ಬ್ಯಾಲೆಟ್ ಪೇಪರ್ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆ ನಿರ್ಧಾರ ಸ್ವಾಗತಾರ್ಹ : ವೆಲ್ಫೇರ್ ಪಾರ್ಟಿ

Date:

ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್‌ಗಳ ಮೂಲಕ ನಡೆಸುಬೇಕೆಂದು ಕರ್ನಾಟಕ ರಾಜ್ಯ ಸರ್ಕಾರ ತೀರ್ಮಾನಿಸಿರುವುದು ಹಾಗೂ ಅದನ್ನು ರಾಜ್ಯ ಚುನಾವಣಾ ಆಯೋಗ ಸಕಾರಾತ್ಮಕ ಪ್ರತಿಕ್ರಿಯೆ ನೀಡಿರುವುದನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಡ್ವೋಕೇಟ್ ತಾಹೇರ್ ಹುಸೈನ್ ಸ್ವಾಗತಿಸಿದ್ದಾರೆ.

- Advertisement -

ಇತ್ತೀಚೆಗೆ ಅನೇಕ ರಾಜ್ಯಗಳಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಮತ ಕಳ್ಳತನ ಆಗಿದೆ ಎಂಬ ಸಾಕ್ಷ್ಯಸಮೇತದ ಇಂಡಿಯಾ ಒಕ್ಕೂಟದ ನಾಯಕರುಗಳ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡದ ಪ್ರಧಾನಿಗಳ ಉದ್ದಟತನ ಒಂದು ಕಡೆ. ಮತ್ತೊಂದು ಕಡೆ ಆರೋಪಿತ ಸ್ಥಾನದಲ್ಲಿ ಇರುವ ಕೇಂದ್ರ ಚುನಾವಣಾ ಆಯೋಗವು ಸೂಕ್ತ ಸ್ಪಷ್ಟೀಕರಣಗಳನ್ನು ಹಾಗೂ ಸಮಜಾಯಿಷಿಗಳನ್ನು ನೀಡದೆ, ಆರೋಪ ಮಾಡಿದ್ದ ನಾಯಕರುಗಳ ವಿರುದ್ಧವೇ ರಾಜಕೀಯ ಪ್ರತಿಕ್ರಿಯೆಗಳನ್ನು ನೀಡಿ ಮುಚ್ಚಿ ಹಾಕುವ ತಂತ್ರಗಾರಿಕೆಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಇವರ ಈ ಎಲ್ಲ ನಡೆಯಿಂದಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಹಾಗೂ ಕೇಂದ್ರ ಸರ್ಕಾರಕ್ಕೆ ಆಮೂಲಾಗ್ರ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಇಚ್ಛೆ ಇಲ್ಲದಿರುವುದು ದೇಶದ ಜನತೆಗೆ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಬ್ಯಾಲೆಟ್ ಪೇಪರ್ ಬಳಕೆಯ ನಿರ್ಧಾರ ಕೈಗೊಂಡಿರುವುದು ಅತ್ಯಂತ ಸ್ವಾಗತಾರ್ಹ ಕ್ರಮ ಎಂದು ತಾಹೇರ್ ಹುಸೈನ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಸಿಕಾಂತ್ ಸೆಂಥಿಲ್

ದೇಶದ ಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಮತ ಕಳ್ಳತನ ಮಾಡಿ ಅಧಿಕಾರ ಪಡೆದುಕೊಳ್ಳುವ ಪ್ರಬಲರ ಹುನ್ನಾರ ತಪ್ಪಬೇಕಾದರೆ ಬ್ಯಾಲೆಟ್ ಪೇಪರ್‌ನ ಅವಶ್ಯಕತೆ ಅತ್ಯಂತ ಅವಶವಾಗಿದೆ. ಪಕ್ಷವು ಎಲ್ಲ ಸ್ತರಗಳಲ್ಲಿಯೂ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತದೆ. ಭಾರತೀಯ ಜನತಾ ಪಕ್ಷಕ್ಕೆ ಮತ ಕಳ್ಳತನವನ್ನು ನಿಜಕ್ಕೂ ತಡೆಗಟ್ಟುವ ಮನಸ್ಸಿದ್ದಲ್ಲಿ ಬಿಜೆಪಿ ಅಧಿಕಾರ ಹೊಂದಿರುವ ಇನ್ನಿತರ ರಾಜ್ಯಗಳಲ್ಲಿಯೂ ಸಹ ಇದೇ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸುತ್ತದೆ ಎಂದು ತಾಹೇರ್ ಹುಸೈನ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...

2029ರ ಲೋಕಸಭಾ ಚುನಾವಣೆ: ಸೋಲಲು ಸಿದ್ಧವಿರುವಂತೆ ರಾಹುಲ್‌ಗೆ ಅಮಿತ್ ಶಾ ಸವಾಲು

ವಿಪಕ್ಷಗಳ ಇಂಡಿಯಾ ಒಕ್ಕೂಟ ನಡೆಸಿದ ಬೃಹತ್ ರ‍್ಯಾಲಿಯ ಮಾರನೇ ದಿನವೇ, ಕೇಂದ್ರ...