BJPಯಿಂದ TMCಗೆ ಪಕ್ಷಾಂತರ: ಶಾಸಕನ ಅನರ್ಹತೆಗೆ ಸುಪ್ರೀಂ ತಡೆ

Date:

ಬಿಜೆಪಿಯಿಂದ ಟಿಎಂಸಿಗೆ ಪಕ್ಷಾಂತರ ಮಾಡಿದ್ದ ಪಶ್ಚಿಮ ಬಂಗಾಳದ ಶಾಸಕ ಮುಕುಲ್ ರಾಯ್ ಅವರನ್ನು ಎಂಎಲ್‌ಎ ಸ್ಥಾನದಿಂದ ಅನರ್ಹಗೊಳಿಸಿದ್ದ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

- Advertisement -

ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ತನ್ನ ಸಾಂವಿಧಾನಿಕ ಅಧಿಕಾರ ಚಲಾಯಿಸಿರುವುದಾಗಿ ಹೇಳಿದ್ದ ಕೋಲ್ಕತ್ತಾ ಹೈಕೋರ್ಟ್‌ ಮುಕುಲ್ ರಾಯ್ ಅವರನ್ನು 2025ರ ನವೆಂಬರ್‌ನಲ್ಲಿ ಅನರ್ಹಗೊಳಿಸಿತ್ತು. ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಕೋಲ್ಕತ್ತಾ ಹೈಕೋರ್ಟ್‌ ತನ್ನ ಸಾಂವಿಧಾನಿಕ ಅಧಿಕಾರ ಬಳಸಿ, ಶಾಸಕರೊಬ್ಬರನ್ನು ಅನರ್ಹಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತಮ್ಮನ್ನು ವಿಧಾನಸಭೆಯಿಂದ ಅನರ್ಹಗೊಳಿಸಿರುವ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಮುಕುಲ್ ರಾಯ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಮುಕುಲ್ ರಾಯ್ ಅವರು ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ಸುಪ್ರೀಂ ಕೋರ್ಟ್‌ ಅವಕಾಶ ನೀಡಿದೆ. ಇದೇ ವರ್ಷ (2026) ಮಾರ್ಚ್‌-ಏಪ್ರಿಲ್‌ನಲ್ಲಿ ಬಂಗಾಳ ವಿಧಾನಸಭಾ ಚುನಾವಣೆ ನಡೆಯಲಿದ್ದು, ರಾಯ್ ಅವರಿಗೆ ರಾಜಕೀಯ ಸ್ವಸ್ಥತೆ ಸಿಕ್ಕಿದೆ ಎಂದು ಹೇಳಲಾಗಿದೆ.

ರಾಯ್ ಅವರು 2021ರ ಬಂಗಾಳ ಚುನಾವಣೆಯಲ್ಲಿ ಕೃಷ್ಣನಗರ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ, ಗೆದ್ದಿದ್ದರು. ಆದರೆ, ಅದೇ ವರ್ಷ ಜೂನ್‌ನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಅವರು ಟಿಎಂಸಿಗೆ ಸೇರಿದ್ದರು. ತಮ್ಮ ಶಾಸಕ ಸ್ಥಾನಮಾನವನ್ನು ಉಳಿಸಿಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...