ಕೆ ಎಚ್ ಮುನಿಯಪ್ಪಗೆ ಕಗ್ಗಂಟಾದ ದೇವನಹಳ್ಳಿ ಕ್ಷೇತ್ರ: ಕಾಂಗ್ರೆಸ್‌ನಲ್ಲಿ ಸಾಮೂಹಿಕ ರಾಜೀನಾಮೆ

Date:

  • ಕ್ಷೇತ್ರ ಪ್ರವೇಶಕ್ಕೂ ಮೊದಲೇ ಮುನಿಯಪ್ಪಗೆ ವಿರೋಧ
  • ಸ್ಥಳೀಯರಿಗೆ ಮನ್ನಣೆ ನೀಡಿ ಎಂದ ದೇವನಹಳ್ಳಿ ಕಾಂಗ್ರೆಸ್ಸಿಗರು

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕೆ ಎಚ್ ಮುನಿಯಪ್ಪ ಅವರಿಗೆ ಆರಂಭಿಕ ಹಿನ್ನಡೆಯಾಗಿದೆ.

ಮುನಿಯಪ್ಪಗೆ ಕ್ಷೇತ್ರದಿಂದ ಟಿಕೆಟ್ ನೀಡುವುದನ್ನು ವಿರೋಧಿಸಿ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಮುಖಂಡರು ರಾಜೀನಾಮೆ ಸಲ್ಲಿಸಿದ್ದಾರೆ.

ಕೋಲಾರ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕಿಳಿಯಲು ಸಜ್ಜಾದಂತೆ, ದೇವನಹಳ್ಳಿಯಿಂದ ಅದೃಷ್ಟ ಪರೀಕ್ಷೆಗೆ ಕೆ ಎಚ್ ಮುನಿಯಪ್ಪ ಮುಂದಾಗಿದ್ದರು. ಆದರೆ ಇದಕ್ಕೆ ದೇವನಹಳ್ಳಿ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಅವರಿಗೆ ದೇವನಹಳ್ಳಿ ಟಿಕೆಟ್ ನೀಡದಂತೆ ವಿರೋಧ ವ್ಯಕ್ತವಾಗಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅವರಿಗೆ ಟಿಕೆಟ್ ನೀಡಿದಲ್ಲಿ ಕ್ಷೇತ್ರದಲ್ಲಿ ಪಕ್ಷ ಸೋಲುವ ಭೀತಿ ಇದೆ. ಜೊತೆಗೆ ಎಡಗೈ ಸಮುದಾಯದ ಮತಗಳು ಚದುರುವ ಸಾಧ್ಯತೆ ಇದೆ. ಹೀಗಾಗಿ ಕೆ ಹೆಚ್ ಮುನಿಯಪ್ಪಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದಾರೆ.

ಹಲವು ವರ್ಷಗಳಿಂದ ಸ್ಥಳೀಯರು ಟಿಕೆಟ್ ಆಕಾಂಕ್ಷಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡದೆಯೇ ಹೊರಗಿನಿಂದ ಬರುವವರು ಟಿಕೆಟ್ ಪಡೆಯಲು ಯತ್ನಿಸುತ್ತಿದ್ದಾರೆ ಎನ್ನುವುದೇ ಇಲ್ಲಿನ ಕಾಂಗ್ರೆಸ್ ನಾಯಕರ ಆಕ್ರೋಶ.

ದಲಿತ ಮತಗಳ ಪ್ರಾಬಲ್ಯ ಹೊಂದಿರುವ ಮೀಸಲು ಕ್ಷೇತ್ರದಲ್ಲಿ ದಶಕಗಳಿಂದ ಕಾಂಗ್ರೆಸ್, ಜೆಡಿಎಸ್ ನಡುವೆ ನೇರ ಹಣಾಹಣಿ ಇದೆ. ಕಳೆದ ಎರಡು ಚುನಾವಣೆಗಳಿಂದ ಇಲ್ಲಿನ ಮತದಾರರು ಜೆಡಿಎಸ್ ನತ್ತ ಒಲವು ತೋರಿ ಕಾಂಗ್ರೆಸ್ ಗೆ ಹಿನ್ನೆಡೆಯುಂಟಾಗುವಂತೆ ಮಾಡಿದ್ದಾರೆ. ಈ ಕಾರಣದಿಂದ ಮತಕ್ಷೇತ್ರದಲ್ಲಿ ಮರಳಿ ಕಾಂಗ್ರೆಸ್ ಗೆಲುವು ದಾಖಲಿಸಲು ಮುನಿಯಪ್ಪರನ್ನು ಕಣಕ್ಕಿಳಿಸಿಲು ಕೈ ಪಡೆ ಯೋಜನೆ ರೂಪಿಸಿದೆ.

ಸದ್ಯ ವ್ಯಕ್ತವಾಗಿರುವ ವಿರೋಧವನ್ನು ಪಕ್ಷ ಹೇಗೆ ಶಮನಗೊಳಿಸುತ್ತದೆ ಎನ್ನುವುದರ ಮೇಲೆ ಕೆ ಎಚ್ ಮುನಿಯಪ್ಪನವರ ರಾಜ್ಯ ರಾಜಕಾರಣ ಪ್ರವೇಶದ ಭವಿಷ್ಯ ನಿರ್ಧಾರವಾಗಲಿದೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಶಕ್ತಿ’ ಯೋಜನೆಯಿಂದ ಧರ್ಮಸ್ಥಳಕ್ಕೆ ಭಕ್ತರ ಸಂಖ್ಯೆ ಹೆಚ್ಚಳ; ಸಿಎಂ, ಡಿಸಿಎಂ ಸಂತಸ

ಸರ್ಕಾರದ 'ಶಕ್ತಿ' ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಸಚಿವ ಕೆ ಎನ್ ರಾಜಣ್ಣ

"ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ...

‘ಈ ದಿನʼ ಗ್ರೌಂಡ್‌ ರಿಪೋರ್ಟ್‌ 3 | ವಿಡಿಯೊ ಪ್ರಕರಣ; ಹಲವು ಮಹಿಳೆಯರ ರಾಜಕೀಯ ಮಹತ್ವಾಕಾಂಕ್ಷೆ ಮಣ್ಣುಪಾಲು

ಹಾಸನದ ಸಂಸದನ ಕಾಮಕಾಂಡ ಬಯಲಾಗುತ್ತಿದ್ದಂತೆ ಆ ಪಕ್ಷದ ಹಲವು ನಾಯಕಿಯರ ರಾಜಕೀಯ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...