ಕಾನೂನುಬಾಹಿರ ಚಟುವಟಿಕೆ ನಡೆದರೆ ಆಯಾ ಠಾಣಾ ವ್ಯಾಪ್ತಿಯ ಡಿಸಿಪಿ, ಎಸ್‌ಪಿಗಳೇ ಹೊಣೆ: ಸಿದ್ದರಾಮಯ್ಯ ಎಚ್ಚರಿಕೆ

Date:

Advertisements
  • ‘ಕಾನೂನು ಸುವ್ಯವಸ್ಥೆಗೂ ರಾಜ್ಯದ ಅಭಿವೃದ್ಧಿಗೂ ನೇರ ಸಂಬಂಧವಿದೆ’
  • ‘ಆಯಾ ಠಾಣಾ ವ್ಯಾಪ್ತಿಯ ಡಿಸಿಪಿ-ಎಸ್‌ಪಿಗಳನ್ನೇ ಹೊಣೆ ಮಾಡಿ ಕ್ರಮ’

ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್‌ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೀಡಿದ ಸೂಚನೆಗಳ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

“ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ. ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎನ್ನುವ ಎಚ್ಚರಿಕೆ ನೀಡಲಾಗಿದೆ” ಎಂದು ತಿಳಿಸಿದರು.

Advertisements

“ಸಿಸಿಬಿಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಾದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು. ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ, ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಚೈತ್ರಾ ಕುಂದಾಪುರ ಬೆಂಬಲಕ್ಕೆ ನಾವು ಯಾರೂ ನಿಂತಿಲ್ಲ: ಶೋಭಾ ಕರಂದ್ಲಾಜೆ ಸ್ಪಷ್ಟನೆ

“ಅನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಸರ್ಕಾರ zero tolarence ವಹಿಸಲಿದೆ. ಠಾಣಾಧಿಕಾರಿಗಳ ಗಮನಕ್ಕೆ ಬರದಂತೆ ಯಾವ ಅಪರಾಧಗಳೂ, ಕರಾಳ ದಂಧೆಗಳೂ ನಡೆಯಲು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವುದು ಕಡ್ಡಾಯ. ಪೊಲೀಸರು ದರ್ಪ ಬಿಟ್ಟು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಿ” ಎಂದು ಸೂಚಿಸಿದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತರಾದ ದಯಾನಂದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಗೋಷ್ಠಿಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X