ಕೆ.ಸಿ. ವೇಣುಗೋಪಾಲ್ ಸಲಹೆ ನೀಡಿದ್ದಾರಷ್ಟೇ, ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Date:

“ಕೆ.ಸಿ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು. ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ. ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

- Advertisement -

ಸಿಎಂ ಸಿದ್ದರಾಮಯ್ಯನವರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮದವರು ಕೇಳಿದಾಗ, “ಅವರು ನಮ್ಮ ನಾಯಕರು. ನಮಗೆ ಸಲಹೆ ನೀಡುವ ಎಲ್ಲ ಅಧಿಕಾರ ಅವರಿಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ರಾಷ್ಟ್ರೀಯ ನಾಯಕರು ಸಲಹೆ ನೀಡುತ್ತಾರೆ. ಈ ಹಿಂದೆಯೂ ಅನೇಕ ಸಲಹೆ ನೀಡಿದ್ದಾರೆ, ಈಗಲೂ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ” ಎಂದು ತಿಳಿಸಿದರು.

ಇನ್ನು ಸಂತ್ರಸ್ತರ ಪುನರ್ವಸತಿ ಬಗ್ಗೆ ಮಾತನಾಡಿ, “ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ 1 ಲಕ್ಷ ವಸತಿ ಯೋಜನೆಯಲ್ಲಿ ಮನೆ ನೀಡಲಾಗುವುದು. ಇದಕ್ಕೆ ಅವರು ಒಂದೂವರೆಯಿಂದ ಎರಡು ಲಕ್ಷ ಹಣ ಪಾವತಿಸಬೇಕು. ಇದಕ್ಕೆ ಸಾಲ ಸೌಲಭ್ಯ ಕಲ್ಪಿಸುವ ಜವಾಬ್ದಾರಿಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ವಹಿಸಲಾಗಿದೆ. ನಾವು ಮನೆ ನೀಡುವ ಮುನ್ನ, ಅವರು ಯಾರು, ಎಲ್ಲಿಂದ ಬಂದಿದ್ದಾರೆ ಎಂದೆಲ್ಲಾ ಆಧಾರ್ ಹಾಗೂ ಇತರೆ ದಾಖಲೆ ಪರಿಶೀಲಿಸುತ್ತೇವೆ. ಅಲ್ಲಿಯವರೆಗೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ಮಾನವೀಯತೆ ದೃಷ್ಟಿಯಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...