ದೆಹಲಿ ಸುಗ್ರೀವಾಜ್ಞೆ ಕುರಿತು ಸಂಸತ್ ಅಧಿವೇಶನಕ್ಕೂ ಮುನ್ನವೇ ನಿರ್ಧಾರ: ಖರ್ಗೆ

Date:

ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರ ಣಕ್ಕೆ ಕೇಂದ್ರದ ಸುಗ್ರೀವಾಜ್ಞೆ ವಿರೋಧಿಸುವ ಬಗ್ಗೆ ಸಂಸತ್ತಿನ ಅಧಿವೇಶನದ ಮೊದಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ತಿಳಿಸಿದ್ದಾರೆ.

ಈ ವಿಷಯದ ಬಗ್ಗೆ ಕಾಂಗ್ರೆಸ್ ತನ್ನ ಬೆಂಬಲದ ಭರವಸೆ ನೀಡದಿದ್ದರೆ ಪಾಟ್ನಾದಲ್ಲಿ ಪ್ರತಿಪಕ್ಷಗಳ ಸಭೆಯಿಂದ ಹೊರನಡೆಯುವುದಾಗಿ ಎಎಪಿ ಎಚ್ಚರಿಕೆ ನೀಡಿದ ಒಂದು ದಿನದ ನಂತರ ಮಲ್ಲಿಕಾರ್ಜುನ ಖರ್ಗೆ ಈ ಹೇಳಿಕೆ ನೀಡಿದ್ದಾರೆ.

ಇಂದು ಬೆಳಗ್ಗೆ ಪಾಟ್ನಾಗೆ ತೆರಳುವ ಮುನ್ನ ಸುಗ್ರೀವಾಜ್ಞೆ ವಿಚಾರ ಮತ್ತು ಎಎಪಿಯ ಎಚ್ಚರಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ ಅವರು, “ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ತಮ್ಮ ಪಕ್ಷ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಹಾಗೂ ಇದು ಸಂಸತ್ತಿಗೆ ಸಂಬಂಧಿಸಿದ ವಿಷಯವಾಗಿರುವಾಗ ಆ ಕುರಿತು ಬೇರೆಡೆ ಏಕೆ ಮಾತನಾಡುತ್ತಿದ್ದಾರೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇದನ್ನು ವಿರೋಧಿಸುವುದು ಅಥವಾ ಅದನ್ನು ಪ್ರಸ್ತಾಪಿಸುವುದು ಹೊರಗೆ ನಡೆಯುವುದಿಲ್ಲ, ಅದು ಸಂಸತ್ತಿನಲ್ಲಿ ನಡೆಯುತ್ತದೆ. ಸಂಸತ್ತು ಅಧಿವೇಶನ ಆರಂಭವಾಗುವ ಮೊದಲು, ಎಲ್ಲ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕಾದ ವಿಷಯಗಳ ಬಗ್ಗೆ ನಿರ್ಧರಿಸುತ್ತಾರೆ. ಎಎಪಿ ಅವರು ಅದನ್ನು ತಿಳಿದಿದ್ದಾರೆ ಮತ್ತು ಅವರ ನಾಯಕರು ಸಹ ನಮ್ಮ ಸರ್ವಪಕ್ಷ ಸಭೆಗಳಿಗೆ ಆಗಮಿಸುತ್ತಾರೆ. ಅದರ ಬಗ್ಗೆ ಹೊರಗೆ ಏಕೆ ಪ್ರಚಾರವಾಗುತ್ತಿದೆ ಎಂದು ನನಗೆ ತಿಳಿದಿಲ್ಲ’’ ಎಂದು ಖರ್ಗೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಮಣಿಸಲು ಪಾಟ್ನಾದಲ್ಲಿ ಇಂದು ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ; 18 ಪಕ್ಷಗಳು ಭಾಗಿ

“ಸುಮಾರು 18 ರಿಂದ 20 ಪಕ್ಷಗಳು ಯಾವುದನ್ನು ವಿರೋಧಿಸಬೇಕು ಮತ್ತು ಯಾವುದನ್ನು ಸ್ವೀಕರಿಸಬೇಕು ಎಂಬುದರ ಕುರಿತು ಒಟ್ಟಾಗಿ ನಿರ್ಧರಿಸುತ್ತವೆ. ಹಾಗಾಗಿ ಈಗ ಏನನ್ನೂ ಹೇಳುವ ಬದಲು ಸಂಸತ್ತು ಪ್ರಾರಂಭವಾಗುವ ಮೊದಲು ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಎಐಸಿಸಿ ಅಧ್ಯಕ್ಷರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹರಿಯಾಣ | ಇಡಿ ದಾಳಿ; ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಬಂಧನ

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣ ಕಾಂಗ್ರೆಸ್...

ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ದೇಶದ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಕೇಸರೀಕರಣಗೊಳ್ಳುತ್ತಿವೆ ಎಂದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗುತ್ತಿರುವ...

ಸಾವಯವ ಕೃಷಿಗೆ ಹೆಸರುವಾಸಿಯಾದ ಪದ್ಮಶ್ರೀ ಪುರಸ್ಕೃತೆ ಕಮಲಾ ಪೂಜಾರಿ ನಿಧನ

ಸಾವಯವ ಕೃಷಿಗೆ ಹೆಚ್ಚು ಉತ್ತೇಜನ ನೀಡಿ ಹೆಸರುವಾಸಿಯಾದ ಪದ್ಮಶ್ರೀ ಪುರಸ್ಕೃತೆ ಕಮಲಾ...

ಬಿಹಾರದಲ್ಲಿ ಸೇತುವೆಗಳ ನಿರ್ಮಿಸಿದ ಸಂಸ್ಥೆಯ ಕಚೇರಿಗಳ ಮೇಲೆ ಇಡಿ ದಾಳಿ

ಬಿಹಾರದಲ್ಲಿ ಸೇತುವೆಗಳ ನಿರ್ಮಿಸಿದ ನಿರ್ಮಾಣ ಸಂಸ್ಥೆ ಎಸ್‌ಪಿ ಸಿಂಗ್ಲಾ ಗ್ರೂಪ್ ಆಫ್...