ಭಾರತದ ಭಾವೈಕ್ಯತಾ ಪರಂಪರೆ ಕಾಪಾಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ ಭರವಸೆ

Date:

Advertisements
  • ದ್ವೇಷದ ವಾತಾವರಣ ಹರಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
  • ಸೇಂಟ್ ಮೇರೀಸ್ ಬೆಸಿಲಿಕಾ ಚರ್ಚ್ ಭಾವೈಕ್ಯತಾ ಕೇಂದ್ರ: ಸಿಎಂ

ಭಾರತವೇ ಒಂದು ಭಾವೈಕ್ಯ ಕೇಂದ್ರ. ಇಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ ದ್ವೇಷಕ್ಕೆ ಜಾಗ ಇಲ್ಲ. ಆದರೆ, ಕೆಲವರು ಮನುಷ್ಯ ದ್ವೇಷವನ್ನೇ ಸಂಸ್ಕೃತಿಯನ್ನಾಗಿ ಆಚರಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ವಾತಾವರಣ ಹರಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಭಾರತದ ಭಾವೈಕ್ಯತಾ ಪರಂಪರೆ ಕಾಪಾಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್‌ನಲ್ಲಿ ತಾಯಿ ಮೇರಿ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ಯಾವ ಧರ್ಮವೂ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಆದರೆ ಕೆಲವು ಕಪಟಿಗಳು ಧರ್ಮದ ಹೆಸರಿನಲ್ಲಿ ಮನುಷ್ಯರನ್ನು, ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಇಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಅನೈತಿಕ ಪೊಲೀಸ್‌ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅವರಿಗೆ ತಕ್ಕ ಕಾನೂನಿನ ಶಾಸ್ತಿ ಆಗಲಿದೆ” ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

“ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತ್ಯಂತ ದೊಡ್ಡ ಭಾವೈಕ್ಯತಾ ಕೇಂದ್ರ. ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲ ಜಾತಿ, ಧರ್ಮದವರು ಬರುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ಹೀಗಾಗಿ ನಾನು ಈ ಜಯಂತೋತ್ಸವಕ್ಕೆ ಮತ್ತು ಹಬ್ಬಕ್ಕೆ ಪ್ರತೀ ವರ್ಷ ತಪ್ಪದೆ ಹಾಜರಾಗುತ್ತೇನೆ. ಇದು ನನಗೆ ಬಹಳ ಖುಷಿಯ ಸಂಗತಿ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಕೋಮುವಾದಿ ಪಕ್ಷದ ಜೊತೆ ಜೆಡಿಎಸ್‌ ಹೋಗುವುದು ಅಚ್ಚರಿ ತಂದಿದೆ: ಬಿಜೆಪಿ ಸಂಸದ ಬಚ್ಚೇಗೌಡ

“ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರೀಸ್ ನಿಲ್ದಾಣ ಎಂದು ಹೆಸರಿಡಬೇಕು ಎನ್ನುವುದೂ ಸೇರಿ ಸಮುದಾಯದ ಮುಖಂಡರು ಮುಂದಿಟ್ಟಿರುವ ಮೂರು ಬೇಡಿಕೆಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಅವರು ಭರವಸೆ ನೀಡಿದರು.

ಸದ್ಯದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ

“ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ನಾವು ಬಜೆಟ್‌ನಲ್ಲೇ ಘೋಷಿಸಿದ್ಸೇವೆ. ಇದಕ್ಕಾಗಿ ನೂರು ಕೋಟಿ ರೂಪಾಯಿ ಮೀಸಲಿಟ್ಟು ಆದಷ್ಟು ಬೇಗ ನಿಗಮ ಸ್ಥಾಪಿಸಿ ಅದಕ್ಕೆ ಅರ್ಹ ಅಧ್ಯಕ್ಷರನ್ನು ನೇಮಿಸಲಾಗುವುದು” ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಆರ್ಚ್ ಬಿಷಪ್ ಪರಮಪೂಜ್ಯ ಡಾ.ಪೀಟರ್ ಮಚಾದೋ ಸೇರಿ ಹಲವು ಧರ್ಮಗುರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X