5 ಲಕ್ಷ ರೂ. ನಗದು ಸಮೇತ ಸಿಕ್ಕಿಬಿದ್ದ ದೆಹಲಿ ಸಿಎಂ ಆತಿಶಿ ಆಪ್ತ ಸಹಾಯಕ: ಬಿಜೆಪಿ ಆರೋಪ

Date:

ದೆಹಲಿ ಮುಖ್ಯಮಂತ್ರಿ ಆತಿಶಿ ಅವರ ಆಪ್ತ ಸಹಾಯಕ ಒಟ್ಟು ಐದು ಲಕ್ಷ ರೂಪಾಯಿ ನಗದು ಸಮೇತವಾಗಿ ಸಿಕ್ಕಿಬಿದ್ದಿದ್ದಾರೆ. ಈ ಹಣವನ್ನು ಮತದಾರರಿಗೆ ಹಂಚಲೆಂದು ಹೊರಟಿದ್ದರು ಎಂದು ಬಿಜೆಪಿ ಆರೋಪಿಸಿದೆ.

- Advertisement -

ಈ ಬಗ್ಗೆ ಬಿಜೆಪಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಉಸ್ತುವಾರಿ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ದೆಹಲಿ ಸಿಎಂ ಆತಿಶಿ ಮರ್ಲೇನಾ ಅವರ ಆಪ್ತ ಸಹಾಯಕ ಗಿರಿಖಂಡ್ ನಗರದಲ್ಲಿ 5 ಲಕ್ಷ ರೂ.ಗಳೊಂದಿಗೆ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಎಫ್‌ಐಆರ್ ದಾಖಲಾಗಿದೆ. ಕಲ್ಕಾಜಿಯಲ್ಲಿ ಮತದಾರರನ್ನು ಖರೀದಿಸುವ ಪಿತೂರಿ ನಡೆಸಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಇದನ್ನು ಓದಿದ್ದೀರಾ? ಆತಿಶಿ ವಿರುದ್ದ ಬಿಜೆಪಿ ಹೂಡಿದ್ದ ಮಾನನಷ್ಟ ಮೊಕದ್ದಮೆ ವಜಾಗೊಳಿಸಿದ ಕೋರ್ಟ್

ಈ ಹಿಂದೆ ಯಮುನಾ ನದಿಯ ನೀರನ್ನು ‘ವಿಷಗೊಳಿಸಲಾಗಿದೆ’ ಎಂಬ ಹೇಳಿಕೆ ಸಂಬಂಧ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಹರಿಯಾಣದ ಕುರುಕ್ಷೇತ್ರ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಬುಧವಾರ ಬೆಳಿಗ್ಗೆ 7 ಗಂಟೆಗೆ 70 ಸದಸ್ಯರ ದೆಹಲಿ ವಿಧಾನಸಭೆಗೆ ಮತದಾನ ಆರಂಭವಾಗಿದೆ. 8ರಂದು ಮತ ಎಣಿಕೆ ನಡೆಯಲಿದೆ. ಇದಕ್ಕೂ ಮುನ್ನ ಈ ಎರಡು ಬೆಳವಣಿಗೆಗಳು ನಡೆದಿವೆ.

ಇನ್ನು ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ ರವಿ ಕುಮಾರ್ ಸಿಂಗ್, “ಕೆಲವು ಜನರು ಐದು ಲಕ್ಷ ರೂಪಾಯಿ ನಗದಿನೊಂದಿಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ನಮ್ಮ ತಂಡ ಅಲ್ಲಿಗೆ ತಲುಪಿದ್ದು, ಗೌರವ್ ಮತ್ತು ಅಜಿತ್ ಎಂಬ ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ. ಇಬ್ಬರೂ ಕೂಡಾ ಸಿಎಂ ಕಚೇರಿಗೆ ಸಂಬಂಧಿಸಿದವರು ಎಂಬ ಮಾಹಿತಿ ಲಭಿಸಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...