ಬಿಜೆಪಿ ಸೋಲಿಸಿ-ಬಳ್ಳಾರಿ ಉಳಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಡೂರಲ್ಲಿ ಕರೆ

Date:

Advertisements

ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ. ಬಿಜೆಪಿ ಸೋಲಿಸಿ-ಬಳ್ಳಾರಿ ಉಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ದರು. ದೇವಸ್ಥಾನದ ಬಾಗಿಲಲ್ಲಿ ಒಬ್ನೇ ನಿಂತು ಭಾಷಣ ಮಾಡಿ ಹೋಗಿದ್ದೆ. ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡಲು ಜನ ಭಯ ಬೀಳ್ತಿದ್ರು ಎಂದು ರೆಡ್ಡಿ ದರ್ಬಾರ್ ಅವಧಿಯ ಘಟನೆಗಳನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದರು.

“ಅಕ್ರಮ ಗಣಿಗಾರಿಕೆ ವಿರುದ್ಧ, ರೆಡ್ಡಿ ಬ್ರದರ್ಸ್ ಬಳ್ಳಾರಿಯನ್ನು ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್‌ಗೆ ಕಾಲಿಟ್ಟರೂ ಜಿಲ್ಲಾ ಮಟ್ಟದ ಅಧಿಕಾರಿಗಳೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಣಲು ಬರಲಿಲ್ಲ. ಆ ಮಟ್ಟದಲ್ಲಿ ಅಧಿಕಾರಿಗಳಲ್ಲಿ ಭಯ, ಭೀತಿ ಸೃಷ್ಟಿ ಮಾಡಿದ್ದರು” ಎಂದರು.

Advertisements

“ನಾನು ಇಬ್ರಾಹಿಂ ಚುನಾವಣಾ ಪ್ರಚಾರಕ್ಕೆ ಬಂದರೆ ಕಾರ್ಯಕ್ರಮ ಮಾಡಲು, ನನಗೆ ಭಾಷಣ ಮಾಡಲು ಜಾಗ ಕೊಡಲಿಲ್ಲ. ದೇವಸ್ಥಾನದ ಬಾಗಿಲಲ್ಲಿ ನಾನು ಭಾಷಣ ಮಾಡಿ ಹೋದೆ. ಮತ್ತೆ ಏನಾದರೂ ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಮತ್ತೆ ಅದೇ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ. ಬಿಜೆಪಿಯನ್ನು ಸೋಲಿಸಿ ಬಳ್ಳಾರಿಯನ್ನು ಉಳಿಸಿ” ಎಂದು ಕರೆ ನೀಡಿದರು.

“ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲೀನಿಕ್ ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ಮಾತ್ರ. ಬಿಜೆಪಿ ಅವಧಿಯಲ್ಲಿ ಲೂಟಿ ಲೂಟಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ” ಎಂದು ಹೇಳಿದರು.

“ಹೈದ್ರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿ ಮಾಡಿದ್ದು ಕಾಂಗ್ರೆಸ್ . ನಮ್ಮ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ , ಧರಂಸಿಂಗ್ ಮತ್ತು ನಾನು ಸೇರಿ 371 ಜೆ ಜಾರಿ ಮಾಡಲು ಕಾರಣ. ಬಳಿಕ ನಾನು ಮುಖ್ಯಮಂತದರಿಯಾಗಿ 5000 ಕೋಟಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿದೆ. 371 ಜೆ ಬಂದಿದ್ದರಿಂದ ಇಲ್ಲಿನ ಮಕ್ಕಳು ಎಂಜಿನಿಯರ್ ಗಳಾದರು. ಡಾಕ್ಟರ್ ಗಳಾದರು. ಸರ್ಕಾರಿ ಕೆಲಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸೇರಲು ಅವಕಾಶವಾಯಿತು. ಈಗ ಅವರು ಅಕ್ರಮ ಗಣಿಗಾರಿಕೆಯ ಹಣದ ಚೀಲಗಳನ್ನು ಹೊತ್ತುಕೊಂಡು ಬಂದು ಕುಳಿತಿದ್ದಾರೆ. ಅವರ ಹಣಕ್ಕೆ ಮರುಳಾಗುತ್ತೀರಾ? ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಭಾಗ್ಯದ ಬಾಗಿಲು ತೆರೆದ ಕಾಂಗ್ರೆಸ್ ಕೈ ಹಿಡಿಯುತ್ತೀರಾ?ಪ್ರಾಮಾಣಿಕವಾಗಿ ಯೋಚಿಸಿ ನಿರ್ಧರಿಸಿ” ಎಂದರು.

“ಹತ್ತು ಹಲವು ಭಾಗ್ಯಗಳನ್ನು ಕೊಟ್ಟಿದ್ದು, ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿ ವರ್ಷಕ್ಕೆ 56 ಸಾವಿರ ಕೋಟಿ ಹಣವನ್ನು ನಿಮ್ಮ ಖಾತೆಗೆ ನೇರವಾಗಿ ಹಾಕ್ತಾ ಇರುವುದು ನಮ್ಮ ಸರ್ಕಾರ. ಆದ್ದರಿಂದ ನಿಮ್ಮ ಬದುಕಿಗೆ ಪ್ರತೀ ತಿಂಗಳು ಬೆಳಕು ನೀಡುವ ನಮಗೆ ಬೆಂಬಲಿಸಬೇಕೋ, ಚುನಾವಣೆ ಬಂದಾಗ ಮಾತ್ರ ಕೊಡುವ ಅಕ್ರಮ ಗಣಿಗಾರಿಕೆಯ ಹಣಕ್ಕೆ ಓಟು ಹಾಕಿದ್ರೆ ಅದು ಅನ್ಯಾಯ ಆಗಲ್ವಾ” ಎಂದು ಪ್ರಶ್ನಿಸಿದರು.

“ನಾವಿನ್ನೂ ಮೂರೂವರೆ ವರ್ಷ ಅಧಿಕಾರದಲ್ಲಿ ಇರ್ತೀವಿ. ಅಲ್ಲಿಯವರೆಗೂ ನಾವು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಮುಂದುವರೆಸ್ತೀವಿ. ಬಿಜೆಪಿ ಅಪಪ್ರಚಾರವನ್ನು ನಂಬಬೇಡಿ‌. ಸುಳ್ಳುಗಳಿಗೆ ಮೋಸ ಹೋಗಬೇಡಿ. ಹೃದಯದ ಮಾತು ಕೇಳಿ ಅಭಿವೃದ್ಧಿಗೆ ನಿಮ್ಮ ಮತ ನೀಡಿ. ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದ ಹಾಗೆ‌. ಅನ್ನಪೂರ್ಣಮ್ಮ ಅವರಿಗೆ ಬೀಳುವ ಪ್ರತೀ ಓಟು ನನಗೆ ಹಾಕಿದಂತೆ, ಸಂತೋಷ್ ಲಾಡ್ ಅವರಿಗೆ ಹಾಕಿದಂತೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X