ಮಾನನಷ್ಟ ಪ್ರಕರಣ | ತಡೆ ಕೋರಿದ್ದ ‌ಬಿಜೆಪಿ ಶಾಸಕ ಯತ್ನಾಳ್‌ಗೆ ಹೈಕೋರ್ಟ್ ಚಾಟಿ

Date:

ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ಗೆ ಹೈಕೋರ್ಟ್ ಪೀಠ ತರಾಟೆಗೆ ತೆಗೆದುಕೊಂಡಿದೆ. ಕುಟುಂಬ ಹಾಗೂ ವಯಕ್ತಿಕ ನಿಂದನೆ ಹೇಳಿಕೆ ಖಂಡಿಸಿ, ಯತ್ನಾಳ್‌ ವಿರುದ್ಧ ಕೋರ್ಟ್ ಮೊರೆ ಹೋಗಿದ್ದ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

- Advertisement -

ಪ್ರಕರಣಕ್ಕೆ ತಡೆ ಕೋರಿ ಬಸವನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣವನ್ನ ಆಲೀಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದರು. ಅಲ್ಲದೇ ಶಾಸಕರ ಕೀಳು ಅಭಿರುಚಿಯ ಹೇಳಿಕೆಯನ್ನು ಪ್ರಶ್ನಿಸಿದರು. “ನೀವು ಹೇಳಿಕೆ ನೀಡಿದ್ದು ಹೌದೋ ಅಲ್ಲವೋ” ಎಂದು ಪ್ರಶ್ನಿಸಿದರು. ಹೇಳಿಕೆ ನೀಡಿದ್ದನ್ನು ಯತ್ನಾಳ್ ಪರ ವಕೀಲ ಒಪ್ಪಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿಯವರು, “ಈ ರೀತಿಯ ಪದ ಬಳಕೆ ಯಾವ ಅರ್ಥ ನೀಡುತ್ತದೆ. ವಯಕ್ತಿಕ ತೇಜೋವಧೆಗೆ ನೀವು ಏಕೆ ಇಳಿದಿರಿ? ಇತ್ತಿಚೆಗೆ ಈ ರೀತಿಯ ಹೇಳಿಕೆಗಳು ಮಾಮೂಲಾಗಿವೆ. ಒಂದು ಸಮುದಾಯದ ವಿರುದ್ಧ ಈ ರೀತಿ ಪದಬಳಕೆ ಸರಿಯಲ್ಲ. ಮಹಿಳೆಯೊಬ್ಬರು ಮುಸ್ಲಿಂ ಪತ್ನಿ ಆಗಿದ್ದಾಕ್ಷಣ ಈ ರೀತಿಯ ಹೇಳಿಕೆ ನೀಡುವುದೇ? ಇದು ಸರಿಯಲ್ಲ” ಎಂದು ಚಾಟಿ ಬೀಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದು ದೇಶ ಒಂದು ಚುನಾವಣೆ- ಒಕ್ಕೂಟ ವ್ಯವಸ್ಥೆ ಧ್ವಂಸಕ್ಕೆ ಅಡಿಗಲ್ಲು

ಸ್ವತಃ ಯತ್ನಾಳ್ ಪರ ವಕೀಲ ಸಿ.ವಿ ನಾಗೇಶ್ ಅವರು ಯತ್ನಾಳ್ ಅವರ ಹೇಳಿಕೆಯನ್ನು ಸಮರ್ಥಿಸಲ್ಲ ಎಂದು ಕೋರ್ಟ್ ಮುಂದೆ ತಪ್ಪು ಒಪ್ಪಿಕೊಂಡರು. ಸಚಿವರ ಹೇಳಿಕೆಗೆ ಪ್ರತಿಯಾಗಿ ಯತ್ನಾಳ್ ಅವರು ಹೇಳಿಕೆ ನೀಡಿದ್ದಾರೆ. ಆದರೆ ಕುಟುಂಬ ನಿಂಧಿಸುವ ಉದ್ದೇಶದಿಂದ ಈ ಹೇಳಿಕೆ ನೀಡಿಲ್ಲ ಎಂದು ಯತ್ನಾಳ್ ಪರ ವಕೀಲರಿ ನ್ಯಾಯಮೂರ್ತಿ ಅವರಿಗೆ ಸಮಜಾಯಿಶಿ ನೀಡಲು ಪ್ರಯತ್ನಿಸಿದರು. ಆದರೆ ಯತ್ನಾಳ್ ಪರ ವಕೀಲರ ವಾದವನ್ನು ಒಪ್ಪದ ಜಸ್ಟೀಸ್ ನಾಗಪ್ರಸನ್ನ ಅವರು ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...