ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ದೂರು ದಾಖಲಾಗಿದೆ. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ದೂರು ದಾಖಲಿಸಿದ್ದಾರೆ.
ಸೋಮವಾರ, ಇಂಧನ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆಯಲ್ಲಿ ಮಾತನಾಡಿದ್ದ ಸಿ.ಟಿ ರವಿ, “ಮೂರೂ ಬಿಟ್ಟವರು ಭಂಡತನದಲ್ಲಿ ಸಮರ್ಥನೆಗೆ ಇಳಿದಿದ್ದಾರೆ. ಸಮರ್ಥನೆ ಬಿಟ್ಟು ಸೆಸ್ ಹಾಕಿರೋದು ಯಾಕೆ ಎಂಬುದನ್ನು ಹೇಳಲಿ” ಎಂದಿದ್ದರು.
ಸಿ.ಟಿ ರವಿ ಹೇಳಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆ ತಂದಿದೆ. ರವಿ ಅವರು ಸಿದ್ದರಾಮಯ್ಯ ಅವಿರಗೆ ಅಗೌರವ ತೋರಿದ್ದಾರೆ ಎಂದು ವೇದವ್ಯಾಸ ಕೌಲಗಿ ಆರೋಪಿಸಿದ್ದಾರೆ. ಮಾನನಷ್ಟ ಮೊಕದ್ದಮೆ ದಾಖಲಿಸುವಂತೆಯೂ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಸಿ.ಟಿ ರವಿ ಅವಹೇಳನಕಾರಿಯಾಗಿ ಮಾತನಾಡಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಅಶ್ವತ್ಥನಾರಾಯಣ್ ಸೇರಿದಂತೆ ಹಲವರು ಇದ್ದರು.

ಇವನ ಹುಚ್ಚಾಟಗಳನ್ನು ತಡೆಯುವ ಪ್ರಯತ್ನ ಬೇಡಾ,,, ಇಂಥವರನ್ನು ಇನ್ನಷ್ಟು ಹುರುಪು ಹಾಕಿದರೆ ಆ ಪಕ್ಷದ ಅಂತಿಮ ಸಂಸ್ಕಾರ ಇವರೇ ಮಾಡುವರು