ಮಾಜಿ ಸಚಿವ ದಿಲೀಪ್ ರೇ ಶಿಕ್ಷೆಗೆ ದೆಹಲಿ ಹೈಕೋರ್ಟ್‌ ತಡೆ; ಒಡಿಶಾ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

Date:

ಜಾರ್ಖಂಡ್‌ನ 1999ರ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ತಡೆ ಹಿಡಿದಿದೆ. ಮುಂಬರುವ ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ.

- Advertisement -

ತಮ್ಮ ವಿರುದ್ಧ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿಯನ್ನು ಅಮಾನತಿನಲ್ಲಿ ಇರಿಸುವಂತೆ ಕೋರಿ ರೇ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಅಂಗೀಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ದಿಲೀಪ್ ರೇ ವಿರುದ್ಧ ಐಪಿಸಿ ಸೆಕ್ಷನ್ 120ಬಿ (ಕ್ರಿಮಿನಲ್ ಪಿತೂರಿ) ಮತ್ತು 409 (ಸಾರ್ವಜನಿಕ ಸೇವಕರಿಂದ ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ರೇ ಅವರನ್ನು ದೋಷಿ ಎಂದು 2020ರ ಅಕ್ಟೋಬರ್ 6ರಂದು ನ್ಯಾಯಾಲಯ ಘೋಷಿಸಿತ್ತು. ಅದೇ ವರ್ಷ ಅಕ್ಟೋಬರ್ 27ರಂದು ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು.

ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ರೇ ಅವರು 2020ರ ಅಕ್ಟೋಬರ್ 27ರಂದು ಮೇಲ್ಮನವಿ ಸಲ್ಲಸಿದ್ದರು. ಅರ್ಜಿ ಆಧಾರದ ಮೇಲೆ ಸಿಬಿಐಗೆ ನೋಟಿಸ್ ನೀಡಿದ್ದ ಕೋರ್ಟ್‌, ಮೇಲ್ಮನವಿ ವಿಚಾರಣೆ ಬಾಕಿ ಇದ್ದ ಕಾರಣ, ಅವರಿಗೆ ವಿಧಿಸಲಾಗಿದ್ದ ಶಿಕ್ಷೆಗೆ ತಡೆ ನೀಡಿತ್ತು.

ಇದೀಗ, ಸೋಮವಾರ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರಿದ್ದ ಏಕಸದಸ್ಯ ಪೀಠವು, “ಅರ್ಜಿದಾರರ ಮೇಲ್ಮನವಿ ವಿಚಾರಣೆಯಲ್ಲಿರುವ ಕಾರಣ, ಅವರಿಗೆ ವಿಧಿಸಲಾಗಿರುವ ಶಿಕ್ಷೆಯನ್ನು ಅಮಾನತುಗೊಳಿಸಲಾಗುತ್ತಿದೆ. ಇಲ್ಲದಿದ್ದಲ್ಲಿ, ಒಂದು ವೇಳೆ ಅವರು ದೋಷಮುಕ್ತರಾದರೆ, ಆಗ ಬದಲಿಸಲಾಗದ ಪರಿಣಾಮಕ್ಕೆ ಕಾರಣವಾಗುತ್ತದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ತಡೆ ಆದೇಶ ನೀಡಲಾಗುತ್ತಿದೆ” ಎಂದು ಹೇಳಿದೆ.

“ಈ ಆದೇಶವು ‘ಪ್ರಕರಣದ ಮುಕ್ತಾಯಕ್ಕೆ ಸಮಾನಾಗಿರುವುದಿಲ್ಲ’. ರೇ ಅವರ ರಾಜಕೀಯ ವೃತ್ತಿಜೀವನ ಮತ್ತು ವಯಸ್ಸು ಸೇರಿದಂತೆ ಪ್ರಕರಣದ ವಿಚಿತ್ರ ಸಂದರ್ಭಗಳನ್ನು ಗಮನಿಸಿ ಶಿಕ್ಷೆಗೆ ತಡೆ ಮಾತ್ರ ನೀಡಲಾಗಿದೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

“ಅರ್ಜಿದಾರರಿಗೆ (ರೇ) 71 ವರ್ಷ ವಯಸ್ಸಾಗಿದೆ. ಅವರು 2024ರ ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಹಾಗೂ ಅವರ ಕ್ಷೇತ್ರ ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ಬಯಸಿದ್ದಾರೆ. ಪ್ರಥಮ ಬಾರಿಗೆ ಚುನಾವಣೆಗೆ ಸ್ಪರ್ಧಿಸುವ ಮೂಲಕ ಶಿಕ್ಷೆಗೆ ತಡೆ ತರುವ ಉದ್ದೇಶದಿಂದ ಅವರು ಹಾಗೆ ಮಾಡಿದ್ದಾರೆಂಬಂತೆ ಕಂಡುಬಂದಿಲ್ಲ. ಅವರು 35 ವರ್ಷಗಳಿಗೂ ಹೆಚ್ಚು ಕಾಲದ ರಾಜಕೀಯ ವೃತ್ತಿಜೀವನ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಅನೇಕ ಮೇಲ್ಮನವಿಗಳು ಮತ್ತು ಅಡ್ಡ-ಅಪೀಲುಗಳನ್ನು ಸಲ್ಲಿಸಲಾಗಿದೆ. ಇದೆಲ್ಲವೂ, ವಿಚಾರಣೆಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಪೀಠವು ಹೇಳಿದೆ.

“ರೇ ಅವರ ಮೇಲ್ಮನವಿಯನ್ನು ಅನುಮತಿಸದಿದ್ದರೆ, ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಕಳೆದುಕೊಳ್ಳುತ್ತಾರೆ. ಇದರಿಂದ ಬದಲಾಯಿಸಲಾಗದ ಪರಿಣಾಮ ಮತ್ತು ಅವರ ರಾಜಕೀಯ ವೃತ್ತಿಜೀವನಕ್ಕೆ ಹಾನಿ ಉಂಟಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಈ ಆದೇಶವು ಉತ್ತರ ಪ್ರದೇಶದ ಅಫ್ಜಲ್ ಅನ್ಸಾರಿ ವಿರುದ್ಧದ ಪ್ರಕರಣದಲ್ಲಿ ತನ್ನ ‘ಬಹುಮತದ ಅಭಿಪ್ರಾಯ’ದಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾನದಂಡವನ್ನು ಅನುಸರಿಸಿದೆ ಎಂಬುದನ್ನು ಕೋರ್ಟ್‌ ಉಲ್ಲೇಖಿಸಿದೆ.

ಅಫ್ಜಲ್ ಅನ್ಸಾರಿ ಪ್ರಕರಣದಲ್ಲಿ ಅವರು ಸಂಸತ್ತಿನ ಸದಸ್ಯತ್ವವನ್ನು ಉಳಿಸಿಕೊಳ್ಳಲು ಮತ್ತು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕಾಗಿ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಅಮಾನತು ಮಾಡಲು ಮನವಿ ಮಾಡಿದ್ದರು. ಅವರ ಮನವಿಯನ್ನು ಆಲಿಸಿದ್ದ ಸುಪ್ರೀಂ ಕೋರ್ಟ್‌, ಭವಿಷ್ಯದ ಚುನಾವಣೆಯಲ್ಲಿ ಸ್ಪರ್ಧಿಸುವ ವಿಷಯ ಪರಿಗಣಿಸಿತ್ತು ಮತ್ತು ಶಿಕ್ಷೆಗೆ ತಡೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...