ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣ ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ನಿರ್ಧಾರ: ಕಮಲ ಪಾಳಯದಿಂದ ಆಕ್ರೋಶ

Date:

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್​ ಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ, ಕಾಂಗ್ರೆಸ್​​ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ವಿರುದ್ಧ 2019 ರಲ್ಲಿ ಸಿಬಿಐ ತನಿಖೆಗೆ ಬಿಎಸ್ ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರ ಅನುಮತಿಯನ್ನು ನೀಡಿತ್ತು. ಆದರೆ ಇದೀಗ ಈ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸರ್ಕಾರದ ಈ ನಡೆ ಸಾಂವಿಧಾನಿಕ ಹಾಗೂ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ಸವಾರಿ ಮಾಡಿದ ಕ್ರಮವಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, “ಸಂವಿಧಾನದ ಘನತೆ, ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ನಿಟ್ಟಿನಲ್ಲಿ ತನ್ನದಲ್ಲದ ತಪ್ಪಿಗೂ ನೈತಿಕ ಹೊಣೆ ಹೊತ್ತು ಅಧಿಕಾರ ತ್ಯಾಗ ಮಾಡಿದ ಹಲವು ಮಹನೀಯರು ಗೌರವದ ರಾಜಕಾರಣಕ್ಕೆ ಇತಿಹಾಸ ಬರೆದು ಹೋಗಿದ್ದಾರೆ. ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ತನ್ನ ಸಂಪುಟ ಸದಸ್ಯ ಡಿಕೆ ಶಿವಕುಮಾರ್ ಅವರ ಮೇಲಿರುವ ಸಿಬಿಐ ತನಿಖೆಯ ಕೇಸ್ ಹಿಂದೆಗೆದುಕೊಳ್ಳುವ ನಿಲುವು ತೆಗೆದುಕೊಂಡಿರುವುದು ಸಾಂವಿಧಾನಿಕ ಹಾಗೂ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ಸವಾರಿ ಮಾಡಿದ ಕ್ರಮವಾಗಿದೆ” ಎಂದು ಟೀಕಿಸಿದ್ದಾರೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಡಿಕೆ ಶಿವಕುಮಾರ್ ಅವರ ವಿರುದ್ಧದ ಆಸ್ತಿ ಅವ್ಯವಹಾರ ಪ್ರಕರಣವನ್ನು ಹಿಂಪಡೆದಿರುವುದನ್ನು ನಾನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಈ ಬಗ್ಗೆ ಸರ್ಕಾರ ಮರು ಪರಿಶೀಲನೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್. ಅಶೋಕ ಕೂಡಾ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ‘ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದು ಕಾನೂನು ಬಾಹಿರ ಕ್ರಮ. ಇದು ಖಂಡನಾರ್ಹ’ ಎಂದಿದ್ದಾರೆ.

‘ಸರ್ಕಾರದ ಈ ತೀರ್ಮಾನ ಕಾನೂನು ಬಾಹಿರ. ಹೈಕೋರ್ಟ್​​ನಲ್ಲಿ ಇನ್ನೂ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣವನ್ನು ರಾಜಕೀಯಗೊಳಿಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನ ಬದ್ಧ ಸಂಸ್ಥೆಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ಕೆಟ್ಟ ಸಂದೇಶ ರವಾನಿಸಲಾಗಿದೆ. ಇದನ್ನು ಸಮಾಜ ಮತ್ತು ನ್ಯಾಯಾಂಗ ಗಮನಿಸುತ್ತದೆ. ಪ್ರತಿರೋಧ ಬರುವ ತೀರ್ಪು ಬಂದರೇ ಅಚ್ಚರಿ ಪಡಬೇಕಿಲ್ಲ. ಕಾಂಗ್ರೆಸ್​ನವರು ತಪ್ಪನ್ನು ಮುಚ್ಚಿಕೊಳ್ಳುವುದಕ್ಕೆ ಹೊರಟಿದ್ದಾರೆ’ ಎಂದು ಸಂಸದ ಬಿ ವೈ ರಾಘವೇಂದ್ರ ಕಿಡಿಕಾರಿದ್ದಾರೆ.

‘ಸಚಿವ ಸಂಪುಟ ದುರ್ಬಳಕೆ ‌ಮಾಡಿಕೊಳ್ಳುತ್ತಿರುವ ಮೊದಲ ವ್ಯಕ್ತಿ ಡಿಕೆ ಶಿವಕುಮಾರ್. ಈ ಹಿಂದೆ ನನ್ನ ವಿರುದ್ಧ ಆರೋಪ ಬಂದಾಗ ರಾಜೀನಾಮೆ ಕೊಟ್ಟಿದ್ದೆ. ಸಿಎಂ ಸಿದ್ದರಾಮಯ್ಯಗೆ ಕುರ್ಚಿ ಮುಖ್ಯ ಹೊರತು ನ್ಯಾಯವಲ್ಲ. ಉದ್ದುದ್ದ ಭಾಷಣ ಮಾಡುವ ನಾಯಕರಿಗೆ ಇದು ಗೊತ್ತಿಲ್ಲವೇ? ಕಾಂಗ್ರೆಸ್ ನಾಯಕರಿಗೆ ನಾಚಿಕೆ ಆಗಬೇಕು. ಗ್ಯಾರಂಟಿ ಯೋಜನೆ ಹೆಸರಲ್ಲಿ ಮೋಸ ಮಾಡಿ ಅಧಿಕಾರಕ್ಕೆ ‌ಬಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನ ಬುದ್ಧಿ ಕಲಿಸುತ್ತಾರೆ’ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ವಾಗ್ದಾಳಿ ಮಾಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...