ಮಾನನಷ್ಟ ಮೊಕದ್ದಮೆ: ರಾಹುಲ್‌ಗಾಂಧಿ, ಸಿದ್ದರಾಮಯ್ಯ, ಶಿವಕುಮಾರಗೆ ಸಮನ್ಸ್‌

Date:

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರಕರಣ ಸಂಬಂಧ ಜುಲೈ 27ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮನ್ಸ್‌ ಜಾರಿ ಮಾಡಿದ್ದಾರೆ.

- Advertisement -

ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪಗಳಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್‌ ಅವರು ಮೇ 9 ರಂದು ಕಾಂಗ್ರೆಸ್‌ನ ಈ ಮೂವರು ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

ದೂರಿನಲ್ಲಿ, 2023ರ ಮೇ 5ರಂದು ಪತ್ರಿಕೆಗಳಲ್ಲಿ ಪ್ರಕಟವಾದ ಕಾಂಗ್ರೆಸ್ ಜಾಹೀರಾತಿನಲ್ಲಿ ಬಿಜೆಪಿ ಸರ್ಕಾರವು 40% ಭ್ರಷ್ಟಾಚಾರದಲ್ಲಿ ತೊಡಗಿದೆ. ಹಿಂದಿನ ನಾಲ್ಕು ವರ್ಷಗಳಲ್ಲಿ ₹ 1.5 ಲಕ್ಷ ಕೋಟಿ ಲೂಟಿ ಮಾಡಿದೆಯೆಂದು ದೂರಿದ್ದಾರೆ. ಆ ಆರೋಪಗಳು ‘ಆಧಾರರಹಿತ’ ಮತ್ತು ‘ಮಾನಹಾನಿಕರ’ ಎಂದು ಕೇಶವ ಪ್ರಸಾದ್ ಹೇಳಿದ್ದಾರೆ.

ಪ್ರಕರಣದ ಕುರಿತು ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯಿಸಿದ್ದು, “ಬಿಜೆಪಿ ಹತಾಶೆಯಿಂದ ವರ್ತಿಸುತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ.

“ಬಿಜೆಪಿ ಚುನಾವಣೆಯಲ್ಲಿ ಸೋತಿದೆ. ಬಿಜೆಪಿಗರನ್ನು ಜನರು ತಿರಸ್ಕರಿಸಿದ್ದಾರೆ. ಅವರು ಈಗ ಹತಾಶರಾಗಿದ್ದಾರೆ. ಭ್ರಷ್ಟಾಚಾರ ಆರೋಪಗಳ ಬಗ್ಗೆ ಪ್ರಧಾನಿ ತನಿಖೆಗೆ ಆದೇಶಿಸಲಿಲ್ಲ. ಬೊಮ್ಮಾಯಿ ಅದರ ಬಗ್ಗೆ ಕ್ರಮ ಕೈಗೊಂಡಿಲ್ಲ. ನಾವು ಬಿಜೆಪಿಯ ದುರಾಡಳಿತವನ್ನು ಜನರ ಮುಂದಿಟ್ಟೆವು. ಆದರೆ, ಈಗ ಬಿಜೆಪಿಗರು ದೂರು ದಾಖಲಿಸುವ ಪ್ರಹಸನ ನಡೆಸುತ್ತಿದ್ದಾರೆ” ಎಂದು ಕಾಂಗ್ರೆಸ್ ಹಿರಿಯ ನಾಯಕ ಸಲೀಂ ಅಹ್ಮದ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಉಚಿತ ಅಕ್ಕಿ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ವಿವಿಧ ಇಲಾಖೆಗಳಲ್ಲಿ 40% ಕಮಿಷನ್ ಪಡೆಯುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದ ನಂತರ, ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪೇ-ಸಿಎಂ ಅಭಿಯಾನ ನಡೆಸಿತ್ತು. ಭ್ರಷ್ಟಾಚಾರದ ಆರೋಪಗಳನ್ನು ಚುನಾವಣಾ ವಿಷಯವನ್ನಾಗಿಸಿತ್ತು. ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆದು ಸರ್ಕಾರ ರಚಿಸಿತು.

ಅಂದಹಾಗೆ, ಈ ಮಧ್ಯೆ, ಮೋದಿ ಉಪನಾಮದ ಕುರಿತು ಟೀಕೆ ಮಾಡಿದ್ದ ರಾಹುಲ್‌ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಪನ್ನು ಪ್ರಶ್ನಿಸಿ ರಾಹುಲ್‌ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು...

ಮಂಗಳೂರು | ದಸರಾ ರಜೆಯಲ್ಲೇ ಸೆಮಿಸ್ಟರ್ ಪರೀಕ್ಷೆ: ಸಂತ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ಹಬ್ಬದ ರಜೆ ಹಾಗೂ ಪದವಿ ಸೆಮಿಸ್ಟರ್ ಪರೀಕ್ಷೆಗಳ ವೇಳಾಪಟ್ಟಿ ವಿಚಾರವಾಗಿ...

ಕಲಬುರಗಿ | ವ್ಯಾಪಾರದಲ್ಲಿ ₹62.77 ಲಕ್ಷ ವಂಚನೆ : ಪ್ರಕರಣ ದಾಖಲು

ಮೆಣಸಿನಕಾಯಿ ವ್ಯಾಪಾರದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸರಕು ಖರೀದಿಸಿ, ಹಣ...

ಕಲಬುರಗಿ | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನಗರದ ಹುಮನಾಬಾದ್ ರಸ್ತೆಯ ಹೋಟೆಲ್‌ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ...