- ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಲಕ್ಷ್ಮಣ ಸವದಿ
- ಸವದಿಗೆ ಹೊಸ ಜವಾಬ್ದಾರಿ ವಹಿಸುತ್ತಾರಾ ಡಿಕೆಶಿ
ಕಾಂಗ್ರೆಸ್ ನಾಯಕ, ಲಿಂಗಾಯತ ಮುಖಂಡ ಲಕ್ಷ್ಮಣ ಸವರಿಯವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಡರಾತ್ರಿ ಭೇಟಿ ಮಾಡಿದರು.
ಬೆಳಗಾವಿಯ ಸದಾಶಿವನಗರದಲ್ಲಿರುವ ಲಕ್ಷ್ಮಣ ಸವದಿ ನಿವಾಸಕ್ಕೆ ತೆರಳಿದ ಡಿ ಕೆ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು.
ಸಚಿವ ಸ್ಥಾನ ಸಿಗದಿದ್ದಕ್ಕೆ ಸವದಿ ಅಸಮಾಧಾನಗೊಂಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಸವದಿ ನಿವಾಸಕ್ಕೆ ಆಗಮಿಸಿದ ಶಿವಕುಮಾರ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಡಿಕೆಶಿ, ಸವದಿ ಭೇಟಿ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಆಸೀಫ್ ಸೇಠ್, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಜೊತೆಯಾಗಿದ್ದರು.
ಈ ಸುದ್ದಿ ಓದಿದ್ದೀರಾ? : ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಆದೇಶ
ಡಿ ಕೆ ಶಿವಕುಮಾರ್ ಹಾಗೂ ಸವದಿ ಮಾತುಕತೆ ವೇಳೆ ಲೋಕಸಭೆ ಚುನಾವಣೆ ತಯಾರಿ ಹಾಗೂ ಪಕ್ಷದಲ್ಲಿ ಅವರಿಗೊಂದು ಮಹತ್ವದ ಸ್ಥಾನ ನೀಡುವ ಕುರಿತು ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