ವಿಜಯೇಂದ್ರನ್ನ ಅಧ್ಯಕ್ಷನನ್ನಾಗಿ ಮಾಡಿ ಅಂತ ಕೇಳಿರಲಿಲ್ಲ, ನಿರೀಕ್ಷೆಯೂ ಇರಲಿಲ್ಲ : ಬಿ ಎಸ್ ಯಡಿಯೂರಪ್ಪ

Date:

‘ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತಾನೆ ಎಂಬ ನಿರೀಕ್ಷೆಯೇ ಇರಲಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್ ಶುಕ್ರವಾರ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಬಳಿಕ ಮೊದಲ ಪ್ರತಿಕ್ರಿಯೆ ಈ ರೀತಿ ನೀಡಿದ್ದಾರೆ‌.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು ರಾಜ್ಯದ ಬಿಜೆಪಿ ಅಧ್ಯಕ್ಷರಾದ ಬಳಿಕ ರಾಜ್ಯದ ಉದ್ದಗಲಕ್ಕೂ ಇರುವ ಕಾರ್ಯಕರ್ತರು ಕುಣಿದು ಕುಪ್ಪಳಿಸುತ್ತಿದ್ದಾರೆ. ಬಹಳ ಸೂಕ್ತವಾದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ ಪಿ ನಡ್ಡಾ ಅವರು ಬಹಳ ದಿವಸಗಳ ನಂತರ ಒಂದು ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಇದು ಎಲ್ಲ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಕಾರಣವಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲೆಡೆ ಪ್ರವಾಸ ಮಾಡಲಿದ್ದೇನೆ’ ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಂದಿನ ಲೋಕಸಭಾ ಚುನಾವಣೆಯು ನಮ್ಮ ಗುರಿಯಾಗಿದೆ. ರಾಜ್ಯದಲ್ಲಿ 25ಕ್ಕೂ ಹೆಚ್ಚು ಲೋಕಸಭಾ ಸ್ಥಾನ ಗೆಲ್ಲಬೇಕೆಂಬ ಗುರಿ ಇಟ್ಟಿದ್ದೇವೆ. ಮೋದಿ ಮತ್ತೆ ಪ್ರಧಾನಿಯಾಗಲು ಒಟ್ಟಾಗಿ ಕೆಲಸ ಮಾಡುತ್ತೇವೆ. ಆ ದಿಕ್ಕಿನಲ್ಲಿ ಈಗಾಗಲೇ ಕೆಲಸ ಪ್ರಾರಂಭ ಮಾಡಿದ್ದೇವೆ. ಇನ್ನಷ್ಟು ಮಾಡಬೇಕಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ‌ನೀಡಿದ್ದಾರೆ.

ವಿಜಯೇಂದ್ರ ನೇಮಕವಾಗುವ ಬಗ್ಗೆ ನಿರೀಕ್ಷೆ ಇತ್ತೇ? ಎಂದು ಪತ್ರಕರ್ತರು ಕೇಳಿದ್ದಕ್ಕೆ ಉತ್ತರಿಸಿದ ಬಿ ಎಸ್ ವೈ, ನಾವ್ಯಾರೂ ಈ ಆಯ್ಕೆ ಬಗ್ಗೆ ನಿರೀಕ್ಷೆಯೇ ಮಾಡಿರಲಿಲ್ಲ. ‌ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ. ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಮಾಡಿ ಎಂದು ಒಂದು ದಿನಾನೂ ದೆಹಲಿಯಲ್ಲಿ ಕೇಳಿಲ್ಲ. ಯಾರನ್ನು ಬೇಕಾದರೂ ವಿಚಾರಿಸಿ. ಅಂತಿಮ ತೀರ್ಮಾನವನ್ನು ತೆಗೆದುಕೊಂಡಿರುವುದು ಬಿಜೆಪಿ ಹೈಕಮಾಂಡ್ ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್...

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ...