ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಅವಕಾಶ ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯ ಈ ಹಿಂದೆಯೇ ನಿರ್ಬಂಧ ಹೇರಿದೆ. ಮತದಾನದಲ್ಲಿ ಭಾಗವಹಿಸುವ ಸಂಬಂಧ ಅವಕಾಶ ಕೋರಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತದಾನಕ್ಕೆ ಅವಕಾಶ ನೀಡಿಲ್ಲ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಯೋಗೀಶ್ ಗೌಡ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ತನಿಖೆಯಲ್ಲಿ ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಕೈವಾಡ ಇರುವುದು ತಿಳಿದುಬಂದಿತ್ತು. ಅದರಿಂದ, ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿಯವರನ್ನು ಬಂಧಿಸಿದ್ದರು. ಅವರು ಪ್ರಭಾವಿ ಮುಖಂಡರಾಗಿರುವುದರಿಂದ ಅವರಿಗೆ ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ನ್ಯಾಯಾಲಯ ನಿರ್ಬಂಧ ಹೇರಿತ್ತು.
