ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನ: ‘ಶಾಸಕ ಯತ್ನಾಳ್ ವಿರುದ್ಧ ಕಾನೂನು ಕ್ರಮ’

Date:

ಮುಸ್ಲಿಂ ಮಹಿಳೆಯರ ವಿರುದ್ಧ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಯತ್ನಾಳ್‌ ವಿರುದ್ದದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

- Advertisement -

ಇತ್ತೀಚೆಗೆ ವಿಜಯಪುರದಲ್ಲಿ ಮಾತನಾಡಿದ್ದ ಯತ್ನಾಳ್‌, “ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದು ಹುಡುಗರಿಗೆ 5 ಲಕ್ಷ ರೂ. ಬಹುಮಾನ ನೀಡುತ್ತೇನೆ” ಎಂದು ಘೋಷಿಸಿದ್ದರು. ಅವರ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮುಸ್ಲಿಂ ಮಹಿಳೆಯರ ಬಗ್ಗೆ ಕೋಮುದ್ವೇಷ ಮತ್ತು ಅವಹೇಳನಕಾರಿ ಹೇಳಿಕೆ ನೀಡಿರುವ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯಗಳು ಕೇಳಿಬಂದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಯತ್ನಾಳ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಂ.ಬಿ ಪಾಟೀಲ್, “ಯತ್ನಾಳ್‌ ಮಾತುಗಳು ಖಂಡನೀಯ ಮತ್ತು ಅಸಹ್ಯಕರವಾಗಿವೆ. ಅವರ ಹೇಳಿಕೆಯು ಮಹಿಳೆಯರ ಕುರಿತು ಅವರ ಕೀಳು ಮನಸ್ಥಿತಿಯನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಯತ್ನಾಳ್, ಕೋಮು ಪ್ರಚೋದನೆಯ ಮಾತನಾಡುತ್ತಿದ್ದಾರೆ. ಅವರ ಅತಿರೇಕವನ್ನು ತಡೆಯಬೇಕು” ಎಂದು ಹೇಳಿದ್ದಾರೆ.

“ಬಸನಗೌಡ ಎಂಬ ಹೆಸರು ಇಟ್ಟುಕೊಂಡಿರುವ ಯತ್ನಾಳ್‌ ಬಾಯಲ್ಲಿ ಬಸವಣ್ಣನವರ ವಚನಗಳು ಬರಬೇಕಿತ್ತು. ಆದರೆ, ಅವರ ಬಾಯಲ್ಲಿ ಬರೀ ಮುಸ್ಲಿಂ ದ್ವೇಷದ ಮಾತುಗಳು ಮಾತ್ರವೇ ಬರುತ್ತಿವೆ. ಇನ್ನೊಂದು ಧರ್ಮದ ಹೆಣ್ಣು ಮಕ್ಕಳನ್ನು ನಿಂದಿಸುವುದು ಅವರ ಚಾಳಿಯಾಗಿದೆ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...