ಭಾನುವಾರ ಬೆಂಗಳೂರಲ್ಲಿ ದಿಗ್ಗಜರ ರೋಡ್ ಶೋ: ರಾಹುಲ್ – ಮೋದಿ ಮುಖಾಮುಖಿ

Date:

  • ಪ್ರಧಾನಿ ಮೋದಿ ರೋಡ್ ಶೋನಲ್ಲಿ ಬದಲಾವಣೆ
  • ಒಂದೇ ದಿನ ಇಬ್ಬರು ನಾಯಕರ ರೋಡ್‌ ಶೋ

ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಆರು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ನಡುವೆ, ಕುತೂಹಲಕಾರಿ ಬೆಳವಣಿಗೆಯೊಂದಕ್ಕೆ ರಾಜ್ಯ ರಾಜಧಾನಿ ಬೆಂಗಳೂರು ಸಾಕ್ಷಿಯಾಗಲಿದೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಂದೇ ದಿನ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರಿಗರು ಭಾನುವಾರ ದೆಹಲಿಯ ಇಬ್ಬರು ನಾಯಕರ ರ್‍ಯಾಲಿಗೆ ಸಾಕ್ಷಿಯಾಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪ್ರಧಾನಿ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಶನಿವಾರ ಸಂಜೆ ರೋಡ್‌ ಶೋ ಹಮ್ಮಿಕೊಂಡಿದ್ದರು. ರಾಹುಲ್ ಗಾಂಧಿ ಭಾನುವಾರ ರ್‍ಯಾಲಿ ಹಮ್ಮಿಕೊಂಡಿದ್ದರು. ಆದರೆ, ಮೋದಿಯವರು ತಮ್ಮ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದು, ಶನಿವಾರ ಮತ್ತು ಭಾನುವಾರ ಮುಂಜಾನೆ ಬೆಂಗಳೂರಿಗರತ್ತ ಕೈಬೀಸಲಿದ್ದಾರೆ.

ಮೋದಿಯವರ ಮೇ 6ರ ಪ್ರಚಾರಕ್ಕೆ ಸೆಡ್ಡು ಹೊಡೆಯಲು ಸಜ್ಜಾಗಿದ್ದ ಕಾಂಗ್ರೆಸ್ ಪ್ರಚಾರದ ಅಖಾಡಕ್ಕೆ ರಾಹುಲ್ ಗಾಂಧಿ ಅವರನ್ನು ಇಳಿಸಿತ್ತು. ಮೋದಿ ಅವರ ಕಾರ್ಯಕ್ರಮದ ಬದಲಾವಣೆಯಿಂದ ಮೋದಿ ಅವರ ಪ್ರಚಾರದ ದಿನವೇ ರಾಹುಲ್ ಗಾಂಧಿ ರೋಡ್‌ ಶೋ ನಡೆಸಲಿದ್ದಾರೆ.

ಈಗಾಗಲೇ ಮೋದಿ ಅವರ ರೋಡ್‌ ಶೋಗಳಿಂದ ಉಂಟಾಗುತ್ತಿರುವ ವಾಹನ ದಟ್ಟಣೆಗೆ ಬೆಂಗಳೂರಿನ ನಾಗರಿಕರು ಹೈರಾಣಾಗಿದ್ದಾರೆ. ಇದರ ನಡುವೆಯೇ ಮೋದಿ ಎರಡು ದಿನಗಳ ಕಾಲ ರೋಡ್‌ ಶೋ ನಡೆಸಲಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ.

ರಾಜ್ಯ ವಿಧಾನಸಭಾ ಅಖಾಡ ರಂಗೇರುತ್ತಿರುವ ನಡುವೆ ದೆಹಲಿಯ ಇಬ್ಬರು ದಿಗ್ಗಜರು ಒಂದೇ ದಿನ ರೋಡ್ ಶೋ ನಡೆಸುತ್ತಿದ್ದು, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.

ಶನಿವಾರವಷ್ಟೇ ಇದ್ದ ಮೋದಿ ಅವರ ರೋಡ್‌ ಶೋ ಎರಡನೇ ದಿನಕ್ಕೆ ವಿಸ್ತರಿಸಿದ್ದು, ರಾಹುಲ್ ಗಾಂಧಿ ಅವರ ಪ್ರಚಾರದಿಂದ ಕಾಂಗ್ರೆಸ್‌ಗೆ ಆಗುವ ಲಾಭಕ್ಕೆ ಕಡಿವಾಣ ಹಾಕಲು ಬಿಜೆಪಿ ಇಂತಹದೊಂದು ತಂತ್ರ ಹೂಡಿದೆ ಎನ್ನಲಾಗಿದೆ. ಬೆಂಗಳೂರಿನ ಗಮನ ಕೇಂದ್ರಿಕರಿಸಲು ಮೋದಿ ಎರಡು ದಿನ ಬೆಂಗಳೂರಿನಲ್ಲಿ ಮೊಕ್ಕಾಂ ಹೂಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯನವರ ವರುಣದಲ್ಲಿ ಕಂಡ ಮುಖಗಳು

ಚುನಾವಣೆ ಸಮೀಪಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ. ರಾಜ್ಯದಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂದು ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ನಡೆಸುತ್ತಿದ್ದಾರೆ.

ರಾಹುಲ್ ಗಾಂಧಿ ಅವರು ಸಹ ರಾಜ್ಯ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದು, ಕಾಂಗ್ರೆಸ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಲು ಶ್ರಮಿಸುತ್ತಿದ್ದಾರೆ.

ಮೇ 6ರಂದು ಸೋನಿಯಾ ಗಾಂಧಿ ರೋಡ್ ಶೋ

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಚುನಾವಣಾ ಘೋಷಣೆಯಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪರವಾಗಿ ಮತಭೇಟೆಗೆ ಮಂದಾಗಿದ್ದಾರೆ.

ಸೋನಿಯಾ ಗಾಂಧಿ ಮೇ 6ರಂದು ಹುಬ್ಬಳ್ಳಿಯಲ್ಲಿ ಬೃಹತ್ ರ್‍ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೊದಲ ಬಾರಿಗೆ ಸೋನಿಯಾ ಗಾಂಧಿ ಪ್ರಚಾರ ನಡೆಸುತ್ತಿದ್ದು, ಹುಬ್ಬಳ್ಳಿಯಲ್ಲಿ ಭಾರೀ ಜನ ಸೇರುವ ನಿರೀಕ್ಷೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...