ಡೆಂಘೀ ಪಾಸಿಟಿವ್ ಬಂದವರ ಮೇಲೆ 4 ದಿನಗಳವರೆಗೆ ನಿಗಾ: ಸಚಿವ ದಿನೇಶ್ ಗುಂಡೂರಾವ್

Date:

Advertisements

ಡೆಂಘೀ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಯಲಹಂಕದಲ್ಲಿ ಶುಕ್ರವಾರ ಡೆಂಘೀ ಹಾಟ್ ಸ್ಪಾಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಘೀ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.

ಯಲಹಂಕದ ಶಿಂಗೇನಹಳ್ಳಿಯಲ್ಲಿ ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಘೀ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಘೀ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಘೀ ಪ್ರಕರಣಗಳಲ್ಲಿ ಇಳಿಮುಖ ಕಾಣುವ ನೀರಿಕ್ಷೆ ಇದೆ” ಎಂದು ಹೇಳಿದರು.

Advertisements

“ಕೆಲವು ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಘೀ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ ಶೇ.50 ರಷ್ಟು ಡೆಂಘೀ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಘೀ ಹತೋಟಿಗೆ ತರುವಂತೆ ಸೂಚಿಸಿದ್ದೇನೆ” ಎಂದರು.

“10 ಜಿಲ್ಲೆಗಳ ಡೆಂಘೀ ಹಾಟ್ ಸ್ಪಾಟ್‌ಗಳಿಗೆ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ಕಳುಹಿಸಿಕೊಡಲಾಗುತ್ತಿದೆ. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್ ಸ್ಪಾ‌ಟ್‌ಗಳಿಗೆ ಭೇಟಿ ನೀಡಿ ಡೆಂಘೀ ನಿಯಂತ್ರಣ ಕ್ರಮಗಳ ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನ ಹರಿಸಲಿದ್ದಾರೆ. ಎರಡಕ್ಕಿಂತ ಹೆಚ್ಚು ಡೆಂಘೀ ಪಾಸಿಟಿವ್ ಪ್ರಕರಣಗಳು ಗೋಚರಿಸಿದರೆ ಡೆಂಘೀ ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತಿದೆ” ಎಂದು ಹೇಳಿದರು.

ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ

“ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ. ರಾಜ್ಯದಲ್ಲಿ ನಿಫಾ ವೈರಸ್‌ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ” ಎಂದು ತಿಳಿಸಿದರು.

“ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಕ್ಕೆ ತೆರಳುವುದು ಬೇಡ. ರಾಜ್ಯದಲ್ಲಿ ಇತ್ತಿಚೆಗೆ ಝೀಕಾ ವೈರಸ್ ಪತ್ತೆಯಾಗಿತ್ತು. ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ. ಆದರೆ ನಿಫಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೂಡ ಮುಂಜಾಗೃತೆ ಕ್ರಮಗಳನ್ನ ಅನುಸರಿಸಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X