ಕುಕ್ಕರ್ ಬಾಂಬ್ ಸ್ಫೋಟವಾದಾಗ ಬಿಜೆಪಿಗರು ತುಷ್ಟೀಕರಣ ಮಾಡಿದ್ದರಾ: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

Date:

”ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ. ಸ್ಫೋಟವಾಗಿರುವುದು ನಿಜ. ಬಿಜೆಪಿ ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ?” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

- Advertisement -

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್‌ನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಂಗಳೂರು ಕುಕ್ಕರ್ ಬಾಂಬ್ ಹಾಗೂ ಈ ಸ್ಫೋಟಕ್ಕೂ ಸಾಮ್ಯತೆ ಇರುವ ಬಗ್ಗೆ ಕೇಳಿದ ಸುದ್ದಿಗಾರರ ಪ್ರಶ್ನೆಗೆ ತನಿಖೆ ನಡೆಯುತ್ತಿದೆ ಎಂದು ಉತ್ತರಿಸಿದರು.

ಕೆಫೆ

”ಅಲ್ಪಸಂಖ್ಯಾತರ ತುಷ್ಟೀಕರಣದಿಂದಾಗಿ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂದು ಬಿಜೆಪಿಗರು ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ಅವರ ಕಾಲದಲ್ಲಿಯೂ ಬಾಂಬ್ ಸ್ಪೋಟವಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟವಾದಾಗ ಏನು ಮಾಡಿದ್ದರು? ಆಗಲೂ ತುಷ್ಟೀಕರಣದಿಂದಾಗಿ ಆಗಿತ್ತೇ?” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ನಾಲ್ವರು ಶಂಕಿತರು ಪೊಲೀಸ್‌ ವಶಕ್ಕೆ

”ಸ್ಪೋಟದ ಘಟನೆಯನ್ನು ಖಂಡಿಸುತ್ತೇನೆ. ಇದರಲ್ಲಿ ರಾಜಕಾರಣ ಮಾಡಬಾರದು. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ” ಎಂದರು.

ಆಸ್ಪತ್ರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ಮೈಸೂರಿನ‌ ತಮ್ಮ‌ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಪೊಲೀಸ್ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ, ಬೆಂಗಳೂರಿಗೆ ಆಗಮಿಸಿದ ಅವರು ಬ್ರೂಕ್ ವೆಲ್ ಫೀಲ್ಡ್ ಆಸ್ಪತ್ರೆ ಮತ್ತು ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟದಲ್ಲಿ ಗಾಯಗೊಂಡವರನ್ನು ಮಾತಾಡಿಸಿದರು. ಇನ್ನು ರಾಮೇಶ್ವರ ಕೆಫೆಗೆ ಭೇಟಿ ನೀಡಿ ಘಟನಾ ಸ್ಥಳದ ಪರಿಶೀಲನೆ ನಡೆಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....