ಕೇಂದ್ರ ಸರ್ಕಾರಕ್ಕೆ ಮೂರು ಬಾರಿ ಮನವಿ ಕೊಟ್ಟಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ: ಸಿಎಂ ಸಿದ್ದರಾಮಯ್ಯ

Date:

ಬರ ಪರಿಹಾರದ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮೂರು ಬಾರಿ ಮನವಿ ಕೊಟ್ಟಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಹೀಗಾಗಿ, ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತಮಟ್ಟದ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

- Advertisement -

ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಅವರು, ಪ್ರಧಾನಿಯವರಿಗೆ ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಿಸಿ ಮನವಿ ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬರ ಪರಿಹಾರ ಶೀಘ್ರ ಬಿಡುಗಡೆ, ನರೇಗಾ ಕೆಲಸವನ್ನು 150 ದಿನಗಳಗೆ ಹೆಚ್ಚಿಸಬೇಕು, ಭದ್ರಾ ಮೇಲ್ದಂಡೆಗೆ ಕೊಟ್ಟ ಮಾತಿನಂತೆ ಹಣ ಬಿಡುಗಡೆ ಮಾಡಬೇಕು, ಮಹದಾಯಿ ಯೋಜನೆಗೆ ಪರಿಸರ ಕ್ಲಿಯರೆನ್ಸ್ ಶೀಘ್ರವಾಗಿ ನೀಡಬೇಕು, ಮೇಕೆದಾಟು ಯೋಜನೆ ಕಾರ್ಯಾರಂಭಕ್ಕೆ ಅನುಮತಿಸಬೇಕು ಎಂಬ ಐದು ಬೇಡಿಕೆಗಳ ಈಡೇರಿಸುವಂತೆ ಮನವಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬರ ಪರಿಹಾರ ಸಂಬಂಧ ಇವತ್ತಿನವರೆಗೂ ಉನ್ನತಮಟ್ಟದ ಸಭೆ ಮಾಡಿಲ್ಲ. ಇದರಿಂದ ರಾಜ್ಯದ ರೈತರ ಸಂಕಷ್ಟಕ್ಕೆ ಕೇಂದ್ರದಿಂದ ಬರಬೇಕಾದ ಪರಿಹಾರ ಬರುತ್ತಿಲ್ಲ. ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ಕೂಡ ಆಗಿದೆ. ಬೇರೆ ಅಡೆ ತಡೆ ಏನೂ ಇಲ್ಲ. ಪರಿಸರ ಕ್ಲಿಯರೆನ್ಸ್ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರವೇ ಕೊಡಬೇಕು. ಇದುವರೆಗೂ ಕೊಟ್ಟಿಲ್ಲ. ಕೇಂದ್ರ ಕ್ಲಿಯರೆನ್ಸ್ ಕೊಟ್ಟ ಕೂಡಲೇ ಕೆಲಸ ಶುರು ಮಾಡಬಹುದು ಎಂದು ತಿಳಿಸಿದ್ದಾರೆ.

“ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ₹5300 ಕೋಟಿ ಘೋಷಿಸಿದ್ದರು‌. ಇವರ ಘೋಷಣೆ ಆಧಾರದಲ್ಲಿ ಹಿಂದಿನ‌ ಮುಖ್ಯಮಂತ್ರಿ ಬೊಮ್ಮಾಯಿ ಅವರೂ ಕೂಡ ₹5300 ಕೋಟಿ ಘೋಷಿಸಿದ್ದರು. ಇವತ್ತಿನವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ. ಇದು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಕಮಿಟ್‌ಮೆಂಟ್. ನೀವೇ ಕೊಟ್ಟಿರುವ ಮಾತಿನಂತೆ ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದೇವೆ” ಎಂದು ಸಿಎಂ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...