‘ಡಿಜಿಟಲ್ ಇಂಡಿಯಾ’ | ಚುನಾವಣಾ ಬಾಂಡ್ ಮಾಹಿತಿ ನೀಡಲು ಅಧಿಕ ಸಮಯವೇಕೆ?

Date:

Advertisements

ಸುಪ್ರೀಂ ಕೋರ್ಟ್ ಚುಣಾವಣಾ ಬಾಂಡ್ಅನ್ನು ಅಸಾಂವಿಧಾನಿಕ ಎಂದು ಹೇಳಿದೆ. ಬಾಂಡ್‌ನ ಎಲ್ಲ ಮಾಹಿತಿಯನ್ನು ಬಹಿರಂಗಪಡಿಸುವಂತೆ ದೇಶದ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ’ಗೆ (ಎಸ್‌ಬಿಐ) ತಿಳಿಸಿದೆ. ಆದರೆ, ಎಸ್‌ಬಿಐ ಮಾತ್ರ ಚುನಾವಣಾ ಬಾಂಡ್‌ನ ಎಲ್ಲ ಮಾಹಿತಿ ನೀಡಲು ನಾಲ್ಕು ತಿಂಗಳ ಅವಕಾಶ ಕೇಳಿದೆ. ಆದರೆ, ಈ ಡಿಜಿಟಲ್ ಇಂಡಿಯಾದಲ್ಲಿ ಒಂದೇ ಕ್ಲಿಕ್‌ನಲ್ಲಿ ಎಲ್ಲ ಮಾಹಿತಿ ಲಭಿಸುವಾಗ ಬ್ಯಾಂಕ್‌ಗೆ ಚುನಾವಣೆ ಮುಗಿಯುವವರೆಗೂ ಸಮಯ ಯಾಕೆ ಬೇಕು ಎಂದು ವಿಪಕ್ಷಗಳು ಪ್ರಶ್ನಿಸುತ್ತಿವೆ.

ಚುನಾವಣಾ ಬಾಂಡ್‌ ಅನ್ನು ಖರೀದಿ ಮಾಡಿದವರ ಹೆಸರು, ಬಾಂಡ್ ಮೊತ್ತ, ಯಾವ ಪಕ್ಷಕ್ಕೆ ಬಾಂಡ್‌ ಖರೀದಿಸಲಾಗಿದೆ, ಯಾವ ದಿನಾಂಕ ಖರೀದಿ ಮಾಡಲಾಗಿದೆ, ಯಾವ ವರ್ಷದಲ್ಲಿ ಎಂಬ ಎಲ್ಲ ಮಾಹಿತಿ ನೀಡಬೇಕು. ಆ ಎಲ್ಲ ಮಾಹಿತಿಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮಾರ್ಚ್ 13ರ ಒಳಗಾಗಿ ಬಹಿರಂಗಪಡಿಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಆದರೆ, ಎಲ್ಲ ಮಾಹಿತಿಯನ್ನು ಬಹಿರಂಗಪಡಿಸಲು ಜೂನ್ 30ರವರೆಗೆ ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಸೋಮವಾರ ಮನವಿ ಮಾಡಿದೆ. ಡೇಟಾ ಡೀಕೋಡ್ ಮಾಡಿ ದೇಣಿಗೆ ಪಡೆದವರ ಮಾಹಿತಿಯನ್ನು ಪಡೆಯುವುದು ಅತೀ ‘ಸಂಕೀರ್ಣವಾದ ಪ್ರಕ್ರಿಯೆ’ ಎಂದು ಎಸ್‌ಬಿಐ ಹೇಳಿಕೊಂಡಿದೆ. ಈ ಸಂದರ್ಭದಲ್ಲೇ ‘ಡಿಜಿಟಲ್ ಇಂಡಿಯಾದ ಒಂದೇ ಕ್ಲಿಕ್‌ನಲ್ಲಿ ಎಲ್ಲ ಮಾಹಿತಿ’ ಎಂಬ ಕೇಂದ್ರದ ಪ್ರಚಾರವನ್ನು ವಿಪಕ್ಷಗಳು ಪ್ರಶ್ನಿಸಲು ಆರಂಭಿಸಿವೆ.

Advertisements

ಆಡಳಿತಾರೂಢ ಬಿಜೆಪಿ, ಈ ಚುನಾವಣಾ ಬಾಂಡ್‌ ಎಂಬ ರಹಸ್ಯ ಯೋಜನೆಯ ಅತೀ ದೊಡ್ಡ ಫಲಾನುಭವಿ. 2022-2023ರ ಕೊನೆಯಲ್ಲಿ ಈ ಚುನಾವಣಾ ಬಾಂಡ್ ಮೂಲಕ 12,000 ಕೋಟಿ ರೂಪಾಯಿ ದೇಣಿಗೆಯನ್ನು ವಿವಿಧ ರಾಜಕೀಯ ಪಕ್ಷಗಳಿಗೆ ನೀಡಲಾಗಿದ್ದು, ಈ ಪೈಕಿ ಬಿಜೆಪಿಗೆ 6,500 ಕೋಟಿ ರೂಪಾಯಿ ನೀಡಲಾಗಿದೆ.

