ಪಾಕ್‌ ಪರ ಘೋಷಣೆ ಆರೋಪ | ವಿಚಾರಣೆಗೆ 26 ಮಂದಿಯ ಪಟ್ಟಿ ತಯಾರು, 8 ಜನರ ವಿಚಾರಣೆ

Date:

Advertisements

ರಾಜ್ಯಸಭೆ ಚುನಾವಣೆ ಗೆಲುವಿನ ಬಳಿಕ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣ ಸಂಬಂಧ ಈಗಾಗಲೇ ಒಂದು ವಿಡಿಯೋದ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್​ಎಸ್​ಎಲ್) ವರದಿ ಪೊಲೀಸರ ಕೈಸೇರಿದ ಬೆನ್ನಲ್ಲೇ ಮತ್ತಷ್ಟು ವಿಡಿಯೋಗಳನ್ನು ಎಫ್​ಎಸ್​ಎಲ್​ಗೆ ಸಲ್ಲಿಸಲಾಗಿದೆ.

ಘಟನೆಯ ಸಂಬಂಧ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ಇನ್ನಷ್ಟು ವಿಡಿಯೋಗಳನ್ನು ಪರೀಕ್ಷೆಗಾಗಿ ಎಫ್‌ಎಸ್ ಎಲ್​ಗೆ ಕಳುಹಿಸಿದ್ದಾರೆ. ಸದ್ಯ ಆಡಿಯೋ ಉಚ್ಚಾರಣೆ ಬಗ್ಗೆ ಪೊಲೀಸರು ಎಫ್​ಎಸ್​ಎಲ್​ನಿಂದ ಮೌಖಿಕ ಮಾಹಿತಿ ಪಡೆದಿದ್ದು, ಇದನ್ನು ಆಧರಿಸಿ ತನಿಖೆ ಚುರುಕುಗೊಳಿಸಿದ್ದಾರೆ.

ಸಂಪೂರ್ಣ ಎಫ್​ಎಸ್​ಎಲ್ ವರದಿ ಬರಲು ಮತ್ತಷ್ಟು ಸಮಯ ಅಗತ್ಯ ಇದೆ. ವರದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿರುವ ಬಗ್ಗೆ ಧೃಡಪಡಬೇಕು. ಧೃಡ ಆದ ಕೂಡಲೇ ಕೂಗಿದವರು ಯಾರು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಇದಕ್ಕೆ ಅಲ್ಲಿದ್ದವರ ಎಲ್ಲರ ವಾಯ್ಸ್ ಸ್ಯಾಂಪಲ್ ಅನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದಾರೆ. ವಿಧಾನಸೌಧದ ಆಡಿಯೋ ಜೊತೆ ಪೊಲೀಸರು ಸಂಗ್ರಹಿಸಿದ ವಾಯ್ಸ್ ಸ್ಯಾಂಪಲ್ ಅನಾಲಿಸಿಸ್ ನಡೆಸಲಾಗುತ್ತದೆ.

Advertisements

8 ಮಂದಿ ವಿಚಾರಣೆ

ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೂಗಿದ ಸಂಬಂಧ ವಿಧಾನಸೌಧ ಪೊಲೀಸರು ಇಲ್ಲಿಯವರೆಗೆ 8 ಮಂದಿಯ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ವಿಚಾರಣೆ ವೇಳೆ ಏಳು ಮಂದಿಯು ತಾವು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದಿದ್ದಾರೆ.

8 ಮಂದಿ ಐಕಿ ಪೈಕಿ ಮೂವರ ಧ್ವನಿ ಮಾದರಿಯನ್ನು ​ಪೊಲೀಸರು ಪಡೆದು ವಿಧಿವಿಜ್ಞಾನ ಪ್ರಯೋಗಾಲಯ (ಎಫ್​ಎಸ್​ಎಲ್) ಗೆ ರವಾನೆ ಮಾಡಲಾಗಿದೆ. ಇನ್ನು ಧ್ವನಿ ಮಾದರಿ ಜೊತೆಗೆ ವಿಡಿಯೋ ತುಣಕನ್ನು ಕಳುಹಿಸಿದ್ದಾರೆ.

“ಪೊಲೀಸರು ಎಲ್ಲ ಮಾಧ್ಯಮಗಳಿಂದ ವಿಡಿಯೋ ತುಣಕುಗಳನ್ನು ಪಡೆದಿದ್ದಾರೆ. ಈ ಎಲ್ಲ ವಿಡಿಯೋಗಳಲ್ಲಿ ಕೇವಲ ಒಂದು ವಿಡಿಯೋ ತುಣುಕನ್ನು ಮಾತ್ರ ಎಫ್​ಎಸ್​ಎಲ್​ಗೆ ರವಾನೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

26 ಮಂದಿಯ ಪಟ್ಟಿ

ಇನ್ನು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಶಂಕೆ ಮೇಲೆ ವಿಧಾನಸೌಧ ಪೊಲೀಸರು 26 ಮಂದಿಯ ಪಟ್ಟಿ ತಯಾರಿಸಿದ್ದು, ಇನ್ನೂ 19 ಜನರ ವಿಚಾರಣೆ ಬಾಕಿ ಇದೆ.
ರಾಜ್ಯಸಭಾ ಸದಸ್ಯ ನಾಸಿ‌ರ್ ಹುಸೇನ್ ವಿಜಯೋತ್ಸವದ ವೇಳೆ ಪಕ್ಕದಲ್ಲಿ ಇದ್ದ ಬೆಂಬಲಿಗ ಬ್ಯಾಡಗಿ ಮೂಲದ ಮೊಹಮ್ಮದ್ ಶಫಿ ನಾಶಿಪುಡಿ ಪಾಕ್ ಪರ ಘೋಷಣೆ ಕೂಗಿದ್ದಾನೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಬ್ಯಾಡಗಿಗೆ ತೆರಳಿದ್ದ ಪೊಲೀಸರ ತಂಡ, ಮೊಹಮ್ಮೆದ್ ಶಫಿಯನ್ನು ವಶಕ್ಕೆ ಪಡೆದು ನಗರಕ್ಕೆ ಕರೆತಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಈತನ ಧ್ವನಿ ಮಾದರಿ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X