ದೆಹಲಿ | ಎಎಪಿ ಕಚೇರಿ ‘ಸೀಲ್’ ಮಾಡಿದ ಪೊಲೀಸರು; ಆರೋಪ

Date:

Advertisements

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಬಂಧನ ಖಂಡಿಸಿ ಎಎಪಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಬಂಧನದಲ್ಲಿರುವ ಕೇಜ್ರಿವಾಲ್ ನೀಡಿರುವ ಸಂದೇಶವನ್ನ ಅವರ ಪತ್ನಿ ಓದುತ್ತಿರುವ ವಿಡಿಯೋವನ್ನು ಎಎಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಈ ಬೆನ್ನಲ್ಲೇ ದೆಹಲಿಯಲ್ಲಿರುವ ಎಎಪಿ ಕಚೇರಿಯನ್ನು ಪೊಲೀಸರು ಎಲ್ಲ ಕಡೆಗಳಿಂದ ಸೀಲ್ ಮಾಡಿದ್ದಾರೆ ಎಂದು ಪಕ್ಷದ ನಾಯಕರು ಆರೋಪಿಸಿದ್ದಾರೆ.

ತಮ್ಮನ್ನು ಪಕ್ಷದ ಕಚೇರಿಗೆ ಪ್ರವೇಶಿದಂತೆ ತಡೆಯಲಾಗುತ್ತಿದೆ ಎಂದು ಎಎಪಿ ಮುಖಂಡರಾದ ಅತಿಶಿ, ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ಇತರರು ಆರೋಪಿಸಿದ್ದಾರೆ.

ದೆಹಲಿಯಲ್ಲಿರುವ ಎಎಪಿ ಕಚೇರಿಯನ್ನು ಎಲ್ಲ ಕಡೆಯಿಂದಲೂಸೀಲ್‌’ ಮಾಡಲಾಗಿದ್ದು, ಪ್ರವೇಶ ನಿರ್ಬಂಧಿಸಲಾಗಿದೆ. ವಿಷಯವನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದುಎಂದು ದೆಹಲಿ ಸಚಿವೆ ಆತಿಶಿ ಹೇಳಿದ್ದಾರೆ.

Advertisements

ಕುರಿತುಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಆತಿಶಿ, “ದಿಲ್ಲಿಯಐಟಿಒನಲ್ಲಿರುವ ಪಕ್ಷದ ಕಚೇರಿಯನ್ನು ಎಲ್ಲ ಕಡೆಗಳಿಂದ ಸೀಲ್ ಮಾಡಲಾಗಿದೆ. ಚುನಾವಣೆ ಹತ್ತಿರದಲ್ಲಿರುವಾಗ ರಾಷ್ಟ್ರೀಯ ಪಕ್ಷವೊಂದರ ಕಚೇರಿಯನ್ನು ರೀತಿ ಹೇಗೆ ಬಂದ್ ಮಾಡಬಹುದುಎಂದು ಪ್ರಶ್ನಿಸಿದ್ದಾರೆ.

ಸಂವಿಧಾನವು ಎಲ್ಲರಿಗೂ ಚುನಾವಣೆಯಲ್ಲಿ ಸಮಾನ ಅವಕಾಶವನ್ನು ನೀಡುತ್ತದೆ. ಆದರೆ, ಕಚೇರಿಯನ್ನುಸೀಲ್‌’ ಮಾಡಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆಎಂದು ತಿಳಿಸಿದ್ದಾರೆ.

ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲು ಮತ್ತು ಚುನಾವಣಾ ಆಯುಕ್ತರನ್ನು ಭೇಟಿ ಮಾಡಲು ಆಯುಕ್ತರಲ್ಲಿ ಎಎಪಿ ಸಮಯಾವಕಾಶ ಕೇಳಿದೆ” ಎಂದಿದ್ದಾರೆ.

ಎಎಪಿ ರಾಷ್ಟ್ರೀಯ ವಕ್ತಾರ ಸೌರಭ್ ಭಾರದ್ವಾಜ್ ಕೂಡ ಪ್ರತಿಕ್ರಿಯಿಸಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೊದಲು ನೀರು ಕೊಟ್ಟು ಆಮೇಲೆ ಚುನಾವಣಾ ಪ್ರಚಾರಕ್ಕೆ ಬನ್ನಿ; ಕರವೇ ಟಿ.ಎ.ನಾರಾಯಣಗೌಡ

ಎಎಪಿ ನಾಯಕರ ಆರೋಪವನ್ನು ದೆಹಲಿ ಪೊಲೀಸರು ಅಲ್ಲಗಳೆದಿದ್ದಾರೆ. “ನಾವು ಯಾವುದೇ ಕಚೇರಿಯನ್ನು ಸೀಲ್ ಮಾಡಿಲ್ಲ. ಆ ಪ್ರದೇಶದಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಡಿಡಿ ಜಾರಿಗೊಳಿಸಲಾಗಿದೆ. ಹೀಗಾಗಿ, ಅಲ್ಲಿ ಪೊಲೀಸ್ಸಿಬ್ಬಂದಿ ನಿಯೋಜಿಸಲಾಗಿದೆ. ಜತೆಗೆ, ಆ ಸ್ಥಳಗಳಲ್ಲಿ ಸಭೆ ಸೇರುವುದನ್ನು ನಿಷೇಧಿಸಲಾಗಿದೆ” ಎಂದು ಡಿಸಿಪಿ (ಕೇಂದ್ರ) ಎಂ ಹರ್ಷವರ್ಧನ ಹೇಳಿದ್ದಾರೆ.

“ಎಎಪಿಯ 500ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ನಾಯಕರು ಶನಿವಾರ ಶಾಹೀದಿ ಪಾರ್ಕ್‌ನಲ್ಲಿ ಜಮಾಯಿಸಿದ್ದರು. ಸಭೆಗೆ ಅನುಮತಿ ಪಡೆಯದೆಯೇ ಮೆರವಣಿಗೆ ಮಾಡಿದ್ದರು. ಈ ಮಾರ್ಗದಲ್ಲಿ ನಿಷೇಧಾಜ್ಞೆ ವಿಧಿಸಲಾಗಿತ್ತು. ಅಲ್ಲದೆ, ಆ ರಸ್ತೆಯಲ್ಲಿ ನ್ಯಾಯಾಲಯ ಮತ್ತು ಹಲವು ರಾಜಕೀಯ ಪಕ್ಷಗಳ ಕಚೇರಿಗಳು ಇವೆ. ಹಾಗಾಗಿ, ಅವರನ್ನು ತಡೆಯಲಾಯಿತು. 25 ಮಂದಿಯನ್ನು ಬಂಧಿಸಿ, ನಂತರ ಬಿಡುಗಡೆ ಮಾಡಲಾಯಿತುಎಂದು ಅವರು ವಿವರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X