ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಯುವಕನನ್ನು ರಂಜನೀಸ್ (28) ಎಂದು ಗುರುತಿಸಲಾಗಿದೆ. ಮೈಸೂರಿನ ಟಿ.ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇನ್ ಸ್ಟಾ ಗ್ರಾಂನಲ್ಲಿ ಈತ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಈ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ರವಿಕುಮಾರ್ ಎಂಬವರು ನೀಡಿದ್ದ ದೂರಿನ ಮೇರೆಗೆ ಶನಿವಾರ ಟಿ. ನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಯುವಕನ ವಿರುದ್ಧ ಐಪಿಸಿ ಸೆಕ್ಷನ್ 504, 505(1), (B)ರಡಿ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ಕೈಗೊಂಡಿದ್ದರು.
ಟಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಇನ್ಸಾಗ್ರಾಮ್ ನಲ್ಲಿ ‘rajee ಹಿಂದೂ’ ಎಂಬ ಹೆಸರಿನಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಲಾಗಿತ್ತು.
Respectively cm