ಮೋದಿ ಸರ್ಕಾರದ ‘ಅನುಮಾನಾಸ್ಪದ ಡೀಲ್’

ಎಸ್‌ಬಿಐಗೆ ಲೋಕ ಸಭೆ ಚುನಾವಣೆ ಮುಗಿಯುವವರೆಗೆ ಅಂದರೆ ನಾಲ್ಕು ತಿಂಗಳುಗಳ ಅವಧಿ ಯಾಕೆ ಬೇಕು ಎಂದು ವಿಪಕ್ಷಗಳು ಪ್ರಶ್ನಿಸಿದೆ. ಈಗ ನರೇಂದ್ರ ಮೋದಿ ಸರ್ಕಾರ ತನ್ನ ‘ಅನುಮಾನಾಸ್ಪದ ಡೀಲಿಂಗ್’ ಯಾರಿಗೂ ತಿಳಿಯದಂತೆ ಮುಚ್ಚಿಡಲು ಎಸ್‌ಬಿಐ ಅನ್ನು ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. “ಕೇವಲ 24 ಗಂಟೆಯಲ್ಲೇ 44,434ರಷ್ಟು ಡೇಟಾವನ್ನು ಪಡೆದುಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ. ಹಾಗಿರುವಾಗ ಎಸ್‌ಬಿಐಗೆ ನಾಲ್ಕು ತಿಂಗಳುಗಳ ಅವಕಾಶ ಯಾಕೆ ಬೇಕು,” ಎಂದು ಪ್ರಶ್ನಿಸಿದ್ದಾರೆ.

ಆಮ್‌ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್, “ಎಲ್ಲವೂ ಕಂಪ್ಯೂಟರೀಕರಣ ಆಗಿರುವಾಗ ಯಾವೆಲ್ಲ ಕಾರ್ಪೋರೇಟ್‌ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ (ಮುಖ್ಯವಾಗಿ ಬಿಜೆಪಿಗೆ) ದೇಣಿಗೆಯನ್ನು ನೀಡಿದೆ ಎಂದು ತಿಳಿಸಲು ಎಸ್‌ಬಿಐಗೆ ಇನ್ನೂ ನಾಲ್ಕು ತಿಂಗಳುಗಳ ಅವಕಾಶ ಬೇಕು,” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.


ಮೋದಿಯ ಡಿಜಿಟಲ್ ಇಂಡಿಯಾಕ್ಕೆ ಎಸ್‌ಬಿಐ ಅವಮಾನ

ಇನ್ನು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಇದನ್ನು ‘ಕಾನೂನಾತ್ಮಕ ರಾಜಕೀಯ ಭ್ರಷ್ಟಾಚಾರ’ ಎಂದು ಕರೆದಿದ್ದಾರೆ. “ಡೇಟಾ ಈಗಲೇ ಇರುವಾಗ ಎಸ್‌ಬಿಐಗೆ ಚುನಾವಣೆ ಮುಗಿಯುವರೆಗೆ ಯಾಕೆ ಸಮಯ ಬೇಕು,” ಎಂದು ಪ್ರಶ್ನಿಸಿದ್ದಾರೆ. ಇನ್ನು ಶಿವಸೇನೆ ನಾಯಕ ಸಂಜಯ್ ರಾವತ್, “ಡೇಟಾ ನೀಡಲು ನಾಲ್ಕು ತಿಂಗಳ ಅವಕಾಶ ಕೇಳಿ ಮೋದಿಜಿಯ ಡಿಜಿಟಲ್ ಇಂಡಿಯಾಕ್ಕೆ ಅವಮಾನ ಮಾಡಿದ ಎಸ್‌ಬಿಐನ ಚೇರ್‌ಮನ್ ಮತ್ತು ನಿರ್ದೇಶಕರಿಗೆ ಶಿಕ್ಷೆಯಾಗಬೇಕು,” ಎಂದು ವ್ಯಂಗ್ಯವಾಡಿದ್ದಾರೆ.

ಟಿಎಂಸಿಯ ಮಹುವಾ ಮೊಯಿತ್ರಾ, “ಖಂಡಿತವಾಗಿಯೂ ಮುನ್ನ ಬಿಜೆಪಿಗೆ ಯಾರೆಲ್ಲ ದೇಣಿಗೆ ನೀಡಿದ್ದಾರೆ ಎಂಬ ಮಾಹಿತಿ ಚುನಾವಣೆಗೂ ಮುನ್ನ ಬಹಿರಂಗವಾಗಬಾರದೆಂದು ರಾಷ್ಟ್ರೀಕೃತ ಬ್ಯಾಂಕ್ ಎಸ್‌ಬಿಐ ಪ್ರಯತ್ನಿಸುತ್ತಿದೆ,” ಎಂದು ಆರೋಪಿಸಿದ್ದಾರೆ. ಡಿಎಂಕೆ ನಾಯಕ ಪಿ ತ್ಯಾಗ ರಾಜನ್, ಸುಪ್ರೀಂ ಕೋರ್ಟ್ ವಕೀಲ, ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಸಾಮಾಜಿಕ ಕಾರ್ಯಕರ್ತೆ ಅಂಜಲಿ ಭಾರಧ್ವಾಜ್, ಹಿರಿಯ ವಕೀಲ ಪ್ರಶಾಂತ್ ಭೂಷಣ್, ಅಂಕಣಕಾರ ಸುಹಾಸ್ ಪಾಲ್ಶಿಕರ್ ಕೂಡಾ ಎಸ್‌ಬಿಐ ನಡೆಯನ್ನು ಪ್ರಶ್ನಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X