₹1,685 ಕೋಟಿ ವೆಚ್ಚದಲ್ಲಿ ಕಲಬುರಗಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ: ಸಿದ್ದರಾಮಯ್ಯ ಘೋಷಣೆ

Date:

ರಾಜ್ಯ ಸರ್ಕಾರದಿಂದ ಸುಮಾರು 1,685 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಯೋಚಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

- Advertisement -

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವ ಸಮಾರಂಭದಲ್ಲಿ ಕಲಬುರಗಿಯ ಪೊಲೀಸ್‌ ಪರೇಡೆ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

“ಹಿಂದುಳಿದ ಜಿಲ್ಲೆಗಳಲ್ಲಿ ಹೂಡಿಕೆಯನ್ನು ಆಕರ್ಷಿಸುವುದಲ್ಲದೆ ಇಲ್ಲಿನ ನಗರ ವಾಸಿಗಳ ಜೀವನ ಗುಣಮಟ್ಟ ಹೆಚ್ಚಿಸುವ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸಲು ಇದು ಸಹಕಾರಿಯಾಗಲಿದೆ” ಎಂದರು.

“ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಾಗದ ಹೊರತು ರಾಜ್ಯದ ಅಭಿವೃಧ್ಧಿ ಅಸಾಧ್ಯ. ಇಲ್ಲಿನ ಜನರ ತಲಾದಾಯ ವೃದ್ಧಿ ಜೊತೆಗೆ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಸುಧಾರಣೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿ ನಮ್ಮ ಗುರಿಯಾಗಿದೆ. ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಲು ಬದ್ಧರಾಗಿ ದೃಢಸಂಕಲ್ಪ ಮಾಡುವುದರ ಮೂಲಕ ನವ ಭಾರತ ಮತ್ತು ನವ ಕರ್ನಾಟಕ ನಿರ್ಮಿಸೋಣ” ಎಂದು ಕರೆ ನೀಡಿದರು.

“ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯು 5,000 ಕೋಟಿ ರೂ. ಮೊತ್ತಕ್ಕೆ ಸಲ್ಲಿಸಿದ ಕ್ರಿಯಾ ಯೋಜನೆಗೆ ನಮ್ಮ ಸರ್ಕಾರ ಈಗಾಗಲೆ ಅನುಮೋದನೆ ನೀಡಿದ್ದು, ಪ್ರದೇಶದಲ್ಲಿ ಅಭಿವೃದ್ಧಿಯ ಹೊಸ ಕ್ರಾಂತಿ ನಿರೀಕ್ಷಿಸಲಾಗಿದೆ” ಎಂದರು.

“ಕೆ.ಕೆ.ಆರ್.ಡಿ.ಬಿ. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ 2024-25ನೇ ಸಾಲಿನಲ್ಲಿ 180 ಕೋಟಿ ರೂ.ಗಳನ್ನು ಒದಗಿಸಿ ಮೆಟ್ರಿಕ್ ಪೂರ್ವ- ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕೆ.ಕೆ.ಆರ್.ಡಿ.ಬಿ. ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಸುಮಾರು 180 ಕೋಟಿ ರೂಗಳ ವೆಚ್ಚದಲ್ಲಿ ಮೌಲಾನ ಆಜಾದ್ ಮಾದರಿ ಶಾಲೆಗಳು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ- ಮೆಟ್ರಿಕ್ ನಂತರದ ವಸತಿ ನಿಲಯಗಳ ನಿರ್ಮಾಣ ಮಾಡಲಾಗುತ್ತಿದೆ” ಎಂದು ಹೇಳಿದರು.

“ಮಲ್ಲಿಕಾರ್ಜುನ ಖರ್ಗೆ ಅವರ ಆಶಯದಂತೆ ಕಲಬುರಗಿಯನ್ನು ರಿಜನಲ್ ಹೆಲ್ತ್ ಹಬ್ ಮಾಡುವತ್ತ ಹೆಜ್ಜೆ ಇಟ್ಟಿದ್ದೇವೆ. ದೂರದ ಬೆಂಗಳೂರು, ಮುಂಬೈ, ಹೈದರಾಬಾದಿಗೆ ಹೋಗುವುದನ್ನು ತಪ್ಪಿಸಿ ಇಲ್ಲಿಯೇ ಗುಣಮಟ್ಟದ ಚಿಕಿತ್ಸೆ ನೀಡುವುದು ಇದರ ಮೂಲ ಉದ್ದೇಶವಾಗಿದೆ” ಎಂದರು.

ಈ ಸುದ್ದೊ ಓದಿದ್ದೀರಾ? ಸಚಿವ ಸಂಪುಟ ಸಭೆ ಮಾಡಿದ ಮಾತ್ರಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಆಗುತ್ತಾ: ಆರ್‌ ಅಶೋಕ್‌ ಪ್ರಶ್ನೆ

1 ಲಕ್ಷ ಉದ್ಯೋಗ ಸೃಷ್ಟಿ

“ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ತಾಲೂಕಿನ ನದಿಸಿನ್ನೂರ-ಹೊನ್ನಕಿರಣಗಿ ಬಳಿ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸಟೈಲ್ ಪಾರ್ಕ್‍ನ್ನು ಸ್ಥಾಪಿಸಲಾಗುತ್ತಿದೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುತ್ತಿದ್ದು, ಇದರಿಂದ 1 ಲಕ್ಷ ಜನರಿಗೆ ನೇರ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಷ್ಠಿಯಾಗಲಿದೆ” ಎಂದು ತಿಳಿಸಿದರು.

“ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಹಾಗೂ ಗುಣಾತ್ಮಕವಾಗಿ ಅಭಿವೃದ್ಧಿ ಪಡಿಸಲು ಹಾಗೂ ಸಮಗ್ರ ಗ್ರಾಮೀಣಾಭಿವೃದ್ಧಿ ಮಾಡುವ ಧ್ಯೇಯದೊಂದಿಗೆ “ಕಲ್ಯಾಣ ಪಥ” ಯೋಜನೆಯನ್ನು ರೂಪಿಸಲಾಗಿದೆ. ಈ ಭಾಗದ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರ 1,000 ಕೋಟಿ ರೂ. ವೆಚ್ಚದಲ್ಲಿ 1,150 ಕಿ.ಮೀ. ರಸ್ತೆಗಳನ್ನು ನಿರ್ಮಿಸಲಿದೆ” ಎಂದರು.

“ಬಸವಣ್ಣ ಹಾಗೂ ಇತರ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ವಚನ ಸಂಗ್ರಹಾಲಯ/ವಚನ ಮಂಟಪವನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗುತ್ತಿದ್ದು, ಜಮೀನು ಗುರುತಿಸಲಾಗಿದೆ. ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಲಾಗುವುದು” ಎಂದು ಹೇಳಿದರು.

“10 ವರ್ಷಗಳ ಹಿಂದೆ ನಡೆದಿದ್ದ ಸಚಿವ ಸಂಪುಟ ಸಭೆಯ ನಂತರ ಇಂದು ಸಂಜೆ ಕಲಬುರಗಿಯಲ್ಲಿ ಅತ್ಯಂತ ಮಹಾತ್ವಾಕಾಂಕ್ಷೆಯ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ. ಸದರಿ ಸಭೆಯಲ್ಲಿ ಈ ಭಾಗದ ಶಿಕ್ಷಣ, ಆರೋಗ್ಯ, ಸಾರಿಗೆ, ನೀರಾವರಿ, ಪ್ರವಾಸೋದ್ಯಮ ಅಭಿವೃದ್ಧಿ, ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...