ದೇವನಹಳ್ಳಿ ಭೂಸ್ವಾಧೀನ ರದ್ದು: ರೈತ ವಿರೋಧಿ ಪೋಸ್ಟ್‌ ಹಾಕಿ, ಡಿಲೀಟ್ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

Date:

ಬರೋಬ್ಬರಿ 3.3 ವರ್ಷಗಳ ಕಾಲ ಹೋರಾಟ ಮಾಡಿದ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರು ತಮ್ಮ ಭೂಮಿಯನ್ನು ಉಳಿಸಿಕೊಂಡಿದ್ದಾರೆ. ರೈತ ಹೋರಾಟಕ್ಕೆ ಮಣಿದ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ. ಭೂಸ್ವಾಧೀನದಿಂದ ಹಿಂದೆ ಸರಿದ ಸರ್ಕಾರವನ್ನು ಟೀಕಿಸಿ, ರೈತ ವಿರೋಧಿ ಪೋಸ್ಟ್‌ ಮಾಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಇದೀಗ ತನ್ನ ಪೋಸ್ಟ್‌ಅನ್ನು ಡಿಲೀಟ್ ಮಾಡಿದ್ದಾರೆ.

- Advertisement -

ಚನ್ನರಾಯಪಟ್ಟಣ ರೈತರು 2022ರಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದರು. ರೈತರು ಹೋರಾಟ ಆರಂಭಿಸಿದಾಗ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿತ್ತು. ಆದರೆ, ರೈತ ಹೋರಾಟಕ್ಕೆ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿರಲಿಲ್ಲ. ಬಿಜೆಪಿ ಸರ್ಕಾರವು ತನ್ನ ರೈತ ವಿರೋಧಿ ಧೋರಣೆಯನ್ನು ಪ್ರದರ್ಶಿಸಿತ್ತು. ಇದೀಗ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ರೈತರ ಜೊತೆಗೆ ಹಗ್ಗಜಗ್ಗಾಟ ನಡೆಸಿ, ಅಂತಿಮವಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿದ್ದ ರೈತರಿಗೆ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಪಟ್ಟು ಹಿಡಿದು, ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಆದಾಗ್ಯೂ, ಸರ್ಕಾರದ ನಡೆಯನ್ನು ಟೀಕಿಸಿ ಪೋಸ್ಟ್‌ ಹಾಕಿದ್ದ ತೇಜಸ್ವಿ ಸೂರ್ಯ, “ಉದ್ದಿಮೆಗಳನ್ನು ಆಕರ್ಷಿಸುವ ಮತ್ತು ಉದ್ಯೋಗಗಳನ್ನು ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ರೀತಿ ಇದು. ಕರ್ನಾಟಕ ಸರ್ಕಾರ ನಾರಾ ಲೋಕೇಶ್‌ ಅವರಿಂದ ಪಾಠ ಕಲಿತುಕೊಳ್ಳಬೇಕು, ತನ್ನ ಹಾದಿಯನ್ನು ಸರಿಪಡಿಸಿಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಏರೋಸ್ಪೇಸ್ ಪಾರ್ಕ್ ಸ್ಥಾಪಿಸಲು ರಾಜಕೀಯ ಇಚ್ಛಾಶಕ್ತಿ ತೋರಿಸಬೇಕು. ಎಚ್ಎಎಲ್, ಎನ್ಎಎಲ್, ಡಿಆರ್‌ಡಿಒ, ಇಸ್ರೋ, ಏರ್‌ಬಸ್‌, ಬೋಯಿಂಗ್ ಸೇರಿದಂತೆ ಸರ್ಕಾರಿ, ಖಾಸಗಿ ಸಂಸ್ಥೆಗಳು, ನವೋದ್ಯಮಗಳನ್ನು ಹೊಂದಿರುವ ಬೆಂಗಳೂರು ಭಾರತದ ಏರೋಸ್ಪೇಸ್ ರಾಜಧಾನಿ ಆಗಿದೆ” ಎಂದಿದ್ದರು.

ಬಳಿಕ, ತಮ್ಮ ಪೋಸ್ಟ್‌ಅನ್ನು ತೇಜಸ್ವಿ ಸೂರ್ಯ ಡಿಲೀಟ್ ಮಾಡಿದ್ದಾರೆ. ಅವರ ಪೋಸ್ಟ್‌ನ ಸ್ಕ್ರೀನ್‌ಶಾಟ್‌ ಹಂಚಿಕೊಂಡಿರುವ ಪತ್ರಕರ್ತ ಮುಹಮ್ಮದ್ ಝುಭೇರ್, “ದೇವನಹಳ್ಳಿ ರೈತರ ಹೋರಾಟದ ಫಲವಾಗಿ ಭೂಸ್ವಾಧೀನ ರದ್ದುಗೊಳಿಸಿದ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಬಿಜೆಪಿ ಯುವ ಸಂಸದ ಟೀಕಿಸಿದ್ದು, ಈಗ ತನ್ನ ಟ್ವೀಟ್‌ಅನ್ನು ಡಿಲೀಟ್ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ನಟ ಪ್ರಕಾಶ್‌ ರಾಜ್‌ ಕೂಡ ಸ್ಕ್ರೀನ್‌ಶಾಟ್‌ಅನ್ನು ಹಂಚಿಕೊಂಡಿದ್ದು, “ತೇಜಸ್ವಿ ಸೂರ್ಯ ಅವರೇ, ರೈತ ವಿರೋಧಿ ಪೋಸ್ಟ್‌ನ್ನು ಯಾಕೆ ಡಿಲೀಟ್‌ ಮಾಡಿದ್ದೀರಿ? ಹೆದರಿಕೊಂಡ್ರಾ” ಎಂದು ಪ್ರಶ್ನಿಸಿದ್ದಾರೆ.

ತೇಜಸ್ವಿ ಸೂರ್ಯ ಅವರು ರೈತ ವಿರೋಧಿ ಹೇಳಿಕೆ ನೀಡಿರುವುದು ಇದೇ ಮೊದಲೇನೂ ಅಲ್ಲ. ರೈತರ ಸಾಲ ಮನ್ನಾ ಮಾಡುವ ವಿಚಾರವನ್ನೂ ತೇಜಸ್ವಿ ಸೂರ್ಯ ಟೀಕಿಸಿದ್ದರು. ರೈತರ ಸಾಲ ಮನ್ನಾ ಮಾಡಿದರೆ ಯಾವುದೇ ರೀತಿಯ ಉಪಯೋಗ ಇಲ್ಲ ಎಂದಿದ್ದ ಅವರು ರೈತರ ಕೆಂಗಣ್ಣಿಗೆ ಗುರಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...