ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ: ಸಚಿವ ದಿನೇಶ್ ಗುಂಡೂರಾವ್

Date:

Advertisements
  • ಸದ್ಯಕ್ಕೆ ಡಯಾಲಿಸಿಸ್ ಸೇವೆ ಆಸ್ಪತ್ರೆ ಸಿಬ್ಬಂದಿಗಳಿಂದ ನಿರ್ವಹಿಸಲು ಸೂಚನೆ
  • ‘ಏಜನ್ಸಿಯವರಿಂದ ಸಿಬ್ಬಂದಿಗಳಿಗೆ ಕೆಲವು ಬಾಕಿ ವೇತನ ಕೊಡಿಸಲಾಗಿದೆ’

ಡಯಾಲಿಸಿಸ್ ಆರೋಗ್ಯ ಸೇವೆಯಲ್ಲಿ ಸಮಸ್ಯೆಯಾಗಲು ಮೂಲ ಕಾರಣ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿರುವ ಎರಡು ಏಜನ್ಸಿಗಳು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ನಾನು ಆರೋಗ್ಯ ಸಚಿವನಾದ ಬಳಿಕ ಡಯಾಲಿಸಿಸ್ ಕೇಂದ್ರಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡಿ ಕೆಲಸ ಮಾಡುತ್ತಿರುವೆ” ಎಂದರು.

“ಹಿಂದಿನ ಸರ್ಕಾರ ಎರಡು ಏಜೆನ್ಸಿಯವರಿಗೆ ಡಯಾಲಿಸಿಸ್ ನಿರ್ವಹಣೆಗೆ ಕೊಟ್ಟಿತ್ತು. ಅದರಲ್ಲಿ ಬಿಆರ್‌ಎಸ್‌ನವರು ಅರ್ಧದಲ್ಲೇ ಕಾರ್ಯ ಸ್ಥಗಿತಗೊಳಿಸಿದ್ದರು. ಬಳಿಕ ಇಎಸ್‌ಕೆಇಜಿ ಸಂಸ್ಥೆಯವರಿಗೆ ನೀಡಲಾಗಿತ್ತು. ಈ ಸಂಸ್ಥೆಯವರು ಡಯಾಲಿಸಿಸ್ ಕೇಂದ್ರಗಳನ್ನ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂಬುದರ ಬಗ್ಗೆ ಸಾರ್ವಜನಿಕರು ಹಾಗೂ ಸಿಬ್ಬಂದಿಗಳಿಂದ ಸಾಕಷ್ಟು ದೂರುಗಳು ಬಂದಿದ್ದವು” ಎಂದರು.

Advertisements

“ಡಯಾಲಿಸಿಸ್ ಕೇಂದ್ರಗಳಲ್ಲಿ ವೈದ್ಯರನ್ನ ನೇಮಿಸಿರಲಿಲ್ಲ. ಅಲ್ಲದೇ ಏಜೆನ್ಸಿಯವರು ಸಿಬ್ಬಂದಿಗಳಿಗೆ ಸಂಬಳ ಸರಿಯಾಗಿ ಕೊಡುತ್ತಿರಲಿಲ್ಲ. ಇಎಸ್ಸೈ, ಪಿಎಫ್ ಕಟ್ಟಿರಲಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು” ಎಂದು ತಿಳಿಸಿದರು.

