ಶಾಸಕರ ಪ್ರದೇಶ ಅಭಿವೃದ್ಧಿ ನಿಧಿ: 15 ಕೋಟಿಯಿಂದ 5 ಕೋಟಿ ರೂ.ಗೆ ಇಳಿಸಿದ ದೆಹಲಿ ಬಿಜೆಪಿ ಸರ್ಕಾರ

Date:

Advertisements

ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ (ಎಲ್‌ಎಡಿ) ನಿಧಿಯಡಿ ದೆಹಲಿಯಲ್ಲಿ ವಿಧಾನಸಭಾ ಕ್ಷೇತ್ರಗಳಿಗೆ ನೀಡಲಾಗುತ್ತಿದ್ದ ಮೊತ್ತವನ್ನು ವಾರ್ಷಿಕ 15 ಕೋಟಿ ರೂ.ನಿಂದ 5 ಕೋಟಿ ರೂ.ಗೆ ದೆಹಲಿ ಬಿಜೆಪಿ ಸರ್ಕಾರ ಇಳಿಸಿದೆ.

2024ರ ಅಕ್ಟೋಬರ್‌ನಲ್ಲಿ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಯನ್ನು ಹೀನಾಯವಾಗಿ ಸೋಲಿಸಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ, ದೆಹಲಿಯಲ್ಲಿ ನಾನಾ ಬದಲಾವಣೆಗಳಾಗುತ್ತಿವೆ. ಖಾಸಗಿ ಶಾಲೆಗಳ ಶಿಕ್ಷಣ ಶುಲ್ಕ ಹಾವಳಿ ಮತ್ತೆ ಹೆಚ್ಚಾಗಿದೆ. ಜನಪರ ಯೋಜನೆಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳಿವೆ.

ಈ ನಡುವೆಯೇ, ಎಲ್‌ಡಿಎ ನಿಧಿಯಡಿ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಶಾಸಕರಿಗಾಗಿ ನೀಡಲಾಗುವ ಅನುದಾನದಲ್ಲಿ ಬರೋಬ್ಬರಿ ತಲಾ 10 ಕೋಟಿ ರೂ. ಕಡಿತಗೊಳಿಸಲಾಗಿದೆ. 15 ಕೋಟಿ ರೂ.ನಿಂದ 5 ಕೋಟಿ ರೂ.ಗೆ ಇಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 2ರಂದು ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ಅನುದಾನ ಕಡಿತಗೊಳಿಸಿ ದೆಹಲಿ ನಗರಾಭಿವೃದ್ಧಿ ಇಲಾಖೆಯು ಆದೇಶ ಹೊರಡಿಸಿದೆ.

ದೆಹಲಿಯಲ್ಲಿನ 70 ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಎಲ್‌ಎಡಿ ಅಡಿಯಲ್ಲಿ ವಾರ್ಷಿಕ 350 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಈ ಹಿಂದೆ, ಎಎಪಿ ಸರ್ಕಾರದಲ್ಲಿ ಎಲ್‌ಎಡಿ ನಿಧಿಯಲ್ಲಿ ವಾರ್ಷಿಕ 1,050 ಕೋಟಿ ರೂ. ಮೀಸಲಿಡಲಾಗುತ್ತಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾರ್ಖಂಡ್‌ | ಆ್ಯಂಬುಲೆನ್ಸ್‌ ಸಿಗದೆ ಅನಾರೋಗ್ಯ ಪೀಡಿತ ಪತ್ನಿಯನ್ನು ಹೊತ್ತುಕೊಂಡು ನಡೆದ ವ್ಯಕ್ತಿ

ಅಗತ್ಯದ ಸಮಯದಲ್ಲಿ ಆಸ್ಪತ್ರೆಯವರು ಆ್ಯಂಬುಲೆನ್ಸ್‌ ಒದಗಿಸದ ಕಾರಣ, ವ್ಯಕ್ತಿಯೊಬ್ಬರು ತನ್ನ ಅನಾರೋಗ್ಯ...

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತ – 18 ಮಂದಿ ದುರ್ಮರಣ

ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು...

ವರದಕ್ಷಿಣೆ ದೌರ್ಜನ್ಯ | ಯೋಗಿ ರಾಜ್ಯದಲ್ಲಿ ಗರ್ಭಿಣಿಯನ್ನು ಹೊಡೆದು ಕೊಂದ ದುರುಳ ಕುಟುಂಬ

ರಾಮ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆಂದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ...

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು...

Download Eedina App Android / iOS

X