ದೆಹಲಿ ಚುನಾವಣೆ ಪ್ರಚಾರದ ವೇಳೆ ಕೇಜ್ರಿವಾಲ್ ಕಾರಿನ ಮೇಲೆ ದಾಳಿ; ಬಿಜೆಪಿ ಗೂಂಡಾಗಳೆಂದ ಎಎಪಿ

Date:

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರ ನಡೆಸುತ್ತಿದ್ದ ವೇಳೆ ಕೇಜ್ರಿವಾಲ್ ಕಾರಿನ ಮೇಲೆ ದಾಳಿ ನಡೆದಿದೆ. “ಬಿಜೆಪಿಯ ಗೂಂಡಾಗಳೇ ಈ ದಾಳಿಯನ್ನು ನಡೆಸಿದ್ದಾರೆ” ಎಂದು ಎಎಪಿ ಆರೋಪಿಸಿದೆ.

- Advertisement -

“ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಜೊತೆಗಿದ್ದ ಬಿಜೆಪಿ ಬೆಂಬಲಿಗರು ಕೋಲು ಮತ್ತು ಕಲ್ಲುಗಳ ಮೂಲಕ ಕೇಜ್ರಿವಾಲ್ ಅವರ ಮೇಲೆ ದಾಳಿ ನಡೆಸಿದ್ದಾರೆ” ಎಂದು ಎಎಪಿ ದೂರಿದೆ. ಇನ್ನು ಕೇಜ್ರಿವಾಲ್ ಅವರಿಗೆ ಜನರು ಕಪ್ಪು ಭಾವುಟವನ್ನು ಪ್ರದರ್ಶಿಸುತ್ತಿರುವುದು ಕೂಡಾ ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಜೈಲುಹಕ್ಕಿ ತಾಹಿರ್ ಹುಸೈನ್ ಯಾರು ಗೊತ್ತೇ?

ಹೊಸ ದೆಹಲಿ ವಿಧಾನಸಭೆ ಕ್ಷೇತ್ರದಲ್ಲಿ ಎಎಪಿಯಿಂದ ಅರವಿಂದ್ ಕೇಜ್ರಿವಾಲ್ ಕಣದಲ್ಲಿದ್ದರೆ, ಬಿಜೆಪಿಯಿಂದ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್‌ನಿಂದ ಸಂದೀಪ್ ದೀಕ್ಷಿತ್ ಸ್ಪರ್ಧೆಗಿಳಿದಿದ್ದಾರೆ.

ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎಎಪಿ, “ಸೋಲಿನ ಭಯದಲ್ಲಿರುವ ಬಿಜೆಪಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ದಾಳಿ ನಡೆಸಲು ತನ್ನ ಗೂಂಡಾಗಳನ್ನು ಕಳಿಸಿದೆ. ಚುನಾವಣಾ ಪ್ರಚಾರಕ್ಕೆ ಅಡ್ಡಿ ಉಂಟು ಮಾಡುವ ಪ್ರಯತ್ನ ಇದಾಗಿದೆ. ಈ ಪುಕ್ಕಲುತನದ ದಾಳಿಗೆ ಕೇಜ್ರಿವಾಲ್ ಅವರು ಬೆದರುವುದಿಲ್ಲ. ದೆಹಲಿ ಜನರು ಇದಕ್ಕೆ ತಕ್ಕ ಉತ್ತರವನ್ನು ನೀಡಲಿದ್ದಾರೆ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ | ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಮಹಿಳೆಯರಿಗೆ ಮಾಸಿಕ 2,500 ರೂ. ಸಹಾಯಧನ, 500 ರೂ.ಗೆ ಎಲ್‌ಪಿಜಿ ಭರವಸೆ

ಇನ್ನು ಬಿಜೆಪಿ ಮೇಲೆ ಮಾಡಿದ ಆರೋಪವನ್ನು ಅಭ್ಯರ್ಥಿ ಪರ್ವೇಶ್ ವರ್ಮಾ ಅಲ್ಲಗಳೆದಿದ್ದಾರೆ. “ಜನರು ಪ್ರಶ್ನೆ ಕೇಳುತ್ತಿದ್ದಾಗ, ಕೇಜ್ರಿವಾಲ್ ಕಾರು ಇಬ್ಬರು ಯುವಕರ ಮೇಲೆ ಹರಿದಿದೆ. ಇಬ್ಬರನ್ನೂ ಕೂಡಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಜನರ ಜೀವಕ್ಕೆ ಮೌಲ್ಯವೇ ಇಲ್ಲದ್ದಂತೆ ಆಗಿದೆ. ನಾನು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದೇನೆ” ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲಿ ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಚುನಾವಣಾ ಫಲಿತಾಂಶ ಹೊರಬರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...