ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯನವರ ‘CHIEF MINISTER’ ನಾಮಫಲಕವಿರುವ ಫೋಟೋವನ್ನು ಎಡಿಟ್ ಮಾಡಿ, ‘COLLECTION MASTER’ ಎಂದು ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಜಿಲ್ಲಾ ಪಂಚಾಯತ್‌ನ​ ಮಾಜಿ ಸದಸ್ಯ, ಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ ಶೇಖರ್ ಕುಕ್ಕೇಡಿ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 1869 U/S 504, 505(2) ಅಡಿಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ.

WhatsApp Image 2023 10 27 at 4.54.49 PM

ಸಿಎಂ ಕಚೇರಿ, ಗೃಹ ಕಚೇರಿ ಮತ್ತು ಸಿಎಂ ನಿವಾಸದ ಗೇಟ್​ಗೆ ಕಲೆಕ್ಷನ್ ಮಾಸ್ಟರ್​ ಎಂದು ಬೋರ್ಡ್ ಹಾಕಿರುವ ಫೋಟೋ ಎಡಿಟ್ ಮಾಡಿ ಶಾಸಕ ಹರೀಶ್ ಪೂಂಜಾ ಹೆಸರಿನಲ್ಲಿರುವ ಅಧಿಕೃತ ಫೇಸ್​ಬುಕ್ ಪೇಜ್​ನಲ್ಲಿ ಪೋಸ್ಟ್ ಮಾಡಲಾಗಿತ್ತು.

Advertisements

harsih poonja

ಇದು ರಾಜ್ಯದ ಮುಖ್ಯಮಂತ್ರಿಯವರನ್ನು ಅವಮಾನ ಮಾಡುವ ಉದ್ದೇಶದಿಂದ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಉದ್ರೇಕಿಸಿ, ಕಾನೂನು ಸುವ್ಯವಸ್ಥೆಗೆ ಮತ್ತು ಸಮಾಜದ ಶಾಂತಿ ಕೆಡಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಹಾಗಾಗಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶೇಖರ್ ಕುಕ್ಕೇಡಿ ದೂರಿನಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 1869 U/S 504, 505(2) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಶಾಸಕರ ವಿರುದ್ಧ ಇದು ಎರಡನೇ ಎಫ್‌ಐಆರ್
ಇತ್ತೀಚೆಗೆ ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ-ತೆರವು ಜಟಾಪಟಿಯ ವಿಚಾರವಾಗಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಲ್ಲದೇ, ಸಾರ್ವಜನಿಕವಾಗಿ ಅವಮಾನ ಎಸಗಿದ ಆರೋಪದ ಮೇಲೆ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X