“ಡಯಾಲಿಸಿಸ್ ಆರೋಗ್ಯ ಸೇವೆ ಸಮರ್ಪಕವಾಗಿ ನಡೆಸುವ ನಿಟ್ಟಿನಲ್ಲಿ ನಾವು ನಾಲ್ಕು ವಿಭಾಗವಾರು ಹೊಸ ಟೆಂಡರ್ ದಾರರನ್ನ ಆಹ್ವಾನಿಸಿ, ಬಹುತೇಕ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದ್ದೇವೆ.‌ ರಾಜ್ಯದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳ ಡಯಾಲಿಸಿಸ್ ಕೇಂದ್ರಗಳಲ್ಲಿ ಪಿಪಿಪಿ ಮಾದರಿಯಲ್ಲಿ ಹೊಸ ಯಂತ್ರಗಳನ್ನ ಅಳವಡಿಸಲು ಕ್ರಮವಹಿಸಲಾಗಿದೆ. ಸೊಂಕು ರಹಿತವಾದ, ಏಕ ಬಳಕೆಯ ಸುಮಾರು 800 ಡಯಾಲಿಸಿಸ್ ಯಂತ್ರಗಳನ್ನ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೇ 50ರಷ್ಟು ಮಹಿಳಾ ಮುಖ್ಯಮಂತ್ರಿಗಳು!- ಹೇಳಿಕೆಯಾಗೇ ಉಳಿಯದಿರಲಿ, ಅನುಷ್ಠಾನಕ್ಕೂ ಬರಲಿ

“ಹೊಸ ಏಜನ್ಸಿಯವರು ಹೊಸ ಯಂತ್ರಗಳನ್ನ ಹಾಕಿ ಸೇವೆ ಆರಂಭಿಸಬೇಕು. ಒಂದು ವೇಳೆ ಇವರು ಯಂತ್ರಗಳನ್ನ ಹಾಕಲು ಮುಂದೆ ಬರಲ್ಲ ಎಂಬ ಶಂಕೆಗಳು ವ್ಯಕ್ತವಾದರೆ, ಪರ್ಯಾಯ ಮಾರ್ಗವಾಗಿ ಸರ್ಕಾರವೇ ಯಂತ್ರಗಳನ್ನ ಖರೀದಿಸಿ ಇಲಾಖೆಯಿಂದಲೇ ಡಯಾಲಿಸಿಸ್ ನಿರ್ವಹಣೆ ಮಾಡಬೇಕಾಗುತ್ತದೆ. ಈ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ” ಎಂದರು.

“ನಾವು ಸಿಬ್ಬಂದಿಗಳ ಪರವಾಗಿಯೇ ಇದ್ದೇವೆ. ಏಜನ್ಸಿಯವರು ವೇತನ ನೀಡದಿರುವುದು ನನ್ನ ಗಮನಕ್ಕೆ ಬಂದಾಗ ನಾವು ಮಧ್ಯಪ್ರವೇಶ ಮಾಡಿ ಸಿಬ್ಬಂದಿಗಳು ಹಾಗೂ ಸಂಸ್ಥೆಯವರೊಂದಿಗೆ ಚರ್ಚಿಸಿ ವೇತನ ಕೊಡಿಸುವ ಕೆಲಸ ಮಾಡಿದ್ದೇವೆ. ESI, PF ಅನ್ನ ಸಂಸ್ಥೆಯವರು ಕೊಡಬೇಕು. ಎರಡು ಸಂಸ್ಥೆಯವರನ್ನ ಕಪ್ಪು ಪಟ್ಟಿಗೆ ಸೇರಿಸಿ ಬಾಕಿ ಇರುವ ESI, PF ಅನ್ನ ಸಿಬ್ಬಂದಿಗಳಿಗೆ ಕೊಡಿಸುವಂತೆ ಅಧಿಕಾರಿಗಳು ಜೊತೆ ಚರ್ಚಿಸಿದ್ದೇನೆ” ಎಂದು ಹೇಳಿದರು.

“ವ್ಯವಸ್ಥೆ ಸರಿಪಡಿಸುವತ್ತ ಕಾರ್ಯ ನಿರ್ವಹಿಸುತ್ತಿರುವಾಗ ಡಯಾಲಿಸಿಸ್ ಸಿಬ್ಬಂದಿಗಳು ಸಹಕರಿಸಬೇಕು. ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು. ಸದ್ಯಕ್ಕೆ ಡಯಾಲಿಸಿಸ್ ಸೇವೆಯನ್ನ ಆರೋಗ್ಯ ಸಿಬ್ಬಂದಿಗಳಿಂದಲೇ ನಿರ್ವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X