಕೊಟ್ಟರು, ನಾಳೆ ಟೆಂಡರ್ ಅಯಿತು, ಒಂದು ತಿಂಗಳಲ್ಲಿ ಒಂದು ಸಾವಿರ ಕೋಟಿ ಕೆಲಸ ಮಾಡಲು ಆಗುತ್ತಾ ನೀವೇ ಹೇಳಿ” ಎಂದು ಪ್ರಶ್ನಿಸಿದರು.

” ಮೌಲ್ಯಮಾಪನ ಮಾಡಿ, ಕೆಲಸ ಆಗಿದ್ದರೆ ಮಾತ್ರ ಬಿಲ್ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದೇವೆ. ಅವರು ಆ ಕೆಲಸ ನೋಡಿಕೊಳ್ಳುತ್ತಾರೆ. ಸರ್ಕಾರ ಇರುವುದು ನೀತಿ ರೂಪಿಸಲು. ಹೀಗಾಗಿ ನಾವು ಬಿಲ್ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.

ಗುತ್ತಿಗೆದಾರರು ಬಿಜೆಪಿ ಮೇಲೆ ಆರೋಪ ಮಾಡಿದ್ದರು, ಈಗ ನಿಮ್ಮ ಮೇಲೆ ಆರೋಪ ಮಾಡುತ್ತಿದ್ದಾರಲ್ಲವೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಗುತ್ತಿಗೆದಾರರು ನನ್ನ ಬಳಿಯೂ ಬಂದಿದ್ದರು, ಕೆಲಸ ಮಾಡಿದ್ದರೆ ನಿಮಗೆ ಹಣ ಸಿಗುತ್ತದೆ ಎಂದು ಅವರಿಗೆ ಹೇಳಿದೆ. ಬಿಲ್ ಕೊಡುವುದಕ್ಕೂ ಒಂದು ಪ್ರಕ್ರಿಯೆ ಇದೆ. ಎರಡು, ಮೂರು ವರ್ಷ ಕಾದಿಲ್ಲವೇ ಅವರು? ಜಲಸಂಪನ್ಮೂಲ ಇಲಾಖೆಯಲ್ಲಿ ಇರುವುದು – 600 ಕೋಟಿ, ಆದರೆ 1.25 ಸಾವಿರ ಕೋಟಿ ಬಿಲ್ ಇದೆ. ಎಲ್ಲಿಂದ ಕೊಡುವುದು? ಕೆಲಸ ಮಾಡದವರಿಗೆಲ್ಲ ದುಡ್ಡು ಕೊಡಲು ಆಗುತ್ತದೆಯೇ” ಎಂದು ಮರು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X