ಫಡ್ನವೀಸ್ ನಮ್ಮನ್ನು ಒಟ್ಟುಗೂಡಿಸಿದರು: 20 ವರ್ಷಗಳ ಬಳಿಕ ಸಹೋದರ ಉದ್ಧವ್ ಜೊತೆ ವೇದಿಕೆ ಹಂಚಿದ ರಾಜ್ ಠಾಕ್ರೆ

Date:

ಸುಮಾರು ಎರಡು ದಶಕಗಳ(20 ವರ್ಷಗಳ) ಬಳಿಕ ಠಾಕ್ರೆ ಸಹೋದರರು ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದಾರೆ. ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಇಂದು ಮುಂಬೈನಲ್ಲಿ ನಡೆದ ಮರಾಠಿ ವಿಜಯ ರ್‍ಯಾಲಿಯಲ್ಲಿ ಒಂದಾಗಿದ್ದಾರೆ. ತಮ್ಮನ್ನು ಒಂದಾಗಿಸಿದ ಶ್ರೇಯಸ್ಸನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ನೀಡಿದ್ದಾರೆ.

- Advertisement -

‘ಅವಾಜ್ ಮರಾಠಿಚಾ’ (ಮರಾಠಿಯ ಧ್ವನಿ) ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಜಂಟಿಯಾಗಿ ಆಯೋಜಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಎರಡು ದಶಕಗಳ ನಂತರ ‘ಮರಾಠಿ ವಿಜಯ’ ರ್‍ಯಾಲಿ ನೆಪದಲ್ಲಿ ಒಂದಾದ ರಾಜ್, ಉದ್ಧವ್ ಠಾಕ್ರೆ

ಮಹಾರಾಷ್ಟ್ರದ ಪ್ರಾಥಮಿಕ ಶಾಲೆಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸುವ ವಿವಾದಾತ್ಮಕ ನೀತಿಯನ್ನು ಠಾಕ್ರೆ ಸಹೋದರರು ಜೊತೆಯಾಗಿ ವಿರೋಧಿಸಿದ್ದಾರೆ. ಸರ್ಕಾರ ಈ ನೀತಿಯನ್ನು ಹಿಂಪಡೆದ ಬಳಿಕ ಸಹೋದರರು ಜೊತೆಯಾಗಿ ಸೇರಿ ವಿಜಯ ರ್‍ಯಾಲಿ ನಡೆಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ ಠಾಕ್ರೆ, “ಬಾಲ್ ಠಾಕ್ರೆಗೆ, ಇತರ ಅನೇಕರಿಗೆ ಮಾಡಲು ಸಾಧ್ಯವಾಗದ್ದನ್ನು, ದೇವೇಂದ್ರ ಫಡ್ನವೀಸ್ ಮಾಡಿದರು. ನಮ್ಮನ್ನು ಒಟ್ಟುಗೂಡಿಸಿದರು” ಎಂದು ಹೇಳಿದ್ದಾರೆ. ಹಾಗೆಯೇ, “ನಿಮಗೆ ವಿಧಾನಸಭೆಯಲ್ಲಿ ಅಧಿಕಾರವಿರಬಹುದು, ನಮಗೆ ರಸ್ತೆಗಳಲ್ಲಿ ಅಧಿಕಾರವಿದೆ” ಎಂದೂ ಹೇಳಿದರು.

“ಈ ತ್ರಿಭಾಷಾ ಸೂತ್ರ ಕೇಂದ್ರ ಸರ್ಕಾರ ತಂದಿರುವುದು. ಇಂದು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಎಲ್ಲ ಪ್ರಕ್ರಿಯೆ ಇಂಗ್ಲೀಷ್‌ನಲ್ಲಿದೆ. ಅದು ಯಾವುದೇ ಬೇರೆ ರಾಜ್ಯದಲ್ಲಿರುವುದು ಅಲ್ಲ. ಮಹಾರಾಷ್ಟ್ರ ಎಚ್ಚರವಾದಾಗ, ಏನಾಗುತ್ತದೆ ಎಂದು ನೀವು ನೋಡುತ್ತೀರಿ. ಮುಂಬೈ ಅಥವಾ ಮಹಾರಾಷ್ಟ್ರದ ಮೇಲೆ ನಿಮ್ಮ ಕೈ ಹಾಕಲು ಪ್ರಯತ್ನಿಸಿದರೆ ಏನಾಗುತ್ತದೆ ಎಂದು ನೋಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

2005ರಲ್ಲಿ ಮಾಲ್ವನ್ ವಿಧಾನಸಭಾ ಉಪಚುನಾವಣೆ ಪ್ರಚಾರದ ಸಮಯದಲ್ಲಿ ರಾಜ್ ಮತ್ತು ಉದ್ಧವ್ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಬಳಿಕ ಆಂತರಿಕ ಭಿನ್ನಾಭಿಪ್ರಾಯಗಳ ಕಾರಣ ರಾಜ್ ಠಾಕ್ರೆ ಶಿವಸೇನೆಯನ್ನು ತೊರೆದರು. 2005ರ ನವೆಂಬರ್‌ನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ ತಮ್ಮ ಚಿಕ್ಕಪ್ಪ ಸ್ಥಾಪಿಸಿದ ಶಿವಸೇನೆಗೆ ರಾಜೀನಾಮೆ ನೀಡುವುದಾಗಿ ಭಾವನಾತ್ಮಕವಾಗಿ ಹೇಳಿದ್ದರು. “ನಾನು ಕೇಳಿದ್ದು ಗೌರವ ಮಾತ್ರ. ನನಗೆ ಸಿಕ್ಕಿದ್ದು ಅವಮಾನ ಮಾತ್ರ” ಎಂದು ಠಾಕ್ರೆ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...