ಕೊಲೆ ಬೆದರಿಕೆ | ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲು

Date:

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

- Advertisement -

ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ಅವರ‌ ಮಗ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೊದಲ ದೂರು ಆಧರಿಸಿ ಎಸ್ಐಟಿ ತನಿಖೆ ನಡೆಸುತ್ತಿದೆ. ಇದರ ನಡುವೆಯೂ ಪ್ರಜ್ವಲ್ ವಿರುದ್ಧ ಮತ್ತೊಬ್ಬ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ತನಿಖೆಯನ್ನೂ ಎಸ್ಐಟಿ ಕೈಗೆತ್ತಿಕೊಂಡಿದೆ.

ದೂರಿನ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ‘ಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲ ರೀತಿಯ ಭದ್ರತೆ ನೀಡಲಿದೆ’ ಎಂದು ತಿಳಿಸಿದರು.

“ಇಂತಹ ಸೂಕ್ಷ್ಮ ವಿಚಾರದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವುದು ಕಷ್ಟ. ಮೊದಲು ಸಂತ್ರಸ್ತೆ ಮಹಿಳೆ ಬಂದು ದೂರು ಕೊಡಬೇಕು ಎಂದ ಅವರು, ಪ್ರಜ್ವಲ್ ರೇವಣ್ಣ ಡಿಪ್ಲೊಮೆಟಿಕ್ ಪಾಸ್ ಪೋರ್ಟ್‌ ಮೂಲಕ ವಿದೇಶಕ್ಕೆ ಹೋಗಿದ್ದು ಸತ್ಯ, ಕೇಂದ್ರ ಸರಕಾರ ಡಿಪ್ಲೊಮೆಟಿಕ್ ಪಾಸ್ ಪೋರ್ಟ್‌ ಕೊಟ್ಟಿದೆ. ಹೀಗಾಗಿ ರಾತ್ರೋ ರಾತ್ರಿ ಹೋಗಿದ್ದಾರೆ” ಎಂದು ಹೇಳಿದರು.

“ಎಸ್‌ಐಟಿಯಿಂದ IPC 41A ಜಾರಿ‌ಮಾಡಲಾಗಿದೆ. ನೋಟಿಸ್ ಜಾರಿ ಮಾಡಿದ ಬಳಿಕ ಕೂಡಲೇ ಬಂದು ಹಾಜರಾಗಬೇಕು. ಒಂದು ವೇಳೆ ಹಾಜರಾಗದಿದ್ದರೆ ಅವರನ್ನು ಬಂಧಿಸಬೇಕಾಗುತ್ತದೆ ಎಂದರು. ರೇವಣ್ಣ ಅವರು ಇಂದು ಅಧಿಕಾರಿಗಳ ಮುಂದೆ ಹಾಜರಾಗುತ್ತೆನೆ ಎಂದು ಹೇಳಿದ್ದಾರೆ. ಲುಕ್ ಔಟ್ ನೋಟಿಸ್ ನೀಡಲಾಗಿದೆ. ಪ್ರಜ್ವಲ್ ರೇವಣ್ಣ ಅವರು ವಕೀಲರ ಮೂಲಕ 6 ದಿನ ಕಾಲಾವಕಾಶ ಕೇಳಿದ್ದಾರೆ” ಎಂದು ವಿವರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...