ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ದೇವರಾಜೇಗೌಡರಿಂದ ನನ್ನ ವಿರುದ್ಧ ಸುಳ್ಳು ಆರೋಪ: ಡಿಕೆಶಿ

Date:

“ನನಗೂ ಪ್ರಜ್ವಲ್ ಪೆನ್‌ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

- Advertisement -

ಇಂದು ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ, “ಪ್ರಜ್ವಲ್ ಪೆನ್‌ಡ್ರೈವ್ ಬಿಡುಗಡೆ ರೂವಾರಿಯ ಹಿಂದೆ ಇರುವುದು ಡಿಸಿಎಂ ಡಿ ಕೆ ಶಿವಕುಮಾರ್” ಎಂದು ಗಂಭೀರ ಆರೋಪ ಹೊರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್, “ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಈಗ ಆಗಿರುವ ಡ್ಯಾಮೇಜ್ ನಿವಾರಿಸಿಕೊಳ್ಳಲು ಬಿಜೆಪಿ-ಜೆಡಿಎಸ್ ನಾಯಕರು ದೇವರಾಜೇಗೌಡನ ಮೂಲಕ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಇದೇ ದೇವರಾಜೇಗೌಡ ಈ ಹಿಂದೆಯೇ ತಮ್ಮಲ್ಲಿ ಪೆನ್ ಡ್ರೈವ್ ಇರುವ ಬಗ್ಗೆ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಅದನ್ನು ಬಿಡುಗಡೆ ಮಾಡುವುದಾಗಿಯೂ ಹೇಳಿದ್ದರು. ಹೀಗಿರುವಾಗ ನನಗೂ ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಅಪಾದನೆ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ” ಎಂದು ಶಿವಕುಮಾರ್ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಪ್ರಜ್ವಲ್ ಪೆನ್‌ಡ್ರೈವ್ ಬಿಡುಗಡೆ ರೂವಾರಿ ಡಿಕೆಶಿ: ಯೂಟರ್ನ್‌ ಹೊಡೆದು ವಕೀಲ ದೇವರಾಜೇಗೌಡ ಆರೋಪ

“ನಾನೀಗ ಬೆಂಗಳೂರಿಂದ ಹೊರಗೆ ಇದ್ದು, ಬಂದ ನಂತರ ಈ ಬಗ್ಗೆ ಮಾತಾಡುತ್ತೇನೆ” ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...