ಧಾರವಾಡ | ಪಾಲಿಕೆ ಮೇಯರ್ ಹುದ್ದೆ ಮತ್ತೆ ಬಿಜೆಪಿ ಪಾಲು

Date:

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ವೀಣಾ ಭರದ್ವಾಡ ಆಯ್ಕೆಯಾಗಿದ್ದಾರೆ. ವೀಣಾ ಅವರು ಪಾಲಿಕೆಯ 22ನೇ ಮೇಯರ್‌ ಆಗಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ.

- Advertisement -

ಮಂಗಳವಾರ, ಪಾಲಿಕೆಯ ಮೇಯರ್ ಹುದ್ದೆಗೆ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ವೀಣಾ ಭರದ್ವಾಡ ಅವರು 46 ಮತಗಳನ್ನು ಪಡೆದು, ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಇನ್ನು , ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸುವರ್ಣ ಕಲ್ಲಕುಂಟ್ಲ 37 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಹಿಂದಿನ ಮೇಯರ್ ಆಗಿದ್ದ ಈರೇಶ ಅಂಚಟಗೇರಿ ಅವರು ನೂತನ ಮೇಯರ್‌ಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಾರಿ ಮೇಯರ್ ಹುದ್ದೆಯನ್ನು ಕಾಂಗ್ರೆಸ್‌ ಪಡೆದುಕೊಳ್ಳಬಹುದು ಎಂದು ಹೇಳಲಾಗುತ್ತಿತ್ತು. ಲಿಂಗಾಯತ ಸಮುದಾಯ ಪ್ರಭಾವಿ ನಾಯಕ ಜಗದೀಶ್‌ ಶೆಟ್ಟರ್‌ ಇತ್ತೀಚೆಗೆ ಬಿಜೆಪಿ ತೆರೆದು ಕಾಂಗ್ರೆಸ್‌ ಸೇರಿದ್ದರು. ಹೀಗಾಗಿ, ಪಾಲಿಕೆಯಲ್ಲಿರುವ ಶೆಟ್ಟರ್‌ ಬೆಂಬಲಿತ ಬಿಜೆಪಿ ಸದಸ್ಯರು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಚಲಾಯಿಸಬಹುದು ಅಥವಾ ಮತದಾನದಿಂದ ದೂರ ಉಳಿಯಬಹುದು ಎಂದು ಅಂದಾಜಿಸಲಾಗಿತ್ತು.

ಅವರು ಮತದಾನದಿಂದ ದೂರ ಉಳಿದರೂ ಕಾಂಗ್ರೆಸ್‌ಗೆ ಗೆಲುವಿನ ಹಾದಿ ಸುಲಭವೆಂಬ ಲೆಕ್ಕಾಚಾರಗಳೂ ರಾಜಕೀಯ ವಲಯದಲ್ಲಿ ಕೇಳಿಬಂದಿದ್ದವು. ಇದೆಲ್ಲದರ ನಡುವೆಯೇ ಚುನಾವಣೆ ನಡೆದಿದ್ದು, ಯಾವುದೇ ಅಡ್ಡ ಮತದಾನ ಅಥವಾ ಗೈರಾಗದ ಕಾರಣ ಬಿಜೆಪಿ ಮತ್ತೆ ಪಾಲಿಕೆಯ ಮೇಯರ್ ಹುದ್ದೆಯನ್ನು ತನ್ನದಾಗಿಸಿಕೊಂಡಿದೆ.

ಬಿಜೆಪಿ ಮುಖಂಡನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಿಸಲು ಕೋರ್ಟ್‌ ಅನುಮತಿ ನೀಡದ ಕಾರಣ, ಅವರು ಮತದಾನದಿಂದ ದೂರು ಉಳಿದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...