ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ: ಎಚ್‌ಡಿಕೆ

Date:

Advertisements
  • ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ
  • ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುವ ಸರ್ಕಾರ ಜನರ ಆಶೋತ್ತರಳಿಗೆ ಸ್ಪಂದಿಸಲಿ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್‌ ಕೇವಲ 20 ಕ್ಷೇತ್ರಗಳಲ್ಲಿ ಮಾತ್ರವೇ ಗೆಲ್ಲುವ ಸಾಧ್ಯತೆಗಳು ದಟ್ಟವಾಗಿವೆ. ಈ ಹಿನ್ನೆಲೆ ಎಚ್‌ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, “ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ” ಎಂದು ಹೇಳಿದ್ದಾರೆ.

“ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು” ಎಂದು ಟ್ವೀಟ್‌ ಮಾಡಿದ್ದಾರೆ.

“ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಎಚ್ ಡಿ ದೇವೇಗೌಡರು, ಎಚ್ ಡಿ ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ಹೈ ವೋಲ್ಟೇಜ್‌ ಕ್ಷೇತ್ರದಲ್ಲಿ ಸ್ವರೂಪ್‌ ಜಯಬೇರಿ; ಪ್ರೀತಂ ಗೌಡಗೆ ಮುಖಭಂಗ

“ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರ್ಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ” ಎಂದು ಹಾರೈಸಿದ್ದಾರೆ.

“ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ” ಎಂದು ಭರವಸೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X