ಮಾನಹಾನಿ ಮೊಕದ್ದಮೆ ಪ್ರಕರಣ | ಉದ್ಧವ್ ಸೇರಿ ಮೂವರಿಗೆ ದೆಹಲಿ ಹೈಕೋರ್ಟ್ ಸಮನ್ಸ್

Date:

Advertisements
  • ನ್ಯಾ. ಪ್ರತೀಕ್ ಜಲನ್ ಅವರ ಏಕಸದಸ್ಯ ಪೀಠ ವಿಚಾರಣೆ
  • ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಏ.17ಕ್ಕೆ ವಿಚಾರಣೆ ಮುಂದೂಡಿಕೆ

ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಅವರ ಪುತ್ರ ಆದಿತ್ಯ ಠಾಕ್ರೆ ಹಾಗೂ ಶಿವಸೇನಾ ವಕ್ತಾರ ಸಂಜಯ್‌ ರಾವುತ್ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ (ಮಾರ್ಚ್ 28) ಸಮನ್ಸ್ ಜಾರಿ ಮಾಡಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ನಾಯಕ ಮತ್ತು ಸಂಸದ ರಾಹುಲ್ ರಮೇಶ್ ಶೆವಾಲೆ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೇಳಿ ಈ ಸಮನ್ಸ್‌ ನೀಡಲಾಗಿದೆ.

ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಮತ್ತು ಸಂಜಯ್ ರಾವತ್ ಅವರು ಏಕನಾಥ್ ಶಿಂಧೆ ಬಣದ ವಿರುದ್ಧ ಮಾಡಿದ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಶೆವಾಲೆ ಅವರು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ.

Advertisements

ಮಾನನಷ್ಟ ಮೊಕದ್ದಮೆಯ ಪ್ರಕಾರ, ಏಕನಾಥ್ ಶಿಂಧೆ ಬಣ ಶಿವಸೇನೆಯ ಮೂಲ ಚಿಹ್ನೆಯನ್ನು ₹2000 ಕೋಟಿಗೆ ಖರೀದಿಸಿದ್ದಾರೆ ಎಂದು ಸಂಜಯ್ ರಾವುತ್ ಮತ್ತು ಉದ್ಧವ್ ಠಾಕ್ರೆ ಆರೋಪಿಸಿದ್ದರು.

ರಾಹುಲ್ ಶೆವಾಲೆ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಸಂಸದ ರಾಹುಲ್‌ ಶೆವಾಲೆ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜೀವ್‌ ನಾಯ್ಯರ್‌ ತಮ್ಮ ಕಕ್ಷಿದಾರರ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ತಡೆಯಾಜ್ಞೆ ನೀಡುವಂತೆ ವಿನಂತಿಸಿದರು.

ಸಂಜಯ್ ರಾವುತ್, ಉದ್ಧವ್ ಠಾಕ್ರೆ ಮತ್ತು ಆದಿತ್ಯ ಠಾಕ್ರೆ ಅವರಿಗೆ ಸಮನ್ಸ್ ಜಾರಿಗೊಳಿಸಿ ತಮ್ಮ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X