ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು

Date:

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ ಪ್ರಕರಣದಲ್ಲಿ ದೊಡ್ಡ ಕಾನೂನು ಜಯ ಲಭಿಸಿದಂತಾಗಿದೆ.

- Advertisement -

ಲೋಕಪಾಲ್ ತಮ್ಮ ರಕ್ಷಣಾತ್ಮಕ ವಾದಗಳನ್ನು ಪರಿಗಣಿಸಿಲ್ಲ, ಇದು ನೈಸರ್ಗಿಕ ನ್ಯಾಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಮಹುವಾ ಲೋಕಪಾಲ್ ಆದೇಶದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಿಲ್ ಕ್ಷೇತ್ರಪಾಲ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರ ದೆಹಲಿ ಹೈಕೋರ್ಟ್‌ನ ದ್ವಿಸದಸ್ಯ ಪೀಠವು ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಇದನ್ನು ಓದಿದ್ದೀರಾ? ಕಾವಡ್ ಯಾತ್ರೆ ವಿವಾದ | ಸುಪ್ರೀಂ ಕೋರ್ಟ್ ಕದ ತಟ್ಟಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಈ ಪ್ರಕರಣದಲ್ಲಿ ಲೋಕಪಾಲ್ ಕಾನೂನು ಪ್ರಕ್ರಿಯೆಗಳನ್ನು ಸರಿಯಾಗಿ ಪಾಲಿಸಿಲ್ಲ ಮತ್ತು ಮೊಯಿತ್ರಾ ಅವರ ವಾದಗಳನ್ನು ಪರಿಗಣಿಸದೆ ತಪ್ಪು ಮಾಡಿದೆ ಎಂದು ಹೇಳಿರುವ ದೆಹಲಿ ಹೈಕೋರ್ಟ್‌ ಒಂದು ತಿಂಗಳೊಳಗೆ ಈ ಬಗ್ಗೆ ಮರುಪರಿಶೀಲಿಸುವಂತೆ ಲೋಕಪಾಲ್‌ಗೆ ಸೂಚನೆ ನೀಡಿದೆ.

ಏನಿದು ಪ್ರಶ್ನೆಗಾಗಿ ಕಾಸು ಪ್ರಕರಣ?

ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಹಣ ಮತ್ತು ದುಬಾರಿ ಉಡುಗೊರೆಗಳನ್ನು ಪಡೆದು ಸಂಸತ್ತಿನಲ್ಲಿ ಅದಾನಿ ಸಮೂಹದ ವಿರುದ್ಧ ಮೊಯಿತ್ರಾ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು 2023ರ ಅಕ್ಟೋಬರ್‌ನಲ್ಲಿ ಸಂಸದ ನಿಶಿಕಾಂತ್ ದುಬೆ ಸ್ಪೀಕರ್‌ಗೆ ದೂರು ನೀಡಿದ್ದರು. ಮೊಯಿತ್ರಾ ಅವರು ಸಂಸತ್ತಿನ ಅಧಿಕೃತ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್‌ ಅನ್ನು ಹಿರಾನಂದಾನಿ ಅವರಿಗೆ ನೀಡಿದ್ದರು ಎಂದು ಆರೋಪಿಸಲಾಗಿದೆ.

ಅದಾದ ಬಳಿಕ ಅದೇ ವರ್ಷದ ಡಿಸೆಂಬರ್‌ನಲ್ಲಿ ಎಥಿಕ್ಸ್ ಕಮಿಟಿ(ನೈತಿಕ ಸಮಿತಿ) ಶಿಫಾರಸಿನ ಮೇರೆಗೆ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿದೆ. 2024ರ ಮಾರ್ಚ್‌ನಲ್ಲಿ ಲೋಕಪಾಲ್ ಆದೇಶದ ಮೇರೆಗೆ ಸಿಬಿಐ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. 2025ರ ನವೆಂಬರ್‌ನಲ್ಲಿ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಲೋಕಪಾಲ್‌ ಅನುಮತಿ ನೀಡಿದೆ.

ಇನ್ನು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಗೆ ತಮ್ಮ ಸಂಸತ್ತಿನ ಲಾಗಿನ್ ಮತ್ತು ಪಾಸ್‌ವರ್ಡ್ ನೀಡಿರುವುದನ್ನು ಮೊಯಿತ್ರಾ ಒಪ್ಪಿಕೊಂಡಿದ್ದಾರೆ. ಆದರೆ ಇದು ಕೇವಲ ಪ್ರಶ್ನೆಗಳನ್ನು ಟೈಪ್ ಮಾಡಲು ಸಹಾಯ ಪಡೆಯುವ ಉದ್ದೇಶದಿಂದ ಆಗಿತ್ತೇ ಹೊರತು ಹಣದ ಬದಲಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಹಿರಾನಂದಾನಿ ಅವರಿಂದ ಯಾವುದೇ ರೀತಿಯ ಹಣವನ್ನು ಪಡೆದಿಲ್ಲ ಎಂದು ಹೇಳಿದ್ದಾರೆ. ಹಾಗೆಯೇ ಇಡೀ ಪ್ರರಕಣವು ವೈಯಕ್ತಿಕ ದ್ವೇಷ ಮತ್ತು ರಾಜಕೀಯ ಸೇಡಿನಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...