ಜವಾಹರಲಾಲ್‌ ನೆಹರೂ ಪುಣ್ಯತಿಥಿ | ಪುಷ್ಪ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಆವರಣದಲ್ಲಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಸೋಮವಾರ ಪುಷ್ಪ ನಮನ ಸಲ್ಲಿಸಿದರು.

ನಂತರ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ನೆಹರೂ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.

ಈ ವೇಳೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಅಧ್ಯಕ್ಷ, ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ ಕೆ ಹರಿಪ್ರಸಾದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Advertisements

ನಮನ ಸಲ್ಲಿಸಿ ಸಿಎಂ ಪೋಸ್ಟ್

“ದೇಶದ ಮೊದಲ ಪ್ರಧಾನಿ,‌ ವಿಶ್ವವೇ ಕೊಂಡಾಡಿದ ರಾಜಕೀಯ ಮುತ್ಸದ್ದಿ ಮತ್ತು ಕಾಂಗ್ರೆಸ್ ಪಕ್ಷದ ಹೆಮ್ಮೆಯ ನಾಯಕ ಪಂಡಿತ ಜವಾಹರಲಾಲ ನೆಹರು ಅವರನ್ನು ಅವರ ಪುಣ್ಯದಿನದಂದು ಗೌರವ ಮತ್ತು ಕೃತಜ್ಞತೆಯಿಂದ ನೆನೆಯೋಣ” ಎಂದು ಸಿದ್ದರಾಮಯ್ಯ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಗುಲಾಮಗಿರಿಯಿಂದ ಜರ್ಜರಿತವಾಗಿದ್ದ ಭಾರತವನ್ನು ಆರ್ಥಿಕ ಅಭಿವೃದ್ದಿ ಮತ್ತು ಸಾಮಾಜಿಕ ಸುಧಾರಣೆಯ ಕ್ರಮಗಳ ಮೂಲಕ ಸ್ವತಂತ್ರ, ಸ್ವಾವಲಂಬಿ‌ ಮತ್ತು ಜಾತ್ಯತೀತ ರಾಷ್ಟ್ರವನ್ನಾಗಿ ಕಟ್ಟಿದ ನೆಹರು ಅವರ ಜನಪರ ಕಾಳಜಿ, ದೇಶಭಕ್ತಿ ಮತ್ತು ಪುರೋಗಾಮಿ ಚಿಂತನೆಗಳು ನಮಗೆಲ್ಲ ಆದರ್ಶ ಮತ್ತು ಸ್ಪೂರ್ತಿದಾಯಕ” ಎಂದಿದ್ದಾರೆ.

“ಪ್ರಜಾಪ್ರಭುತ್ವ ವಿರೋಧಿ ಮತ್ತು ಕೋಮುವಾದಿ ಶಕ್ತಿಗಳು ಸುಳ್ಳು ಇತಿಹಾಸ ಮತ್ತು ಅಪಪ್ರಚಾರಗಳಿಂದ ದಮನಮಾಡಲು ಯತ್ನಿಸಿದಷ್ಟು ಪುಟಿದೆದ್ದು ಬಂದು ನಮ್ಮನ್ನು ಸೆಳೆಯುವ, ಸಲಹುವ ಮತ್ತು ಮಾರ್ಗದರ್ಶನ ನೀಡುವ ಜವಹರಲಾಲ ನೆಹರು ಅವರ ಚಿಂತನೆಯನ್ನು ಪಸರಿಸುವ ಮೂಲಕ ಅವರನ್ನು ಜೀವಂತವಾಗಿಡೋಣ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X