ಕಾಶ್ಮೀರ ಭಾರತದ ಕಿರೀಟ; ನಿಮ್ಮ ಮನ ಗೆಲ್ಲಲು ಬಂದಿದ್ದೇನೆ: 370ನೇ ವಿಧಿ ರದ್ದತಿ ಬಳಿಕ ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ

Date:

ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, “ಕಾಶ್ಮೀರ ಭಾರತದ ಕಿರೀಟ, ನಿಮ್ಮ ಮನ ಗೆಲ್ಲಲು ಬಂದಿದ್ದೇನೆ” ಎಂದು ತಿಳಿಸಿದರು.

ಕಾಶ್ಮೀರದ ರಾಜಧಾನಿ ಶ್ರೀನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಭಕ್ಷಿ ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಕೃಷಿ, ಪ್ರವಾಸೋದ್ಯಮ ಸೇರಿದಂತೆ ಹಲವು ರಂಗಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದರು.

“ವಿಶೇಷಾಧಿಕಾರ ರದ್ದತಿ ಬಳಿಕ ಕಾಶ್ಮೀರ ಅಭಿವೃದ್ದಿಯಲ್ಲಿ ಹೊಸ ಎತ್ತರಗಳನ್ನು ತಲುಪಿದೆ. ಜಮ್ಮು ಕಾಶ್ಮೀರ ಭಾರತದ ಕಿರೀಟ ಇದ್ದಂತೆ. ದಶಕಗಳಿಂದ ಕಾಶ್ಮೀರದ ಬಗ್ಗೆ ಇದ್ದ ಪೂರ್ವಾಗ್ರಹ ಅಂತ್ಯವಾಗಿದೆ. ಜಮ್ಮು ಕಾಶ್ಮೀರದ ಅಭಿವೃದ್ದಿ ಭಾರತದ ಮೊದಲ ಆದ್ಯತೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಮಲದ ಚಿಹ್ನೆಯೊಂದಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷವಾದ ನಂಟು ಇದೆ ಎಂದು ಹೇಳಿದರು. ಬಿಜೆಪಿ ಪಕ್ಷದ ಚಿಹ್ನೆಯಾದ ಕಮಲವು ಕಣಿವೆ ರಾಜ್ಯದ ಎಲ್ಲ ಕೆರೆಗಳಲ್ಲೂ ಕಾಣ ಸಿಗುತ್ತದೆ. ಕಾಶ್ಮೀರದ ಕ್ರಿಕೆಟ್ ಸಂಸ್ಥೆಯ ಲೋಗೋದಲ್ಲೂ ಕಮಲ ಇದೆ” ಎಂದು ಪ್ರಧಾನಿ ಮೋದಿ ಹೇಳಿದರು.

“ಆರ್ಟಿಕಲ್ 370 ರದ್ದತಿ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಜಮ್ಮು ಮತ್ತು ಕಾಶ್ಮೀರ ಮಾತ್ರವಲ್ಲ ಇಡೀ ದೇಶದ ಜನತೆಗೆ ದಾರಿ ತಪ್ಪಿಸಿತ್ತು ಎಂದು ಆರೋಪಿಸಿದ ಪ್ರಧಾನಿ ಮೋದಿ, ಇಂದು ಕಾಶ್ಮೀರ ಅಭಿವೃದ್ದಿ ಕಾಣುತ್ತಿದ್ದು, ಕಾಶ್ಮೀರದ ಯಶಸ್ಸಿನ ಗಾಥೆಯನ್ನು ಇಡೀ ವಿಶ್ವವೇ ನೋಡುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

‘ಮದುವೆಯಾಗಲು ಕಾಶ್ಮೀರಕ್ಕೆ ಬನ್ನಿ’ ಎಂದ ಪ್ರಧಾನಿ

ಸಿನಿಮಾ ಶೂಟಿಂಗ್‌ ಸೇರಿದಂತೆ ಹಲವು ಪ್ರವಾಸೋದ್ಯಮಕ್ಕೆ ಉತ್ತಮವಾದ ಸ್ಥಳ ಜಮ್ಮು ಮತ್ತು ಕಾಶ್ಮೀರ ಎಂದು ಭಾಷಣದಲ್ಲಿ ಉಲ್ಲೇಖಿಸಿದ ಪ್ರಧಾನಿ ಮೋದಿ, ‘ವೆಡ್ ಇನ್ ಇಂಡಿಯಾ’ ಎಂಬ ವಿಚಾರವನ್ನು ಪ್ರಸ್ತಾಪಿಸಿದರು.

“ದೇಶದ ನಿವಾಸಿಗಳಲ್ಲಿ ನನ್ನದೊಂದು ವಿನಂತಿ ಇದೆ. ನೀವು ಮದುವೆಯ ಸಂಭ್ರಮವನ್ನು ಆಚರಿಸಲು ಬೇರೆ ಬೇರೆ ದೇಶಗಳಿಗೆ ಹೋಗುವ ಬದಲು, ಕುಟುಂಬದೊಂದಿಗೆ ವಿಶಾಲವಾದ ಕಾಶ್ಮೀರಕ್ಕೆ ಬಂದು ಮದುವೆಯನ್ನು ಆಚರಿಸಿಕೊಳ್ಳಿ. ಇದರಿಂದಾಗಿ ಸ್ಥಳೀಯ ಜನರಿಗೂ ಉದ್ಯೋಗ ಸಿಕ್ಕಂತಾಗುತ್ತದೆ. ಹಾಗಾಗಿ, ಡೆಸ್ಟಿನೇಷನ್‌ ವೆಡ್ಡಿಂಗ್‌ಗೆ ಕಾಶ್ಮೀರವನ್ನು ಆಯ್ಕೆ ಮಾಡಿಕೊಳ್ಳಬೇಕು” ಎಂದು ಕರೆ ನೀಡಿದರು.

“ಭರವಸೆಗಳನ್ನು ಈಡೇರಿಸಲು ಮೋದಿ ಗ್ಯಾರಂಟಿ ನೀಡಲಾಗಿದೆ. ಮೋದಿಯ ಗ್ಯಾರಂಟಿ, ಪೂರ್ತಿಯಾಗುವ ಗ್ಯಾರಂಟಿ. ದಶಕಗಳಿಂದ ಕಾಶ್ಮೀರದ ಬಗ್ಗೆ ಇದ್ದ ಪೂರ್ವಗ್ರಹ ಅಂತ್ಯವಾಗಿದೆ. ಜಮ್ಮು ಕಾಶ್ಮೀರದ ಅಭಿವೃದ್ಧಿ, ಪ್ರವಾಸೋದ್ಯಮ ಈಗ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ” ಎಂದು ಪ್ರಧಾನಮಂತ್ರಿ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲ್ಯವಿವಾಹ | ಕರ್ನಾಟಕಕ್ಕೆ 2ನೇ ಸ್ಥಾನ: ನಾಚಿಕೆಗೇಡಿನ ಸಂಗತಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ಅತಿ ಹೆಚ್ಚು...

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಎನ್‌ಕೌಂಟರ್‌ಗೆ ಬಲಿ

ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ...

ಟ್ರಂಪ್ ಮೇಲೆ ಗುಂಡಿನ ದಾಳಿ: ಸ್ನೇಹಿತನ ಬಗ್ಗೆ ಕಳವಳಗೊಂಡಿದ್ದೇನೆ ಎಂದ ಮೋದಿಗೆ ನೆಟ್ಟಿಗರ ಪಾಠ

ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

"2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ,...