ಕಾಂಗ್ರೆಸ್‌ನಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಬೊಮ್ಮಾಯಿ‌

Date:

ಕಾಂಗ್ರೆಸ್‌ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಆರೋಪಿಸಿದರು.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮಂಗಳವಾರ ಪೊಲೀಸ್‌ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಕೇಸರೀಕರಣ ಮಾಡುವ ಅವಕಾಶ ಕೊಡಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ” ಎಂದರು.

“ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಉತ್ತಮ ಹೆಸರು ಮಾಡಿದೆ. ನಮ್ಮ‌ ಪೊಲೀಸರು ಕೇಸರೀಕರಣ ಯಾವತ್ತೂ ಮಾಡಿಲ್ಲ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್‌ನವರು ಅವರ ಅಜೆಂಡಾ ಜಾರಿ ಮಾಡಲು ಈ ರೀತಿ ತೀರ್ಮಾನ ಮಾಡಿದ್ದಾರೆ. ಇದರಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ತುಷ್ಟೀಕರಣ ರಾಜಕಾರಣ ಮಾಡಲು ಮೊದಲ ದಿನದಿಂದಲೇ ಕಾಂಗ್ರೆಸ್ ಮುಂದಾಗಿದೆ” ಎಂದು ದೂರಿದರು.

ಮಂಗಳವಾರ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, “ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕಿದ್ದರು. ಇದರ ಅರ್ಥವೇನು? ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಬಿಡುವುದಿಲ್ಲ” ಎಂದು ಖಡಕ್‌ ಎಚ್ಚರಿಕೆ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಶಾಂತಿ ಕದಡಿದರೆ ಬಜರಂಗದಳ, ಆರ್‌ಎಸ್‌ಎಸ್‌ ಸಂಘಟನೆಗಳ ನಿಷೇಧ : ಪ್ರಿಯಾಂಕ್‌ ಖರ್ಗೆ

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ| 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್ ಒತ್ತಾಯ

ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು...

ಜನ ಹಸಿವಿನಿಂದ ಬಳಲುತ್ತಿಲ್ಲ ಎಂದಾದರೆ 83ಕೋಟಿ ಜನರಿಗೆ ಆಹಾರ ಧಾನ್ಯ ಪೂರೈಕೆ ಯಾಕಾಗಿ? : ಪರಕಾಲ ಪ್ರಭಾಕರ

"ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಸಿವಿನಿಂದ ಜನರು ಕಂಗಾಲಾಗಿದ್ದಾರೆ. ಆದರೆ ಜನರ...

ನೇಹಾ ಕೊಲೆ ಪ್ರಕರಣ | ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ನೀಚತನ: ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕಿಡಿ

ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ವಿವಿಧ ಮಠಾಧೀಶರು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...